ಬ್ರೇಕಿಂಗ್ ನ್ಯೂಸ್
11-01-24 01:54 pm HK News Desk ಕ್ರೈಂ
ಹಾವೇರಿ, ಜ.11: ಹಾವೇರಿ ಜಿಲ್ಲೆಯಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಅನ್ಯಕೋಮಿನ ಪುರುಷನೊಂದಿಗೆ ಸಿಕ್ಕಿ ಬಿದ್ದ ಮಹಿಳೆಯನ್ನು ಥಳಿಸಿ, ಗ್ಯಾಂಗ್ ರೇಪ್ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಸದ್ಯ ಈ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದ್ದು ಉಳಿದ ಆರೋಪಿಗಳಿಗೆ ಪೊಲೀಸ್ರು ಬಲೆ ಬೀಸಿದ್ದಾರೆ.
ಜ.08ರಂದು ಸೋಮವಾರ ಅನ್ಯಕೋಮಿನ ಇಬ್ಬರು ವಿವಾಹಿತರು ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ನಾಕ್ಲಕ್ರಾಸ್ ಬಳಿ ಇರುವ ಖಾಸಗಿ ಹೋಟೆಲ್ ನಲ್ಲಿ ತಂಗಿದ್ರು. ಇದನ್ನು ಕಂಡ ಕೆಲ ಮುಸ್ಲಿಂ ಯುವಕರು ಏಕಾಏಕಿ ಹೋಟೆಲ್ ಗೆ ನುಗ್ಗಿ ದಾಂಧಲೆ ಮಾಡಿ ಮಹಿಳೆ ಮತ್ತು ಪುರುಷನ ಮೇಲೆ ಹಲ್ಲೆ ನಡೆಸಿದ್ದರು. ಅಲ್ಲದೇ ಹಲ್ಲೆ ಮಾಡುವಾಗ ವಿಡಿಯೋ ಮಾಡಿಕೊಂಡಿದ್ದರು. ಈಗಾ ಈ ಘಟನೆಯ 2ನೆ ವಿಡಿಯೋ ವೈರಲ್ ಆಗಿದೆ.
ಎರಡನೇ ವಿಡಿಯೋ ವೈರಲ್ ಆಗುತ್ತಿದ್ದಂತೆ ಹಾನಗಲ್ ಜನರು ಬೆಚ್ಚಿ ಬಿದ್ದಿದ್ದಾರೆ. ಆರೋಪಿಗಳು ಮುಸ್ಲಿಂ ಮಹಿಳೆಯನ್ನು ಕಾರಿನಲ್ಲಿ ಎಳೆದೊಯ್ದು ಚಿತ್ರಹಿಂಸೆ ನೀಡಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿದೆ.
7 ಮುಸ್ಲಿಂ ಯುವಕರಿಂದ ಗ್ಯಾಂಗ್ ರೇಪ್ ?
ಹೋಟೆಲ್ನಲ್ಲಿ ಹಲ್ಲೆ ಮಾಡಿದ ಬಳಿಕ ಅರಣ್ಯ ಪ್ರದೇಶಕ್ಕೆ ಕಾರಿನಲ್ಲಿ ಕರೆದೊಯ್ದು 7 ಯುವಕರು ಗ್ಯಾಂಗ್ ರೇಪ್ ಮಾಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಒಬ್ಬರಾದ ಮೇಲೆ ಒಬ್ಬರು ನನ್ನ ರೇಪ್ ಮಾಡಿದ್ದಾರೆ. ಮತ್ತೊಂದೆಡೆ ತನ್ನ ಪತ್ನಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಲಾಗಿದೆ ಎಂದು ಮಹಿಳೆಯ ಪತಿ ಕೂಡ ಹೇಳಿಕೆ ನೀಡಿದ್ದಾರೆ. ಜಂಗಲ್ನಲ್ಲಿ ರೇಪ್ ಮಾಡಿದ್ದ ವಿಡಿಯೋ ಇದೆ ಎಂದು ಮಹಿಳೆಯ ಪತಿ ಆರೋಪಿಸಿದ್ದಾರೆ.
ನೈತಿಕ ಪೊಲೀಸ್ಗಿರಿ ಯಾರೇ ನಡೆಸಿದ್ರೂ ಮುಲಾಜಿಲ್ಲದೆ ಕ್ರಮ
ಹಾವೇರಿ ಜಿಲ್ಲೆಯ ಹಾನಗಲ್ನಲ್ಲಿ ನೈತಿಕ ಪೊಲೀಸ್ಗಿರಿ ಪ್ರಕರಣ ಸಂಬಂಧ ಬೆಂಗಳೂರಿನಲ್ಲಿ ಡಿಜಿ & ಐಜಿಪಿ ಅಲೋಕ್ ಮೋಹನ್ ಎಚ್ಚರಿಕೆ ನೀಡಿದ್ದಾರೆ. ನೈತಿಕ ಪೊಲೀಸ್ಗಿರಿ ಯಾರೇ ನಡೆಸಿದ್ರೂ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುತ್ತೆ. ಇಂತಹ ಘಟನೆ ಎಲ್ಲೇ ನಡೆದ್ರೂ ತಕ್ಷಣ ಕ್ರಮ ಕೈಗೊಳ್ಳುತ್ತಿದ್ದೇವೆ. ಸಮಾಜದಲ್ಲಿ ಎಲ್ಲರಿಗೂ ಕಾನೂನು ಒಂದೇ ಎಂದರು.
Haveri Moral Policing, women alleges of Gang rape by seven youths after she was assulted in the hotel. In a shocking case of moral policing, six to seven men barged into the room of a lodge in Karnataka and assaulted an interfaith couple staying at a lodge in Haveri. They thrashed a couple for being together despite practising different faiths. The attackers also filmed the entire incident which took place on January 7 but has come late to light.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm