ಬ್ರೇಕಿಂಗ್ ನ್ಯೂಸ್
24-01-24 03:58 pm HK News Desk ಕ್ರೈಂ
ಮಂಡ್ಯ, ಜ 24: ಮೇಲುಕೊಟೆಯ ಶಿಕ್ಷಕಿ ದೀಪಿಕಾ ಹತ್ಯೆ ಪ್ರಕರಣದಿಂದ ಇಡೀ ಮಂಡ್ಯ ಜಿಲ್ಲೆ ಬೆಚ್ಚಿ ಬಿದ್ದಿದೆ. 28 ವರ್ಷದ ಅತಿಥಿ ಶಿಕ್ಷಕಿ ದೀಪಿಕಾ ಶವ ಮೇಲುಕೋಟೆಯ ಯೋಗಾನರಸಿಂಹ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಪತ್ತೆಯಾಗಿತ್ತು. ಮಣ್ಣಿನಲ್ಲಿ ಹೂತಿಟ್ಟ ರೀತಿಯಲ್ಲಿ ದೀಪಿಕಾ ಶವ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡ ಪೊಲೀಸರು, ಇದೀಗ ಯುವಕನೋರ್ವನ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ.
ಈ ಯುವಕ ದೀಪಿಕಾ ಅವರನ್ನು ಅಕ್ಕಾ ಅಕ್ಕಾ ಎಂದುಕೊಂಡು ದೀಪಿಕಾಗೆ ಹತ್ತಿರವಾಗಿದ್ದ. ಆತನ ಮೇಲೆ ದೀಪಿಕಾ ಪತಿ ಅನುಮಾನ ವ್ಯಕ್ತಪಡಿಸಿದ್ದು, ಇದೀಗ ನಾಪತ್ತೆಯಾಗಿರುವ ಈ ಯುವಕನ ಮೇಲೆ ಪೊಲೀಸರಿಗೂ ಅನುಮಾನ ತೀವ್ರಗೊಂಡಿದೆ.
ದೀಪಿಕಾ ಕುಟುಂಬಸ್ಥರು ಯುವಕನ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ. ಇದೇ ಸಂದರ್ಭದಲ್ಲಿ ಆತ ಕೂಡ ನಾಪತ್ತೆಯಾಗಿರುವುದು ಅನುಮಾನ ತೀವ್ರವಾಗುವಂತೆ ಮಾಡಿದೆ. ಪ್ರಕರಣದ ತನಿಖೆಯನ್ನು ಚುರುಕುಗೊಳಿಸಲಾಗಿದ್ದು, ಎಲ್ಲಾ ಆಯಾಮದಿಂದಲೂ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಹತ್ಯೆ ದಿನ ದೀಪಿಕಾ ಮತ್ತು ಯುವಕನ ನಡುವೆ ಜಗಳ ನಡೆದಿದೆ. ಈ ಜಗಳದ ದೃಶ್ಯವನ್ನು ಮೇಲುಕೋಟೆ ಯೋಗನರಸಿಂಹ ಸ್ವಾಮಿ ದೇವಸ್ಥಾನಕ್ಕೆ ಬಂದಿದ್ದ ಪ್ರವಾಸಿಗರು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ. ಘಟನೆ ಬಳಿಕ ಪ್ರವಾಸಿಗರು ಪೊಲೀಸರಿಗೆ ವಿಡಿಯೋವನ್ನು ನೀಡಿದ್ದಾರೆ. ಇದೇ ಸ್ಥಳದಲ್ಲಿಯೇ ದೀಪಿಕಾ ಅವರ ಮೃತದೇಹ ಪತ್ತೆಯಾಗಿತ್ತು.
ಇದಲ್ಲದೆ ಯುವಕ ತನ್ನ ತಂದೆಗೆ ಸಂದೇಶವೊಂದನ್ನು ರವಾನಿಸಿದ್ದು, ನನ್ನ ಹುಡುಕಬೇಡಿ, ಅಕ್ಕಗೆ ಒಳ್ಳೆ ಕಡೆ ಮದುವೆ ಮಾಡಿದ್ದಾನೆಂಬ ವಿಚಾರ ಕೂಡ ಇದೀಗ ಬೆಳಕಿಗೆ ಬಂದಿದೆ. ಈ ಎಲ್ಲಾ ಅಂಶಗಳು ಯುವಕ ಮೇಲೆ ಅನುಮಾನ ತೀವ್ರಗೊಳ್ಳುವಂತೆ ಮಾಡಿದೆ.
30 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ ಪೊಲೀಸರು ;
ಪ್ರಕರಣ ಸಂಬಂಧ ಹತ್ಯೆಯಾದ 30 ಗಂಟೆಯೊಳಗಾಗಿ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ನಿತೀಶ್ (21) ಬಂಧಿತ ಆರೋಪಿಯಾಗಿದ್ದಾನೆ. ಡಿವೈಎಸ್ಪಿ ಮುರಳಿ ನೇತೃತ್ವದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.
ತನಿಖೆ ವಿಚಾರಣೆ ವೇಳೆ ದೀಪಿಕಾರನ್ನು ಪ್ಲ್ಯಾನ್ ಮಾಡಿಯೇ ಕೊಲೆ ಮಾಡಿರುವುದು ತಿಳಿದುಬಂದಿದೆ. ಕೊಲೆಗೂ ಮುನ್ನ ನಿತೀಶ್ ಗುಂಡಿ ತೆಗೆದಿದ್ದನು. ನಂತರ ದೀಪಿಕಾರನ್ನು ಮೇಲುಕೋಟೆ ಬೆಟ್ಟದ ತಪ್ಪಲಿನಲ್ಲಿ ಅಡ್ಡಗಟ್ಟಿ ಕೊಲೆ ಮಾಡಿ ಹೂತು ಹಾಕಿದ್ದನು ಎಂದು ತಿಳಿದುಬಂದಿದೆ.
ಪ್ರಕರಣದ ದಿಕ್ಕು ತಪ್ಪಿಸಲು ನಾಟಕವಾಡ್ಡಿದ್ದ ಆರೋಪಿ ನಿತೇಶ್, ಕೊಲೆಯಾದ ಮಾರನೇ ದಿನ ದೀಪಿಕಾಳ ತಂದೆಗೆ ತಾನೇ ಕರೆ ಮಾಡಿದ್ದನು. ಅಪ್ಪಾಜಿ ದೀಪಿಕಾ ಅಕ್ಕಾ ಸಿಕ್ಕಿದ್ರಾ ಎಂದು ವಿಚಾರಿಸಿದ್ದನು. ಆ ಮೂಲಕ ತನ್ನ ಮೇಲೆ ಅನುಮಾನ ಬಾರದಂತೆ ನಿತೇಶ್ ನಾಟಕವಾಡಿದ್ದನು. ಮೃತ ದೀಪಿಕಾಳನ್ನ ಅಕ್ಕ ಅಂತ ಕರೆದರೆ, ಆಕೆಯ ತಂದೆಯನ್ನ ಅಪ್ಪಾಜಿ ಎಂದು ನಿತೇಶ್ ಕರೆಯುತ್ತಿದೆ.
ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿ ನಿವಾಸಿಯಾಗಿದ್ದ ದೀಪಿಕಾ ಅವರು ಜನವರಿ 20 ರಂದು ಎಂದಿನಂತೆ ಶಾಲೆಗೆ ಹೋಗಿದ್ದರು. ಆದರೆ, ಮನೆಗೆ ವಾಪಸ್ ಆಗಿರಲಿಲ್ಲ. ಹೀಗಾಗಿ ತನ್ನ ಪತ್ನಿ ನಾಪತ್ತೆಯಾಗಿರುವುದಾಗಿ ಪತಿ ಲೋಕೇಶ್ ದೂರು ನೀಡಿದ್ದರು.
ಅಲ್ಲದೆ, ದೀಪಿಕಾಳಿಗಾಗಿ ಕುಟುಂಬಸ್ಥರು ಹುಡುಕಾಟ ನಡೆಸುತ್ತಿದ್ದಾಗ ಮೇಲಕೋಟೆ ಬೆಟ್ಟದ ತಪ್ಪಲಿನಲ್ಲಿ ಆಕೆಯ ಡಿಯೋ ಸ್ಕೂಟರ್ ಪತ್ತೆಯಾಗಿತ್ತು. ಈ ಪ್ರದೇಶದ ಸುತ್ತಮುತ್ತ ತೀವ್ರ ಹುಡುಕಾಟ ನಡೆಸಿದಾಗ ಹೂತಿದ್ದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಈ ಬಗ್ಗೆ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಅದರಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ತಹಶೀಲ್ದಾರ್, ಮೃತದೇಹದ ಹೊರತೆಗೆದಾಗ, ಶವ ದೀಪಿಕಾಳದ್ದಾಗಿತ್ತು. ಶವ ಪತ್ತೆಯಾಗುತ್ತಿದ್ದಂತೆ ನಿತೀಶ್ ಗ್ರಾಮದಿಂದ ಪರಾರಿಯಾಗಿದ್ದು, ದೀಪಿಕಾಳ ಪತಿ ಲೋಕೇಶ್, ನಿತೀಶ್ ಮೇಲೆ ಶಂಕೆ ವ್ಯಕ್ತಪಸಿಡಿದ್ದರು. ಅಲ್ಲದೆ ದೀಪಿಕಾಳನ್ನ ಯುವಕನೊಬ್ಬ ಎಳೆದಾಡುತ್ತಿದ್ದ ದೃಶ್ಯವನ್ನ ಬೆಟ್ಟದ ಮೇಲಿಂದ ಪ್ರವಾಸಿಗೊಬ್ಬರು ವಿಡಿಯೋ ಮಾಡಿದ್ದರು. ಇದನ್ನು ಪೊಲೀಸರಿಗೆ ಒಪ್ಪಿಸಲಾಗಿತ್ತು.
28 year old teacher murder in Mandya, 21 year old youth arrested by Police, Pre plan murder A 28-year-old schoolteacher has been killed and buried in Karnataka’s Mandya district allegedly by her distant relative, police said, adding that her body was discovered on Monday.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm