ಬ್ರೇಕಿಂಗ್ ನ್ಯೂಸ್
21-12-23 06:05 pm Mangalore Correspondent ಕ್ರೈಂ
ಬೆಳ್ತಂಗಡಿ, ಡಿ.21: ಸರಕಾರಿ ಸಂಸ್ಥೆಯ ಉದ್ಯೋಗಿಯೊಬ್ಬರು ಧರ್ಮಸ್ಥಳ ಬಸ್ ನಿಲ್ದಾಣದಲ್ಲಿ ಬಸ್ ಹತ್ತುತ್ತಿದ್ದಾಗ ಕರಿಮಣಿ ಸರ ಕಳವಾದ ಪ್ರಕರಣವನ್ನು ಭೇದಿಸಿದ ಬೆಳ್ತಂಗಡಿ ಪೊಲೀಸರು ಇಬ್ಬರು ತಮಿಳುನಾಡು ಮೂಲದ ಕಳ್ಳಿಯರನ್ನು ಬಂಧಿಸಿದ್ದಾರೆ.
ವಾರಿಜಾ ಅವರು ಡಿ.12ರಂದು ಕೆಎಸ್ಸಾರ್ಟಿಸಿ ಬಸ್ ಹತ್ತುತ್ತಿದ್ದಾಗ 24 ಗ್ರಾಂ ತೂಕದ ಚಿನ್ನದ ಕರಿಮಣಿ ಸರವನ್ನು ಕಳ್ಳತನ ಮಾಡಲಾಗಿತ್ತು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮಹಿಳೆ ದೂರು ನೀಡಿದ್ದರು. ಅದರಂತೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದರು.
ಪ್ರಕರಣದ ತನಿಖೆ ಸಂದರ್ಭದಲ್ಲಿ ಬೆಳ್ತಂಗಡಿ ಉಪ ನಿರೀಕ್ಷಕ ಚಂದ್ರಶೇಖರ್ ಮತ್ತು ತಂಡದ ಪೊಲೀಸರು ಸಂಶಯದ ಮೇರೆಗೆ ತಮಿಳುನಾಡು ಮೂಲದ ಇಬ್ಬರು ಮಹಿಳೆಯರನ್ನು ಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದರು. ವಿಚಾರಣೆ ವೇಳೆ ಕಳ್ಳತನ ಒಪ್ಪಿಕೊಂಡಿದ್ದು ಇಬ್ಬರನ್ನೂ ಬಂಧಿಸಿದ್ದಾರೆ. ತಮಿಳುನಾಡಿನ ತಿರುಪೂರ್ ಜಿಲ್ಲೆಯ ಮೋಹಿನಿ ಯಾನೆ ಮಾರಿಮುತ್ತು (35) ಮತ್ತು ದಿವ್ಯಾ ಯಾನೆ ಕಾಮಾಚಿ (30) ಬಂಧಿತರಾಗಿದ್ದು ಕದ್ದ ಕರಿಮಣಿ ಸರವನ್ನು ಪೊಲೀಸರಿಗೆ ನೀಡಿದ್ದಾರೆ.
ಆರೋಪಿಗಳು ಈ ಹಿಂದೆ ಬೆಳ್ತಂಗಡಿ ಸೇರಿದಂತೆ ಹಲವು ಕಡೆ ಕಳ್ಳತನ ನಡೆಸಿದ್ದು ವಿಚಾರಣೆ ವೇಳೆ ಮೂಲ್ಕಿ ಮತ್ತು ಬೆಳ್ತಂಗಡಿಯಲ್ಲಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವುದು ತಪ್ಪೊಪ್ಪಿಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Belthangady Police have arrested two women on charges of chain snatching. The arrests were made following a recent incident of snatching the mangalasutra of a woman while she was boarding a government bus.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm