ಬ್ರೇಕಿಂಗ್ ನ್ಯೂಸ್
01-02-24 10:35 pm Mangalore Correspondent ಕ್ರೈಂ
ಮಂಗಳೂರು, ಫೆ.1: ಮಂಗಳೂರಿನ ಮುಸ್ಲಿಂ ಮಹಿಳೆಯೊಬ್ಬರಿಗೆ ಬ್ರಹ್ಮಾವರ ಮೂಲದ ಯುವಕನೊಬ್ಬ ಮದುವೆಯಾಗುತ್ತೇನೆಂದು ನಂಬಿಸಿ ಅತ್ಯಾಚಾರ ನಡೆಸಿದ್ದಲ್ಲದೆ, ಆರು ಲಕ್ಷ ರೂಪಾಯಿ ಹಣ ಲಪಟಾಯಿಸಿದ ಬಗ್ಗೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ರಹ್ಮಾವರ ತಾಲೂಕಿನ ಮಾನೂರು ಗ್ರಾಮದ ದೇವದಾಸ್ ದೇವಾಡಿಗ(42) ಆರೋಪಿಯಾಗಿದ್ದು, ಗಂಡನಿಂದ ದೂರವಾಗಿದ್ದ ಮಹಿಳೆಯನ್ನು ನಂಬಿಸಿ ಮದುವೆಯಾಗುತ್ತೇನೆಂದು ಹೇಳಿ 2021ರಿಂದ ಎರಡು ವರ್ಷಗಳ ಕಾಲ ದೈಹಿಕ ಸಂಪರ್ಕ ನಡೆಸಿದ್ದ. ಮಹಿಳೆಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ಹೊಕ್ಕಿದ್ದ ಈ ವ್ಯಕ್ತಿ ತನ್ನ ಮೊಬೈಲಿನಲ್ಲಿ ಮಹಿಳೆಯ ಫೋಟೋ ಕ್ಲಿಕ್ಕಿಸಿ ಬ್ಲಾಕ್ಮೇಲ್ ಮಾಡಿದ್ದಾನೆ. ಆನಂತರ, ಮಹಿಳೆಯ ಕೈಯಿಂದಲೇ ಆರು ಲಕ್ಷಕ್ಕೂ ಹೆಚ್ಚು ಹಣವನ್ನು ಪಡೆದಿದ್ದು, ಆನಂತರ ಬೇರೆ ಮದುವೆಗೆ ಸಿದ್ಧತೆ ನಡೆಸಿದ್ದಾನೆ.
ಹಣ ಪಡೆದಿದ್ದಲ್ಲದೆ, ದೈಹಿಕ ಸಂಪರ್ಕ ನಡೆಸಿ ಮೋಸ ಮಾಡಿರುವ ಯುವಕನ ಬಗ್ಗೆ ಮಹಿಳೆ ಕೋಟ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಹಿಳೆ ಮಂಗಳೂರಿನಲ್ಲಿ ನೆಲೆಸಿದ್ದರೂ, ಮೂಲತಃ ಬ್ರಹ್ಮಾವರ ಮೂಲದವವರು. ಈ ಹಿನ್ನೆಲೆಯಲ್ಲಿ ಕನ್ನಡ ರಕ್ಷಣಾ ವೇದಿಕೆಯಲ್ಲಿದ್ದೇನೆಂದು ಹೇಳಿ ಯುವಕ ಮಹಿಳೆಗೆ ನೈತಿಕ ಬೆಂಬಲ ನೀಡುತ್ತೇನೆಂದು ಹೇಳಿ ಹತ್ತಿರವಾಗಿದ್ದು ಬಳಿಕ ಮೋಸ ಮಾಡಿದ್ದಾನೆ. ಈ ಬಗ್ಗೆ ನೊಂದಿರುವ ಮಹಿಳೆ ಉಡುಪಿ ಎಸ್ಪಿ ಅವರನ್ನು ಭೇಟಿಯಾಗಿ ಎರಡು ತಿಂಗಳ ಹಿಂದೆ ದೂರು ನೀಡಿದ್ದರು. ಕೋಟ ಠಾಣೆಗೆ ಪ್ರಕರಣ ವರ್ಗಾಯಿಸಿದ್ದ ಎಸ್ಪಿ ಆರೋಪಿ ಬಂಧನಕ್ಕೆ ಸೂಚಿಸಿದ್ದರು. ಆದರೆ, ಕೋಟ ಪೊಲೀಸರು ಎಫ್ಐಆರ್ ದಾಖಲಿಸಿದ್ದರೂ, ಆರೋಪಿಯನ್ನು ಬಂಧಿಸಿಲ್ಲ. ಮಹಿಳೆ ಬಳಿಕ ಆರೋಪಿಯ ಬಂಧನದ ಬಗ್ಗೆ ಪ್ರಶ್ನೆ ಮಾಡಿದಾಗ, ಪ್ರಕರಣವನ್ನು ಉಡುಪಿ ಮಹಿಳಾ ಠಾಣೆಗೆ ವರ್ಗಾಯಿಸಿದ್ದಾಗಿ ತಿಳಿಸಿದ್ದಾರೆ. ಕೋಟ ಪೊಲೀಸರು ಕೃತ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಲ್ಲದೆ, ಆರೋಪಿಯನ್ನು ಬಂಧಿಸದೆ ವಿಚಾರಣೆ ನೆಪದಲ್ಲಿ ತನ್ನನ್ನೇ ಪ್ರಶ್ನೆ ಮಾಡುತ್ತಿರುವುದಾಗಿ ಮಹಿಳೆ ಹೆಡ್ ಲೈನ್ ಕರ್ನಾಟಕಕ್ಕೆ ತಿಳಿಸಿದ್ದಾರೆ.
Muslim women raped promsing of marriage in Mangalore, blackmail of video. A csse has been filed against Devdas Devadiga but udupi police have made on arrest so far.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm