ಬ್ರೇಕಿಂಗ್ ನ್ಯೂಸ್
06-01-24 06:02 pm Mangalore Correspondent ಕ್ರೈಂ
ಮಂಗಳೂರು, ಜ.5: ನಟೋರಿಯಸ್ ರೌಡಿ ಆಕಾಶ್ ಭವನ ಶರಣ್ ಸಿಸಿಬಿ ಪೊಲೀಸರ ಮೇಲೆ ಕಾರು ಹತ್ತಿಸಿ ಕೊಲೆಗೆ ಯತ್ನಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಈ ಬಗ್ಗೆ ಕಾವೂರು ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಆಕಾಶಭವನ್ ಶರಣ್ ಹಲವು ಪ್ರಕರಣಗಳಲ್ಲಿ ಅರೆಸ್ಟ್ ವಾರೆಂಟ್ ಎದುರಿಸುತ್ತಿದ್ದು, ಜನವರಿ 2ರಂದು ರಾತ್ರಿ ಮೇರಿಹಿಲ್ ನಲ್ಲಿ ಕಾರಿನಲ್ಲಿ ಬರುತ್ತಿದ್ದಾಗ ಪೊಲೀಸರು ಅಡ್ಡಗಟ್ಟಿದ್ದಾರೆ. ಮಂಗಳೂರು ಸಿಸಿಬಿ ವಿಭಾಗದ ಪೊಲೀಸ್ ತಂಡ ಕಾರನ್ನು ಅಡ್ಡಗಟ್ಟುತ್ತಲೇ ಪೊಲೀಸರ ಮೇಲೆಯೇ ಕಾರು ಹಾಯಿಸಿ ಕೊಲ್ಲಲು ಯತ್ನಿಸಿದ್ದಾನೆ. ಘಟನೆಯಲ್ಲಿ ಪೊಲೀಸರು ಯಾವುದೇ ಅಪಾಯ ಇಲ್ಲದೆ ತಪ್ಪಿಸಿಕೊಂಡಿದ್ದಾರೆ.
ಕಳೆದ ಅಕ್ಟೋಬರ್ ತಿಂಗಳಲ್ಲಿ ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ರೇಣುಕಾಪ್ರಸಾದ್ ಸೇರಿ ಐದು ಮಂದಿಗೆ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿತ್ತು. ಸುಪಾರಿ ಪಡೆದು ಕೊಲೆ ಕೃತ್ಯ ನಡೆಸಿದ್ದ ಆಕಾಶ್ ಭವನ್ ಶರಣ್ ಪೊಲೀಸರ ಕೈಗೆ ಸಿಗದೆ ತಪ್ಪಿಸಿಕೊಂಡಿದ್ದರಿಂದ ಶಿಕ್ಷೆ ಪ್ರಕಟವಾಗಿರಲಿಲ್ಲ. ಉಳಿದ ಐದು ಮಂದಿ ಜೈಲು ಸೇರಿದ್ದರೆ, ನಟೋರಿಯಸ್ ರೌಡಿ ಶರಣ್ ಮಾತ್ರ ತಲೆಮರೆಸಿಕೊಂಡಿದ್ದ.
ಮಂಗಳೂರಿನ ನಟೋರಿಯಸ್ ರೌಡಿ
ಆಕಾಶಭವನ್ ಶರಣ್ ಮೇಲೆ ಮಂಗಳೂರು ಮತ್ತು ಉಡುಪಿಯಲ್ಲಿ ಕೊಲೆ, ಕೊಲೆಯತ್ನ, ರೇಪ್, ಹಫ್ತಾ ಸೇರಿದಂತೆ 21 ಕೇಸುಗಳು ದಾಖಲಾಗಿದ್ದು, ಮಂಗಳೂರಿನ ನಟೋರಿಯಸ್ ರೌಡಿಯೆಂದು ಗುರುತಿಸಲ್ಪಟ್ಟಿದ್ದಾನೆ. ಕಳೆದ ಬಾರಿ 2020 ಅಕ್ಟೋಬರ್ 20ರಂದು ಸುರೇಂದ್ರ ಬಂಟ್ವಾಳ್ ಎನ್ನುವ ಫೈನಾನ್ಸರ್ ನನ್ನು ಜೈಲಿನಲ್ಲಿದ್ದುಕೊಂಡೇ ತನ್ನ ಸಹಚರರಿಂದ ಕೊಲ್ಲಿಸಿದ್ದ. ಆನಂತರ, 2022ರ ಕೊನೆಯಲ್ಲಿ ಜಾಮೀನು ಮೇಲೆ ಬಿಡುಗಡೆಯಾಗಿದ್ದ ಶರಣ್, 2023ರ ಜನವರಿ 14ರಂದು ಸುರತ್ಕಲ್ ಬಳಿ ಹಣಕ್ಕಾಗಿ ಸ್ಕೂಟರ್ ಅಡ್ಡಗಟ್ಟಿ ಸುಲಿಗೆ ಯತ್ನಿಸಿದ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ. ನಾಲ್ಕು ತಿಂಗಳಲ್ಲಿ ಮತ್ತೆ ಜೈಲಿನಿಂದ ಬಿಡುಗಡೆಯಾಗಿ ತಲೆಮರೆಸಿಕೊಂಡಿದ್ದ. ಮಂಗಳೂರು ಬಿಟ್ಟರೆ ಮುಂಬೈ, ಪುಣೆಯಲ್ಲಿ ಸುತ್ತಾಡುವ ಶರಣ್ ಕಾರಿನಲ್ಲಿ ಒಬ್ಬಂಟಿಯಾಗಿಯೇ ಪ್ರಯಾಣಿಸುವುದು ರೂಢಿ ಮಾಡಿಕೊಂಡಿದ್ದಾನೆ. ಸುಳ್ಯ ಕೊಲೆ ಪ್ರಕರಣದಲ್ಲಿ ಪೊಲೀಸರ ಕೈಗೆ ಸಿಗದೆ ತಿರುಗಾಡುತ್ತಿರುವ ಶರಣ್ ಮಂಗಳೂರು ಪೊಲೀಸರ ಪಾಲಿಗೆ ಮೋಸ್ಟ್ ವಾಂಟೆಡ್ ಆಗಿದ್ದು ಇದೀಗ ಪೊಲೀಸರ ಮೇಲೆಯೇ ಕಾರು ಹಾಯಿಸಿ ಮತ್ತೊಂದು ಕೇಸನ್ನು ಕೊರಳಿಗೆ ಹಾಕ್ಕೊಂಡಿದ್ದಾನೆ.
Mangalore Akash Bhavan Sharan tries to attack CCB Police at Mary hill while trying to arrest him. While trying to arrest Akash Bhavan Sharan it is said he tried to attack police personal and also tried to ram the car over them. A FIR has been registered at Kavoor Police station in Mangalore.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 10:21 pm
HK News Desk
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm