ಬ್ರೇಕಿಂಗ್ ನ್ಯೂಸ್
20-12-23 10:44 pm Bangalore Correspondent ಕ್ರೈಂ
ಬೆಂಗಳೂರು, ಡಿ 20: ನೈಜೀರಿಯಾ ಪ್ರಜೆಯೊಬ್ಬ ತನ್ನ ಹೊಟ್ಟೆಯಲ್ಲೇ ಬರೋಬ್ಬರಿ ಎರಡು ಕೇಜಿಯಷ್ಟು ಕೊಕೇನ್ ಮಾದಕ ದ್ರವ್ಯದ ಮಾತ್ರೆಗಳನ್ನು ತುಂಬಿಸಿಕೊಂಡು ಬಂದು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಿಕ್ಕಿ ಬಿದ್ದಿದ್ದಾನೆ.
ಹೊಟ್ಟೆಯಲ್ಲಿ ಕೊಕೇನ್ ತುಂಬಿದ್ದ 99 ಕ್ಯಾಪ್ಸೂಲ್‌ಗಳನ್ನು ತಪಾಸಣೆ ವೇಳೆ ಪತ್ತೆ ಮಾಡಲಾಗಿದೆ. ಇದರ ಮೌಲ್ಯ ಸುಮಾರು 20 ಕೋಟಿ ರೂಪಾಯಿ ಎಂದು ಅಂದಾಜಿಸಿದ್ದು ಹೊಟ್ಟೆಯ ರಹಸ್ಯ ತಿಳಿದ ಕಸ್ಟಮ್ಸ್ ಅಧಿಕಾರಿಗಳು ಅವಾಕ್ಕಾಗಿದ್ದಾರೆ. ಆರೋಪಿ ಇಥಿಯೋಪಿಯಾದ ಅದ್ದೀಸ್ ಅಬಾದ್ ನಗರದಿಂದ ಬೆಂಗಳೂರಿಗೆ ವಿಮಾನದಲ್ಲಿ ಆಗಮಿಸಿದ್ದ. ಕಂದಾಯ ವಿಚಕ್ಷಣಾ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಖಚಿತ ಮಾಹಿತಿ ಆಧರಿಸಿ ತಪಾಸಣೆ ನಡೆಸಿದ್ದಾರೆ.
ಹೊಟ್ಟೆಯಲ್ಲಿ ಕೊಕೇನ್ ಇರೋದನ್ನ ಖಚಿತಪಡಿಸಿದ ಅಧಿಕಾರಿಗಳು ವ್ಯಕ್ತಿಯನ್ನು ನೇರವಾಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಯಲ್ಲಿ ಐದು ದಿನಗಳ ಕಾಲ ಇರಿಸಿ ಆಪರೇಶನ್ ಮಾಡಿದ್ದು ಹೊಟ್ಟೆಯಲ್ಲಿದ್ದ ಮಾದಕ ವಸ್ತುಗಳನ್ನು ಹಂತ ಹಂತವಾಗಿ ಹೊರಗೆ ತೆಗೆಯಲಾಗಿದೆ. 40 ವರ್ಷದ ಆರೋಪಿ ನೈಜೀರಿಯಾ ಪ್ರಜೆಯಾಗಿದ್ದು ಹೊಟ್ಟೆ ನೋವಿಗೆ ಸರ್ಜರಿ ಇದೆಯೆಂದು ವೈದ್ಯಕೀಯ ಚಿಕಿತ್ಸೆಯ ಕಾರಣವೊಡ್ಡಿ ಭಾರತದ ವೀಸಾ ಗಿಟ್ಟಿಸಿಕೊಂಡಿದ್ದ. ಡಿ.11ರಂದು ಬೆಂಗಳೂರಿಗೆ ಬಂದಾಗಲೇ ವಶಕ್ಕೆ ಪಡೆಯಲಾಗಿತ್ತು.
ಆರೋಪಿ ವಿರುದ್ಧ ಮಾದಕ ದ್ರವ್ಯ ನಿಗ್ರಹ ಕಾಯ್ದೆ ಸೇರಿದಂತೆ ಹಲವು ಸೆಕ್ಷನ್ ಗಳ ಅಡಿ ಪ್ರಕರಣ ದಾಖಲಿಸಲಾಗಿದೆ. ಸದ್ಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ರವಾನೆ ಮಾಡಲಾಗಿದೆ. ಮಾದಕ ವಸ್ತುಗಳನ್ನು ಆರೋಪಿ ಯಾರಿಗೆ ನೀಡಲು ಹೊರಟಿದ್ದ ಅನ್ನೋದ್ರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
The Directorate Revenue Intelligence (DRI) officials at the Kempegowda International Airport seized cocaine worth Rs 20 crore from passengers. A Nigerian national was attempting to smuggle cocaine in capsules inside his stomach. The customs officials recovered 2 kg of cocaine concealed inside 99 capsules. The passenger was flying from Addis Ababa, Ethiopia to Bengaluru.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm