ಬ್ರೇಕಿಂಗ್ ನ್ಯೂಸ್
09-01-24 05:55 pm Mangalore Correspondent ಕ್ರೈಂ
ಮಂಗಳೂರು, ಜ.9: ನಟೋರಿಯಸ್ ರೌಡಿ ಆಕಾಶಭವನ್ ಶರಣ್ ಮೇಲೆ ಪೊಲೀಸರು ಗುಂಡು ಹಾರಿಸಿ ಅರೆಸ್ಟ್ ಮಾಡಿದ್ದಾರೆ. ಮಂಗಳೂರಿನ ಜಪ್ಪು ಕುದ್ಪಾಡಿಯಲ್ಲಿ ಸಾಗುತ್ತಿದ್ದಾಗ ಪೊಲೀಸರು ಬಂಧಿಸಲು ಯತ್ನಿಸಿದ್ದು ಮರು ದಾಳಿಗೆ ಯತ್ನಿಸಿದ್ದಾನೆ ಎನ್ನಲಾಗುತ್ತಿದ್ದು, ಈ ವೇಳೆ ಪೊಲೀಸರು ಕಾಲಿಗೆ ಗುಂಡು ಹಾರಿಸಿದ್ದಾರೆ.
ಶರಣ್ ನನ್ನು ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜ.5ರಂದು ರಾತ್ರಿ ಮಂಗಳೂರಿನ ಸಿಸಿಬಿ ಪೊಲೀಸರು ಕಾವೂರಿನಲ್ಲಿ ರೌಡಿಯನ್ನು ಹಿಡಿಯಲು ಯತ್ನಿಸಿದಾಗ ಕಾರನ್ನು ಹಾಯಿಸಿ ಕೊಲೆಗೆ ಯತ್ನಿಸಿದ ಬಗ್ಗೆ ಕಾವೂರು ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಆನಂತರ, ಆಕಾಶಭವನ್ ಶರಣ್ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದರು. ಮಂಗಳವಾರ ಮಧ್ಯಾಹ್ನ ಆರೋಪಿ ಜಪ್ಪು ಕುದ್ಪಾಡಿಯಲ್ಲಿದ್ದಾನೆಂದು ವಶಕ್ಕೆ ಪಡೆಯಲು ಮುಂದಾಗಿದ್ದರು ಎನ್ನುವ ಮಾಹಿತಿಗಳಿವೆ.
ಆಕಾಶಭವನ್ ಶರಣ್ ಮೇಲೆ ಮಂಗಳೂರು, ಉಡುಪಿಯಲ್ಲಿ 20ಕ್ಕೂ ಹೆಚ್ಚು ಪ್ರಕರಣಗಳಿದ್ದು, ನಟೋರಿಯಸ್ ರೌಡಿಯಾಗಿದ್ದಾನೆ. ಫೈನಾನ್ಸರ್ ಸುರೇಂದ್ರ ಬಂಟ್ವಾಳ್ ಪ್ರಕರಣದಲ್ಲಿ ಜೈಲಿನಲ್ಲಿದ್ದುಕೊಂಡೇ ಸುಪಾರಿ ಪಡೆದು ತನ್ನ ಸಹಚರರ ಮೂಲಕ ಕೊಲೆ ನಡೆಸಿದ್ದ. ಸುಳ್ಯದಲ್ಲಿ ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ರಾಮಕೃಷ್ಣ ಕೊಲೆ ಪ್ರಕರಣದಲ್ಲಿಯೂ ಸುಪಾರಿ ಪಡೆದು ತನ್ನ ಸಹಚರರ ಮೂಲಕ ಮಾಡಿಸಿದ್ದ ಎನ್ನುವುದು ತನಿಖೆಯಲ್ಲಿ ಸಾಬೀತಾಗಿತ್ತು.
Mangalore police shoot at Rowdy Akash Bhavan Sharan, arrested. Recently Sharan had tried to attack CCB Police while trying to arrest him at Maryhill in Kavoor. Sharan faces a staggering 21 cases in Mangaluru and Udupi, including charges of murder, attempted murder, rape of a minor girl, and extortion
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm