ಬ್ರೇಕಿಂಗ್ ನ್ಯೂಸ್
25-01-24 05:55 pm Mangalore Correspondent ಕ್ರೈಂ
ಪುತ್ತೂರು, ಜ.25: ಮೆರೈನ್ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಯುವಕನೊಬ್ಬನಿಗೆ ಕೆಲಸ ತೆಗೆಸಿಕೊಡುತ್ತೇನೆಂದು ಹೇಳಿ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ವ್ಯಕ್ತಿ ಎರಡು ಲಕ್ಷಕ್ಕೂ ಹೆಚ್ಚು ಹಣ ಪಡೆದು ವಂಚಿಸಿದ ಬಗ್ಗೆ ಪ್ರಕರಣ ದಾಖಲಾಗಿದೆ.
ಬಿಳಿಯೂರು ಗ್ರಾಮದ ಪೆರ್ನೆ ನಿವಾಸಿ ಭವಿತ್ ಕೆ.ಎನ್ (23) ಎಂಬವರು ಉಪ್ಪಿನಂಗಡಿ ಠಾಣೆಗೆ ದೂರು ನೀಡಿದ್ದಾರೆ. ಭವಿತ್ ಮೆರೈನ್ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದು, ಕೆಲಸಕ್ಕಾಗಿ ಪ್ರಯತ್ನಿಸುತ್ತಿದ್ದಾಗ ಸಾಮಾಜಿಕ ಜಾಲತಾಣದಲ್ಲಿ (ಇನ್ಟಾಗ್ರಾಮ್) ಪ್ರಜ್ವಲ್ ಎಂಬಾತನ ಪರಿಚಯವಾಗಿತ್ತು. 2023ರ ಜೂನ್ 5ರಂದು ಬೆಂಗಳೂರಿನಲ್ಲಿ ಭೇಟಿ ಮಾಡಿ, ಮೆರೈನ್ ನಲ್ಲಿ ಕೆಲಸಕ್ಕಾಗಿ ರೂ. 3,00,000/- ಖರ್ಚು ಇದೆ ಎಂದು ನಂಬಿಸಿದ್ದ.
ಅದರಂತೆ, ಜೂನ್ 16ರಿಂದ 28ರ ಅವಧಿಯಲ್ಲಿ ಹಂತ-ಹಂತವಾಗಿ, ಆಪಾದಿತನ ಖಾತೆಗೆ ಒಟ್ಟು 2,10,000/- ರೂ ಹಣವನ್ನು ಪಾವತಿಸಿದ್ದರು. ನಂತರ ಆಪಾದಿತನು ನಿಮಗೆ ಕೆಲಸ ಮಾಡಿಕೊಡಲು ಆಗುವುದಿಲ್ಲ. 10 ದಿವಸದೊಳಗೆ ಹಣವನ್ನು ವಾಪಸ್ ಕೊಡುತ್ತೇನೆಂದು ಹೇಳಿ ನಂಬಿಸಿದ್ದ. ಈವರೆಗೆ ಕೆಲಸವನ್ನೂ ಮಾಡಿಕೊಡದೆ, ಹಣವನ್ನೂ ಹಿಂತಿರುಗಿಸದೇ, ಮೋಸ ಮಾಡಿರುವುದಾಗಿ ದೂರು ನೀಡಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ:11/2024 ಕಲಂ: 417, 420 ಐಪಿಸಿ ಪ್ರಕರಣ ದಾಖಲಿಸಿದ್ದಾರೆ.
A case has been registered against a youth studying marine engineering for allegedly duping him of more than Rs 2 lakh by a man he met on social media on the pretext of getting him a job.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm