ಬ್ರೇಕಿಂಗ್ ನ್ಯೂಸ್
23-01-24 11:43 am Mangalore Correspondent ಕ್ರೈಂ
ಬಂಟ್ವಾಳ, ಜ.23: ತಾಯಿ ಮಗಳಿಗೆ ಚಾಕು ತೋರಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ನಗದು ದರೋಡೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ಪೋಲೀಸರು ಏಳು ಮಂದಿ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಾಳ ಗ್ರಾಮದ ದರ್ಖಾಸು ಮಾಳ, ಮಲ್ಲಾರು ನಿವಾಸಿ ಗಣೇಶ್ ನಾಯ್ಕ್, ಐಕಳ ಗ್ರಾಮದ ಬಳ್ಳಂಜೆ ಮುಂಡಿಕಾಡು ನಿವಾಸಿ ರಾಕೇಶ್ ಎಲ್. ಪಿಂಟೋ, ದರ್ಖಾಸು ಮಾಳ, ಮಲ್ಲಾರು ನಿವಾಸಿ ದಿನೇಶ್ ನಾಯ್ಕ್, ಕಾರ್ಕಳ ತಾಲೂಕಿನ ಮಾಳ ಗ್ರಾಮದ ಇಂದಿರಾನಗರ ನಿವಾಸಿ ಸಾಗರ್ ಶೆಟ್ಟಿ, ಕಡಬ ತಾಲೂಕಿನ ಕಾಯ್ಮುಣ ಗ್ರಾಮದ ಕೆಲೆಂಬೇರಿ ಬೆಳಂದೂರು ನಿವಾಸಿ ಎಂ.ಸೀತಾರಾಮ, ಕಡಬ ತಾಲೂಕಿನ ಕಾಯ್ಮುಣ ಗ್ರಾಮದ ಕೆಲೆಂಬೇರಿ ಬೆಳಂದೂರು ನಿವಾಸಿ ಸುಧೀರ್ ಹಾಗೂ ಮೂಲತಃ ಬಂಟ್ವಾಳ ಇರಾ ಗ್ರಾಮ, ಪ್ರಸ್ತುತ ಚಿಕ್ಕಮಗಳೂರು ಗೌರಿ ಕಾಲುವೆ ನಿವಾಸಿ ಮಹಮ್ಮದ್ ಹನೀಫ್ ಬಂಧಿತ ಆರೋಪಿಗಳು.
ಬಂಧಿತರಿಂದ ದರೋಡೆಗೈದ 3.15 ಲಕ್ಷ ಮೌಲ್ಯದ 54 ಗ್ರಾಂ ಚಿನ್ನಾಭರಣ ಹಾಗೂ 10 ಲಕ್ಷಮೌಲ್ಯದ ಇನ್ನೋವಾ ಮತ್ತು ಇಂಡಿಕಾ ಕಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಜ.11ರಂದು ಬೆಳಗ್ಗೆ 6 ಗಂಟೆ ವೇಳೆಗೆ ಬಂಟ್ವಾಳ ತಾಲೂಕಿನ ವಗ್ಗ ಸಮೀಪದ ಅಂಚಿಕಟ್ಟೆ ಮೇನಾಡು ನಿವಾಸಿ ಮರೀಟಾ ಸಿಂಥಿಯಾ ಪಿಂಟೋ ಎಂಬವರ ಮನೆಗೆ ನುಗ್ಗಿದ ಕಳ್ಳರು ದರೋಡೆ ನಡೆಸಿದ್ದರು. ಮುಸುಕುಧಾರಿಗಳು ಮನೆಯ ಕಾಲಿಂಗ್ ಬೆಲ್ ಹಾಕಿದ್ದರು. ಮನೆಯಲ್ಲಿ ತಾಯಿ ಪ್ಲೋರಿನಾ ಪಿಂಟೊ ಹಾಗೂ ಮಗಳು ಮರಿಟಾ ಪಿಂಟೋ ಮಾತ್ರ ಇದ್ದರು. ಬಾಗಿಲು ತೆರೆದ ಕೂಡಲೇ ಮನೆಯೊಳಗೆ ನುಗ್ಗಿ, ಚೂರಿ ತೋರಿಸಿ ಕಪಾಟು ಕೀ ನೀಡುವಂತೆ ಹೆದರಿಸಿದ್ದಾರೆ. ನೀಡದಿದ್ದರೆ ಕೊಲ್ಲುವ ಬೆದರಿಕೆ ಹಾಕಿದ್ದರು.
ಹೆದರಿದ ಮರಿಟಾ ಪಿಂಟೋ ಕಪಾಟು ಕೀ ನೀಡಿದ್ದು ಕಳ್ಳರು ಗೊದ್ರೇಜ್ ನಲ್ಲಿದ್ದ ಚಿನ್ನ ಹಾಗೂ ನಗದು ಹಣವನ್ನು ದೋಚಿದ್ದಾರೆ. ಈ ಸಂದರ್ಭದಲ್ಲಿ ಮಗಳು ಮರಿಟಾ ಪಿಂಟೊ ಹಾಗೂ ಮುಸುಕುಧಾರಿಗಳ ನಡುವೆ ಗಲಾಟೆ ನಡೆದಿದ್ದು, ಅವರ ಕೈಗೆ ಗಾಯವಾಗಿತ್ತು. ಘಟನೆ ನಡೆದ ಸ್ಥಳಕ್ಕೆ ಮಂಗಳೂರು ಎಸ್.ಪಿ.ರಿಷ್ಯಂತ್ ಭೇಟಿ ನೀಡಿದ್ದು ಪ್ರಕರಣವನ್ನು ಪತ್ತೆ ಹಚ್ಚಲು ಮೂರು ವಿಶೇಷ ತಂಡವನ್ನು ರಚನೆ ಮಾಡಿದ್ದರು.
ಹೆಚ್ಚುವರಿ ಪೋಲೀಸ್ ಅಧೀಕ್ಷರುಗಳಾದ ಧರ್ಮಪ್ಪ ಮತ್ತು ರಾಜೇಂದ್ರ ಸಹಭಾಗಿತ್ವದಲ್ಲಿ ಬಂಟ್ವಾಳ ಡಿವೈಎಸ್ಪಿ ಎಸ್.ವಿಜಯಪ್ರಸಾದ್ ನೇತೃತ್ವದಲ್ಲಿ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ , ಪುಂಜಾಲಕಟ್ಟೆ ಎಸ್.ಐ.ನಂದಕುಮಾರ್, ಬಂಟ್ವಾಳ ಗ್ರಾಮಾಂತರ ಎಸ್. ಐ.ಹರೀಶ್ ಎಂ.ಆರ್, ಅವರ ಮೂರು ವಿಶೇಷ ತಂಡಗಳನ್ನು ರಚಿಸಿ ಅಪರಾಧ ಸಿಬ್ಬಂದಿ ಗಳಾದ ಎ.ಎಸ್.ಐ.ಗಿರೀಶ್, ಹೆಚ್.ಸಿ.ಗಳಾದ ರಾಧಾಕೃಷ್ಣ, ಸುಜು, ಉದಯ ರೈ, ಅದ್ರಾಮ, ಪ್ರವೀಣ್ ರೈ, ಪ್ರವೀಣ್ ,ಸಂದೀಪ್, ರಾಹುಲ್, ಇರ್ಶಾದ್, ರಾಜೇಶ್, ಹರಿಶ್ಚಂದ್ರ, ಪಿಸಿಗಳಾದ ಪುನೀತ್, ರಮ್ಜಾನ್, ಯೋಗೇಶ್ ಡಿ.ಎಲ್, ಕುಮಾರ್ ಎಚ್, ಕೆ.ವಿನಾಯಕ ಬಾರ್ಕಿ, ಜಗದೀಶ್ ಅತ್ತಾಜೆ, ಝಮೀರ್ ಖಲಾರಿ, ಎ.ಹೆಚ್.ಸಿ.ಗಳಾದ ಕುಮಾರ್, ಮಹಾಂತೇಶ್, ಜಿಲ್ಲಾ ಪೊಲೀಸ್ ಕಚೇರಿಯ ಗಣಕಯಂತ್ರ ವಿಭಾಗದ ದಿವಾಕರ್, ಸಂಪತ್ ಅವರನ್ನು ಒಳಗೊಂಡ ತಂಡ ಕಾರ್ಯಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
Seven arrested for robbery in Bantwal Mangalore by DK Police. The arrested are notorious gang members of Dacoity. Mother and daughter were tied up at house and were robbed of gold and cash.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 04:38 pm
HK News Desk
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm