ಬ್ರೇಕಿಂಗ್ ನ್ಯೂಸ್
12-12-23 05:33 pm Bangalore Correspondent ಕ್ರೈಂ
ಬೆಂಗಳೂರು, ಡಿ 12: ಹೊಸ ವರ್ಷಾಚರಣೆ ಸಂದರ್ಭದಲ್ಲಿ ಮಾರಲು ಸಂಗ್ರಹಿಸಿಟ್ಟಿದ್ದ 21 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದ್ದು, ವಿದೇಶಿ ಪ್ರಜೆಯೊಬ್ಬನನ್ನು ಬಂಧಿಸಲಾಗಿದೆ.
ನಗರದ ಸಿಸಿಬಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
2023 ಮುಗಿದು 2024 ಆರಂಭವಾಗಲಿದೆ. ಡಿ. 31ರಂದು ರಾತ್ರಿ ಹೊಸ ವರ್ಷಾಚರಣೆಗೆ ಹಲವೆಡೆ ಪಾರ್ಟಿಗಳನ್ನು ಆಯೋಜಿಸಲಾಗುತ್ತಿದೆ. ಕೆಲ ಪಾರ್ಟಿಗಳಿಗೆ ಡ್ರಗ್ಸ್ ಪೂರೈಸಲು ಆರೋಪಿ ಸಜ್ಜಾಗಿದ್ದ' ಎಂದು ಕಮಿಷನರ್ ಬಿ.ದಯಾನಂದ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
'ಬಂಧಿತ ಆರೋಪಿ, ಪೆಡ್ಲರ್ ಆಗಿದ್ದಾನೆ. ತನ್ನದೇ ತಂಡ ಕಟ್ಟಿಕೊಂಡು ಡ್ರಗ್ಸ್ ಮಾರುತ್ತಿದ್ದ. ಈತನಿಂದ 16 ಕೆ.ಜಿ ಎಂಡಿಎಂಎ, 500 ಗ್ರಾಂ ಕೊಕೇನ್, ಮೂರು ತೂಕದ ಯಂತ್ರ, ಮೊಬೈಲ್ ಜಪ್ತಿ ಮಾಡಲಾಗಿದೆ' ಎಂದರು.
ವಿದೇಶಿ ಪ್ರಜೆಯಾಗಿರುವ ಆರೋಪಿಯು ಒಂದು ವರ್ಷದ ಹಿಂದೆ ಬ್ಯುಸಿನೆಸ್ ವೀಸಾ ಪಡೆದು ಭಾರತಕ್ಕೆ ಬಂದು, ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ. 2024ರ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಮಾದಕ ವ್ಯಸನಿಗಳಿಗೆ ನಿಷೇಧಿತ ಡ್ರಗ್ಸ್ ಮತ್ತು ಕೊಕೇನ್ ಅನ್ನು ಅತಿ ಹೆಚ್ಚು ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ದೆಹಲಿ, ಮುಂಬೈ ಹಾಗೂ ಇತರೆ ರಾಜ್ಯಗಳಲ್ಲಿ ನೆಲೆಸಿರುವ ವಿದೇಶಿ ಮೂಲದ ವ್ಯಕ್ತಿಗಳಿಂದ ಚೂಡಿದಾರ್ ಬಟ್ಟೆ, ಬೆಡ್‌ಶೀಟ್ ಕವರ್‌ಗಳಲ್ಲಿ, ಸೋಪ್ ಬಾಕ್ಸ್ ಮತ್ತು ಚಾಕೊಲೇಟ್ ಬಾಕ್ಸ್‌ಗಳಲ್ಲಿ ಮಾದಕ ವಸ್ತುಗಳನ್ನು ಅಡಗಿಸಿ ಯಾರಿಗೂ ಅನುಮಾನ ಬರದಂತೆ ಖರೀದಿಸಿಕೊಂಡು ತರುತ್ತಿದ್ದ ಮತ್ತು ಅವುಗಳನ್ನು ತನ್ನ ಮನೆಯಲ್ಲಿರಿಸಿಕೊಂಡಿದ್ದ.
ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ಕೈಗೊಂಡ ಸಿಸಿಬಿ ಪೊಲೀಸರ ತಂಡ ಆರೋಪಿಯನ್ನ ಬಂಧಿಸಿದೆ. ಆರೋಪಿಯು ಹೊಸ ವರ್ಷದ ಆಚರಣೆಯ ಸಮಯದಲ್ಲಿ ಹೆಚ್ಚಿನ ಬೆಲೆಗೆ ಬೆಂಗಳೂರು ನಗರದಲ್ಲಿ ನಡೆಯುವ ಪಾರ್ಟಿಗಳಿಗೆ, ಗ್ರಾಹಕರುಗಳಿಗೆ, ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಐಟಿ/ಬಿಟಿ ಉದ್ಯೋಗಿಗಳಿಗೆ ಮಾರಾಟ ಮಾಡಿ ಅಕ್ರಮ ಹಣ ಸಂಪಾದಿಸುವ ಉದ್ದೇಶದಿಂದ ಮಾದಕ ವಸ್ತುಗಳನ್ನು ಸಂಗ್ರಹಿಸಿ ಗೌಪ್ಯವಾಗಿ ಶೇಖರಿಸಿಕೊಂಡಿರುವುದು ಪೊಲೀಸರ ಪ್ರಾಥಮಿಕ ವಿಚಾರಣೆಯಿಂದ ತಿಳಿದು ಬಂದಿದೆ. ಆರೋಪಿಯ ವಿರುದ್ಧ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್. ಕಾಯ್ದೆ ಮತ್ತು ವಿದೇಶಿ ಕಾಯ್ದೆಯಡಿ ಪ್ರಕರಣ ದಾಖಲಿಸಲಿಸಿಕೊಳ್ಳಲಾಗಿದೆ.
Rs 21 crore was collected for sale on New Year's Eve. Drugs worth Rs 1,000 crore have been seized and a foreign national has been arrested. The CCB police in the city conducted a special operation and arrested the accused.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm