ಬ್ರೇಕಿಂಗ್ ನ್ಯೂಸ್
20-01-24 05:20 pm Bangalore Correspondent ಕ್ರೈಂ
ಬೆಂಗಳೂರು, ಜ.20: ನಕಲಿ ದಾಖಲಾತಿ ಸೃಷ್ಟಿಸಿ ಬ್ಯಾಂಕ್‌ನಿಂದ ಸಾಲ ಪಡೆಯಲು ಏಜೆಂಟ್‌ಗಳಿಗೆ ಸಹಕಾರ ನೀಡುತ್ತಿದ್ದ ಆರೋಪದಡಿ ವಿವಿಧ ಬ್ಯಾಂಕ್‌ಗಳ ನಾಲ್ವರು ವ್ಯವಸ್ಥಾಪಕರನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ವಿವಿಧ ಬ್ಯಾಂಕ್‌ಗಳ ವ್ಯವಸ್ಥಾಪಕರಾದ ಮಲ್ಲಿಕಾರ್ಜುನ್, ಮುರಳೀಧರ್, ಶಶಿಕಾಂತ್, ರಾಕೇಶ್ ಬಂಧಿತರು.
ನಕಲಿ ದಾಖಲಾತಿ ಸೃಷ್ಟಿಸಿ ಬ್ಯಾಂಕ್‌ನಿಂದ ಸಾಲ ಪಡೆಯುತ್ತಿದ್ದ ಏಜೆಂಟ್‌ಗಳ ವಿರುದ್ಧ ಪುಟ್ಟೇನಹಳ್ಳಿ ಹಾಗೂ ಹುಳಿಮಾವು ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದವು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಇಲಾಖೆ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಿತ್ತು. ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಐವರು ಏಜೆಂಟರುಗಳನ್ನು ವಿಚಾರಣೆ ನಡೆಸಿದಾಗ ಏಜೆಂಟರಿಗೆ ಸಾಲ ಪಡೆಯಲು ನೆರವಾಗುತ್ತಿದ್ದ ನಾಲ್ವರು ಬ್ಯಾಂಕ್ ಅಧಿಕಾರಿಗಳ ಸುಳಿವು ಸಿಕ್ಕಿತ್ತು. ಈ ಆಧಾರದ ಮೇಲೆ ನಾಲ್ವರು ಬ್ಯಾಂಕ್ ಅಧಿಕಾರಿಗಳನ್ನು ಬಂಧಿಸಿ ವಿಚಾರಣೆ ಮಾಡಿ ಇದುವರೆಗೆ ಎಷ್ಟು ಪ್ರಮಾಣದಲ್ಲಿ ಅವ್ಯವಹಾರ ನಡೆಸಲಾಗಿದೆ ಎಂಬ ಬಗ್ಗೆ ಸಿಸಿಬಿ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.
ಒಂಟಿ ವೃದ್ಧರ ಹೆಸರಿನಲ್ಲಿರುವ ನಿವೇಶನ ಅಥವಾ ಮನೆ ಖರೀದಿಸುವ ನೆಪ ಮಾಡಿಕೊಂಡು ಬಂಧಿತ ಏಜೆಂಟರುಗಳು ನಕಲಿ ದಾಖಲೆ ಸೃಷ್ಟಿಸುತ್ತಿದ್ದರು. ನಂತರ ಬ್ಯಾಂಕ್ ಅಧಿಕಾರಿಗಳ ಮುಂದೆ ಅಸಲಿ ದಾಖಲೆಯೆಂದು ನಂಬಿಸಿ ಲಕ್ಷಾಂತರ ರೂ. ಸಾಲ ಪಡೆಯುತ್ತಿದ್ದರು. ಬ್ಯಾಂಕ್ ಅಧಿಕಾರಿಗಳು ದಾಖಲಾತಿಗಳನ್ನು ಸೂಕ್ತ ರೀತಿಯಲ್ಲಿ ಪರಿಶೀಲಿಸದೇ ಸಾಲ ನೀಡುತ್ತಿದ್ದರು. ಏಜೆಂಟರ ಆಮೀಷಕ್ಕೊಳಗಾಗಿ ಬ್ಯಾಂಕ್ ಅಧಿಕಾರಿಗಳೂ ಅವರಿಗೆ ಸಾಲ ನೀಡಲು ಸಹಕರಿಸುತ್ತಿದ್ದರು
ಹುಳಿಮಾವಿನಲ್ಲಿ ವೃದ್ಧೆಯೊಬ್ಬರ ಮನೆಯ ದಾಖಲೆ ಬಳಸಿಕೊಂಡು ಆರೋಪಿ ಏಜೆಂಟ್ ಗಳು ಬ್ಯಾಂಕ್‌ಗಳಿಂದ 1.50 ಕೋಟಿ ರೂ. ಸಾಲ ಪಡೆದಿದ್ದರು. ಮತ್ತೂಂದು ಪ್ರಕರಣದಲ್ಲಿ ಪುಟ್ಟೇನಹಳ್ಳಿಯಲ್ಲಿ ವೃದ್ಧೆಯೊಬ್ಬರ ಮನೆಗೆ ಸಂಬಂಧಿಸಿದ ನಕಲಿ ದಾಖಲೆ ಸೃಷ್ಟಿಸಿ 3.85 ಕೋಟಿ ರೂ. ಸಾಲ ಪಡೆದಿದ್ದರು. ಹುಳಿಮಾವು ನಿವಾಸಿ ಅಂಡಾಳ್ ಕುಪ್ಪಣ್ಣ (85) ಎಂಬುವವರ ಮನೆ ಖರೀದಿಸುವ ನೆಪದಲ್ಲಿ ದಾಖಲೆ ಪಡೆದು ಬ್ಯಾಂಕ್‌ಗೆ ಸಲ್ಲಿಸಿ ಸಾಲ ಮಂಜೂರು ಮಾಡಿಸಿಕೊಂಡಿದ್ದರು. 2023ರ ಡಿಸೆಂಬರ್‌ನಲ್ಲಿ ಏಜೆಂಟರುಗಳ ಕಳ್ಳಾಟದ ಬಗ್ಗೆ ಪೊಲೀಸರಿಗೆ ಸುಳಿವು ಸಿಕ್ಕಿತ್ತು. ಈ ಪ್ರಕರಣವು ಪೊಲೀಸ್ ಠಾಣೆ ಮೆಟ್ಟಿಲೇರಿದ ಬಳಿಕ ಏಜೆಂಟರಾದ ಭಾಸ್ಕರ್ ಕೃಷ್ಣ, ಮಹೇಶ್, ಅರುಣ್, ದಿವಾಕರ್ ಅವರನ್ನು ಬಂಧಿಸಿದ್ದರು.
The CCB police have arrested four managers of various banks for allegedly assisting agents in obtaining loans from banks by creating fake documents.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 04:38 pm
HK News Desk
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm