ಬ್ರೇಕಿಂಗ್ ನ್ಯೂಸ್
08-02-24 09:39 pm Mangalore Correspondent ಕ್ರೈಂ
ಮಂಗಳೂರು, ಫೆ.8: ಕಾವೂರು ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿರುವ ಸಂತೋಷ್ ಸಿಜೆ ಎಂಬ ಸಿಬಂದಿ ದೂರು ಹೇಳಿಕೊಂಡು ಬಂದ ಮಹಿಳೆಯೊಬ್ಬರಿಗೆ ಅಸಹ್ಯ ರೀತಿಯಲ್ಲಿ ಸಂದೇಶ ಕಳುಹಿಸಿ ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು, ಆ ವ್ಯಕ್ತಿಯನ್ನು ಪೊಲೀಸ್ ಕಮಿಷನರ್ ಕರ್ತವ್ಯದಿಂದ ಸಸ್ಪೆಂಡ್ ಮಾಡಿದ್ದಾರೆ.
ಜನಸಾಮಾನ್ಯರ ದೂರು ಆಲಿಸುವ ಸ್ಥಾನದಲ್ಲಿರುವ ಪೊಲೀಸ್ ಸಿಬಂದಿಯೇ ಹಲವು ಸಮಯದಿಂದ ಮಹಿಳೆಯ ಮೊಬೈಲ್ ನಂಬರ್ ಪಡೆದು ಅಸಭ್ಯ ರೀತಿಯಲ್ಲಿ ಮೆಸೇಜ್ ಕಳಿಸುತ್ತಿದ್ದುದಲ್ಲದೆ, ಮಾನಸಿಕ ಕಿರುಕುಳ ನೀಡಿದ್ದಾನೆ. ಇದರಿಂದ ನೊಂದಿದ್ದ ಮಹಿಳೆ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರನ್ನು ಭೇಟಿಯಾಗಿ ದೂರು ಹೇಳಿಕೊಂಡಿದ್ದರು. ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಸಂತೋಷ್ ಕರೆ ಮಾಡಿ, ಧಮಕಿ ಹಾಕಿರುವ ಆಡಿಯೋ ರೆಕಾರ್ಡ್ ಆಗಿದ್ದು, ಅದನ್ನೂ ಪೊಲೀಸ್ ಕಮಿಷನರ್ ಗೆ ನೀಡಿದ್ದಾರೆ. ಅಲ್ಲದೆ, ರಾತ್ರಿ ವೇಳೆ ತನ್ನ ಕಾರನ್ನು ಅಡ್ಡಗಟ್ಟಿ ಕಿರುಕುಳ ನೀಡಿರುವುದನ್ನೂ ಪೊಲೀಸ್ ಹಿರಿಯಧಿಕಾರಿಗಳ ಗಮನಕ್ಕೆ ಮಹಿಳೆ ತಂದಿದ್ದಾರೆ. ನೀನು ಪೊಲೀಸ್ ದೂರು ಕೊಟ್ಟರೆ, ನಿನ್ನ ಕುಟುಂಬವನ್ನು ಮುಗಿಸುತ್ತೇನೆ. ಇಡೀ ಜೀವನ ಪರ್ಯಂತ ಕೊರಗುವಂತೆ ಮಾಡುತ್ತೇನೆಂದು ಮಹಿಳೆಯನ್ನು ಬೆದರಿಸಿದ್ದಾಗಿ ನೊಂದ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಆಡಿಯೋ ಮತ್ತು ವಾಟ್ಸಪ್ ಸಂದೇಶಗಳನ್ನು ನೋಡಿದ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್, ಮೇಲ್ನೋಟಕ್ಕೆ ಅಪರಾಧ ಸಂಜ್ಞೆ ಕಂಡಿದ್ದರಿಂದ ಪೊಲೀಸ್ ಪೇದೆಯನ್ನು ಅಮಾನತುಗೊಳಿಸಿ ಬಿಸಿ ಮುಟ್ಟಿಸಿದ್ದಾರೆ. ಅಲ್ಲದೆ, ಕೃತ್ಯದ ಬಗ್ಗೆ ತನಿಖೆ ಕೈಗೊಂಡು ವರದಿ ನೀಡುವಂತೆ ಮಂಗಳೂರು ಉತ್ತರ ವಿಭಾಗದ ಎಸಿಪಿಗೆ ಆದೇಶ ಮಾಡಿದ್ದಾರೆ. ಅಮಾನತು ಆದೇಶಕ್ಕೊಳಗಾದ ಸಿಬಂದಿ ಸಂತೋಷ್ ಅದನ್ನು ರದ್ದುಪಡಿಸುವಂತೆ ಕಾಂಗ್ರೆಸ್ ನಾಯಕರ ಮೂಲಕ ಒತ್ತಡ ಹೇರಿದ್ದಾರೆ ಎನ್ನುವ ಮಾಹಿತಿಗಳಿದ್ದು, ಅದಕ್ಕಾಗಿ ಮಹಿಳೆಯಿಂದ ದೂರು ಹಿಂಪಡೆಯುವಂತೆ ಪ್ರಯತ್ನಿಸಿದ್ದಾರೆ ಎನ್ನುವ ಮಾತೂ ಕೇಳಿಬಂದಿದೆ.
Mangalore Kavoor Police Constable Santosh suspended over sexual harrasment to women. Santosh was textinf incident text messages to Women who had come to file a complaint at the station. Police commissioner Anupam Agarwal has suspended santosh soon after the incident came to light.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm