ಬ್ರೇಕಿಂಗ್ ನ್ಯೂಸ್
27-02-24 03:45 pm HK News Desk ಕ್ರೈಂ
ಮಂಡ್ಯ, ಫೆ 27: ಹಣಕ್ಕಾಗಿ ಮಗನೇ ತಂದೆಯನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ಮಂಡ್ಯದ ಸುಂಡಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಂಜಪ್ಪ (65) ಎಂಬವರು ಹತ್ಯೆಯಾದ ದುರ್ದೈವಿ. ಮಹದೇವ್ ಕೊಲೆ ಆರೋಪಿಯಾಗಿದ್ದು, ಹಣಕ್ಕಾಗಿ ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ತಂದೆಯನ್ನು ಹತ್ಯೆಗೈದ ಬಳಿಕ ಆರೋಪಿ ತಲೆ ಮರೆಸಿಕೊಂಡಿದ್ದಾನೆ.
ನಂಜಪ್ಪ ತಮ್ಮ ಜಮೀನನ್ನು ಮಗನಿಗೆ ಹಾಗೂ ಮಗಳಿಗೆ ಹಂಚಿದ್ದರು. ಇತ್ತೀಚೆಗೆ 20 ಗುಂಟೆ ಜಮೀನನ್ನು ಮಾರಾಟ ಮಾಡಿ, ಬಂದ ಹಣದಲ್ಲಿ ಒಂದು ಭಾಗ ಮಗನಿಗೆ, ಒಂದು ಭಾಗ ಮಗಳು ಸೌಭಾಗ್ಯ ಎಂಬವರಿಗೆ ನೀಡಿದ್ದರು. ಸ್ವಲ್ಪ ಹಣವನ್ನು ನಂಜಪ್ಪ ಅವರು ಇಟ್ಟುಕೊಂಡಿದ್ದರು. ಆರೋಪಿ ಮಹದೇವ್ ತಂದೆ ನೀಡಿದ್ದ ಹಣ ಖರ್ಚು ಮಾಡಿಕೊಂಡು, ತಂದೆಯ ಬಳಿ ಹಣಕ್ಕಾಗಿ ಆಗಾಗ ಜಗಳ ಆಡುತ್ತಿದ್ದ ಎಂದು ತಿಳಿದು ಬಂದಿದೆ.
ಹಣದ ವಿಚಾರಕ್ಕೆ ಸೋಮವಾರ ರಾತ್ರಿ ಸಹ ತಂದೆಯ ಮನೆಗೆ ನುಗ್ಗಿ, ತಂದೆ-ತಾಯಿಗಳ ಮೇಲೆ ಮಹದೇವ್ ಹಲ್ಲೆ ಮಾಡಿದ್ದಾನೆ. ಬಳಿಕ ತಂದೆಯ ತಲೆಯ ಮೇಲೆ ಕಲ್ಲು ಹಾಕಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ಇನ್ನೂ ಗಂಭೀರವಾಗಿ ಗಾಯಗೊಂಡಿರುವ ತಾಯಿ ಮಹದೇವಮ್ಮ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
Mandya murder, son fills own father over money and flees away. Mandya police are now on the hunt for the missing son.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm