ಬ್ರೇಕಿಂಗ್ ನ್ಯೂಸ್
16-02-24 10:46 pm Mangalore Correspondent ಕ್ರೈಂ
ಉಳ್ಳಾಲ, ಫೆ.16: ಬೈಕಲ್ಲಿ ತೆರಳುತ್ತಿದ್ದ ಯುವಕನ ತಡೆದು ಇರಿದು ಕೊಲೆ ಮಾಡಲು ಯತ್ನಿಸಿದ ಘಟನೆ ರಾ.ಹೆ. 66 ರ ಕೊಲ್ಯ ಎಂಬಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದ್ದು ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಉಳ್ಳಾಲ ಪೊಲೀಸರು ಪ್ರಮುಖ ಆರೋಪಿಯನ್ನ ಬಂಧಿಸಿ ಹೆಡೆಮುರಿ ಕಟ್ಟಿದ್ದಾರೆ.
ಕುಂಪಲ ನಿವಾಸಿ ಮಹಮ್ಮದ್ ಆರಿಫ್(29) ಇರಿತಕ್ಕೊಳಗಾದ ಯುವಕ. ಆರಿಫ್ ಶುಕ್ರವಾರ ಬೆಳಗ್ಗೆ ಕೊಲ್ಯದಿಂದ ಕುಂಪಲದ ಕಡೆಗೆ ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಲ್ಲಿ ಸಂಚರಿಸುತ್ತಿದ್ದ ವೇಳೆ ಕುಂಪಲದಿಂದ ಕೊಲ್ಯ ಕಡೆಗೆ ಬೈಕ್‌ನಲ್ಲಿ ಧಾವಿಸುತ್ತಿದ್ದ ಮುಝಮ್ಮಿಲ್ ಮತ್ತು
ನಿಸಾರ್ ಎಂಬಿಬ್ಬರು ಆರಿಫ್ ನನ್ನು ಕೊಲ್ಯ ಎಂಬಲ್ಲಿ ತಡೆದಿದ್ದಾರೆ. ಆರೋಪಿಗಳು ಆರೀಫ್ ಗೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆಗೆ ಯತ್ನಿಸಿದ್ದಾರೆ.
ಈ ವೇಳೆ ಮುಝಮ್ಮಿಲ್ ಚೂರಿಯಿಂದ ಇರಿಯಲು ಯತ್ನಿಸಿದ ಸಂದರ್ಭ ಆರೀಫ್ ತಪ್ಪಿಸಿಕೊಂಡು ಹೋಗದಂತೆ ನಿಸಾರ್ ಅಡ್ಡಗಟ್ಟಿದ್ದ ಎನ್ನಲಾಗಿದೆ. ಇದರಿಂದ ಆರೀಫ್ ಬೆನ್ನಿಗೆ ಗಾಯವಾಗಿದ್ದು , ತಕ್ಷಣ ಅವರು ಘಟನಾ ಸ್ಥಳದಿಂದ ತಪ್ಪಿಸಿಕೊಂಡಿದ್ದು, ಆರೋಪಿಗಳು ವಿಚಲಿತರಾಗಿ ಪರಾರಿಯಾಗಿದ್ದಾರೆ. ಗಂಭೀರ ಗಾಯಗೊಂಡಿದ್ದ ಆರೀಫ್ ಅವರನ್ನು ಸ್ಥಳದಲ್ಲಿದ್ದ ಶ್ರವಣ್ ಮತ್ತು ಉತ್ತಮ್ ಎಂಬಿಬ್ಬರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಬಗ್ಗೆ ಮಾಹಿತಿ ಪಡೆದ ಉಳ್ಳಾಲ ಪೊಲೀಸರು ಕ್ಷಿಪ್ರ ಕಾರ್ಯಾಚರಿಸಿ ಕೃತ್ಯ ಎಸಗಿದ ಪ್ರಮುಖ ಆರೋಪಿ
ಮುಝಮ್ಮಿಲ್ ನನ್ನು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ನಿಝಾರ್ ಪತ್ತೆಗಾಗಿ ಬಲೆ ಬೀಸಿದ್ದಾರೆ.
Kolya Murder attempt after trying to stop bike, prime accused arrested by Ullal police in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm