ಬ್ರೇಕಿಂಗ್ ನ್ಯೂಸ್
13-12-23 04:39 pm Mangalore Correspondent ಕ್ರೈಂ
ಉಳ್ಳಾಲ, ಡಿ.13: ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಹರೇಕಳದ ನೇತ್ರಾವತಿ ನದಿಯಲ್ಲಿ ಅಕ್ರಮವಾಗಿ ಸಮೀಪದ ಮನೆಗಳಿಗೆ ಮರಳು ಪೂರೈಸುತ್ತಿದ್ದ ಎರಡು ನಾಡ ದೋಣಿಗಳನ್ನ ಕೊಣಾಜೆ ಠಾಣೆಗೆ ಪ್ರಭಾರಿಯಾಗಿರುವ ಉಳ್ಳಾಲ ಇನ್ಸ್ ಪೆಕ್ಟರ್ ಹೆಚ್.ಎನ್ ಬಾಲಕೃಷ್ಣ ನೇತೃತ್ವದ ತಂಡ ದಾಳಿ ನಡೆಸಿ ಗಣಿ, ಭೂವಿಜ್ಞಾನ ಅಧಿಕಾರಿಗಳ ವಶಕ್ಕೆ ನೀಡಿದೆ.
ಹರೇಕಳದ ಧಕ್ಕೆಯ ನೇತ್ರಾವತಿ ನದಿಯಲ್ಲಿ ನಾಡ ದೋಣಿಗಳಲ್ಲಿ ಮರಳು ಸಾಗಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಉಳ್ಳಾಲ ಠಾಣಾ ಪಿಐ ಬಾಲಕೃಷ್ಣ ನೇತೃತ್ವದ ತಂಡವು ದಾಳಿ ನಡೆಸಿ ಮರಳು ಮತ್ತು ದೋಣಿಗಳನ್ನು ವಶಕ್ಕೆ ಪಡೆದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಶಕ್ಕೆ ನೀಡಿದೆ.


ಹರೇಕಳ, ಪಾವೂರಿನಲ್ಲಿ ಅಕ್ರಮ ಮರಳುಗಾರಿಕೆ ಎಗ್ಗಿಲ್ಲದೆ ನಿರಂತರವಾಗಿ ನಡೆಯುತ್ತಲೇ ಇದೆ. ಕೊಣಾಜೆ ಪೊಲೀಸರಿಗೆ ಇದೇನು ಗೊತ್ತಿಲ್ಲದ ಸಂಗತಿಯಲ್ಲ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕಳೆದ ಕೆಲ ತಿಂಗಳ ಹಿಂದೆ ತೆರವಾದ ಇನ್ಸ್ ಪೆಕ್ಟರ್ ಸ್ಥಾನಕ್ಕೆ ಪರ್ಯಾಯ ಅಧಿಕಾರಿ ನೇಮಕವಾಗಿಲ್ಲ. ಕೊಣಾಜೆಯಲ್ಲಿ ಪಿಎಸ್ ಐಗಳು ಮತ್ತು ಅನುಭವಿ ಪೊಲೀಸರ ಕಾರು ಬಾರು ನಡೆಯುತ್ತಿದೆ.
ಕೊಣಾಜೆ ಠಾಣೆಯ ಪ್ರಭಾರ ಉಸ್ತುವಾರಿಯನ್ನ ಉಳ್ಳಾಲ ಇನ್ಸ್ ಪೆಕ್ಟರ್ ಬಾಲಕೃಷ್ಣ ವಹಿಸಿದ್ದು, ಅವರ ನೇತೃತ್ವದಲ್ಲಿ ನಡೆದ ದಿಢೀರ್ ದಾಳಿಯಿಂದ ಹರೇಕಳದಲ್ಲಿ ಬೇರೂರಿರುವ ಮರಳು ಮಾಫಿಯಾಗಳು ದಿಕ್ಕೆಟ್ಟು ಹೋಗಿವೆ. ಕಾರ್ಯಾಚರಣೆಯಲ್ಲಿ ಪಿಎಸ್ ಐ ಪುನೀತ್ ಗಾಂವ್ಕರ್, ವಿನೋದ್, ಸಿಬ್ಬಂದಿಗಳಾದ ಶೈಲೇಂದ್ರ ಮೊದಲಾದವರು ಇದ್ದರು.
Mangalore Ullal Police inspector team raids illegal sand mining, two boats seized.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm