ಬ್ರೇಕಿಂಗ್ ನ್ಯೂಸ್
20-11-20 10:30 am Mangalore Correspondent ಕ್ರೈಂ
ಮಂಗಳೂರು, ನ.20 : ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಮಹಿಳೆಯರ ಕುತ್ತಿಗೆಯಿಂದ 2.34 ಲಕ್ಷ ರೂ. ಮೌಲ್ಯದ ಚಿನ್ನದ ಸರ ಎಗರಿಸಿದ ಘಟನೆ ನಡೆದಿದ್ದು, ಕಾವೂರು ಹಾಗು ಕದ್ರಿ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.
ರಶ್ಮಿ ಎಂಬವರು ಕೆಲಸ ಮುಗಿಸಿ ಪಂಜಿಮೊಗರಿನ ಉರುಂದಾಡಿಗುಡ್ಡೆಯಲ್ಲಿರುವ ಮನೆ ಕಡೆಗೆ ಹೋಗುತ್ತಿದ್ದಾಗ ರಾಘವೇಂದ್ರ ಮಠದ ಹತ್ತಿರ ಅಪರಿಚಿತನೊಬ್ಬ ಬೈಕಿನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದಾನೆ ಎನ್ನಲಾಗಿದೆ.
ಭಯಗೊಂಡು ರಶ್ಮಿ ತನ್ನ ತಾಯಿಗೆ ಕರೆ ಮಾಡಿದ್ದು, ಅಷ್ಟರಲ್ಲಿ ಆ ವ್ಯಕ್ತಿಯು ಹಿಂದುಗಡೆಯಿಂದ ಬಂದು ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರವನ್ನು ಎಳೆದೊಯ್ದಿದ್ದಾನೆ. ಚಿನ್ನದ ಕರಿಮಣಿ ಸರವು ಸುಮಾರು 22 ಗ್ರಾಂ ಇದ್ದು ಅದರ ಅಂದಾಜು ಮೌಲ್ಯ 80,000 ರೂ. ಆಗಿರಬಹುದು. ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ಗೀತಾ ಎಂಬವರು ಕದ್ರಿಯಲ್ಲಿರುವ ಸಂಬಂಧಿಕರ ಮನೆಯಿಂದ ಬುಧವಾರ ಸಂಜೆ ತನ್ನ ಮನೆಗೆ ವ್ಯಾಸನಗರದಲ್ಲಿರುವ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ಬೈಕ್ ನಿಲ್ಲಿಸಿ ರಿಪೇರಿ ಮಾಡುವಂತೆ ನಟಿಸುತ್ತಿದ್ದ. ಆತನನ್ನು ದಾಟಿ ಮುಂದೆ ಹೋದ ನಂತರ ಆತನು ಹಿಂದಿನಿಂದ ಬಂದು ಕುತ್ತಿಗೆಯಲ್ಲಿದ್ದ ಸುಮಾರು 54,000 ರೂ. ಮೌಲ್ಯದ 13 ಗ್ರಾಂ ತೂಕದ ಚಿನ್ನದ ಕರಿಮಣಿ ಸರ ಮತ್ತು ಸುಮಾರು 1 ಲಕ್ಷ ರೂ. ಮೌಲ್ಯದ 26 ಗ್ರಾಂ ತೂಕದ ಸರ ಸಹಿತ 1,54,000 ರೂ. ಮೌಲ್ಯದ ಚಿನ್ನಾಭರಣಗಳನ್ನು ಕಿತ್ತುಕೊಂಡು ಹೋಗಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Two women have reported chain snatching case of about 2.34 lakhs Kadri police station in Mangalore.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm