ಬ್ರೇಕಿಂಗ್ ನ್ಯೂಸ್
11-01-24 11:44 am Bangalore Correspondent ಕ್ರೈಂ
ಬಂಟ್ವಾಳ, ಜ.11: ನಾಲ್ವರು ಮುಸುಕುಧಾರಿಗಳು ಮನೆಯೊಂದಕ್ಕೆ ನುಗ್ಗಿ ತಾಯಿ, ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ರೂಪಾಯಿ ನಗ- ನಗದನ್ನು ದರೋಡೆಗೈದ ಘಟನೆ ಬೆಳ್ಳಂಬೆಳಗ್ಗೆ ವಗ್ಗದಲ್ಲಿ ನಡೆದಿದೆ.
ವಗ್ಗ ಸಮೀಪದ ಅಂಚಿಕಟ್ಟೆ ಸಾಲುಮರ ತಿಮ್ಮಕ್ಕನ ಟ್ರೀ ಪಾರ್ಕ್ ಮುಂಭಾಗದಲ್ಲಿರುವ ಫ್ಲೋರಿನ್ ಪಿಂಟೋ ಅವರ ಹೊಸ ಮನೆಯಿಂದ ದರೋಡೆ ಮಾಡಲಾಗಿದೆ. ಮನೆಯಲ್ಲಿ ತಾಯಿ ಫ್ಲೋರಿನ್ ಪಿಂಟೊ ಮತ್ತು ಅವರ ಮಗಳು ಮರಿನಾ ಪಿಂಟೋ ಇಬ್ಬರು ಮಾತ್ರ ಇದ್ದರು. ಮನೆಯಲ್ಲಿ ಬೇರೆ ಯಾರೂ ಇಲ್ಲವೆಂದು ತಿಳಿದಿದ್ದವರೇ ರಾಬರಿ ನಡೆಸಿದ್ದಾರೆ.
ಕಪಾಟಿನಲ್ಲಿರಿಸಿದ್ದ ಸುಮಾರು 2.90 ಲಕ್ಷ ರೂ. ಮೌಲ್ಯದ ವಿವಿಧ ಮಾದರಿಯ ಬಂಗಾರದ ಒಡವೆಗಳು, 30 ಸಾವಿರ ರೂ. ನಗದು ಹಾಗೂ ಒಂದು ಮೊಬೈಲ್ ಫೋನ್ ಒಟ್ಟು ಮೂರು ಲಕ್ಷಕ್ಕೂ ಅಧಿಕ ಮೌಲ್ಯದ ನಗ- ನಗದು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಬೆಳಗ್ಗೆ ಸುಮಾರು 6.30ರ ವೇಳೆಗೆ ಕಾಲಿಂಗ್ ಬೆಲ್ ಹಾಕಿದ್ದು ಬಾಗಿಲು ತೆಗದ ಕೂಡಲೇ ನಾಲ್ವರು ಮುಸುಕುಧಾರಿಗಳು ಮನೆಯೊಳಗೆ ನುಗ್ಗಿದ್ದಾರೆ. ಬಳಿಕ ಮನೆಯಲ್ಲಿರುವ ಚಿನ್ನ, ನಗದು ತೆಗೆದು ಕೊಡುವಂತೆ ಬೆದರಿಸಿದ್ದಾರೆ.
ಬೆದರಿಕೆಗೆ ಬಗ್ಗದಾಗ ನಾಲ್ವರು ಕೈಯಲ್ಲಿ ಚೂರಿ ತೋರಿಸಿ ಕೊಲ್ಲುವ ಬೆದರಿಕೆ ಒಡ್ಡಿದ್ದು ಕಪಾಟು ಬೀಗದ ಕೀ ಪಡೆದಿದ್ದಾರೆ. ಬಂಗಾರವನ್ನು ದೋಚುವ ವೇಳೆ ಅಡ್ಡ ಬಂದ ಮಗಳು ಮರೀನಾ ಪಿಂಟೋ ಅವರ ಕೈಗೆ ಗಾಯವಾಗಿದೆ ಎಂದು ಇವರ ಅಣ್ಣ ಆಸ್ಟಿನ್ ಪಿಂಟೋ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಎರಡು ದಿನಗಳ ಹಿಂದೆ ಇದೇ ಪರಿಸರದಲ್ಲಿ ಅಂಗಡಿಯಿಂದ ಜ್ಯೂಸ್ ಮೆಷಿನ್ ಒಂದನ್ನು ಕಳವು ಮಾಡಲಾಗಿತ್ತು. ಸ್ಥಳಕ್ಕೆ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ. ಹರೀಶ್ ಭೇಟಿ ನೀಡಿದ್ದಾರೆ. ಶ್ವಾನ ದಳ, ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
House robbery in Bantwal mangalore, Mother daughter tied up, looted of gold and cash.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm