ಬ್ರೇಕಿಂಗ್ ನ್ಯೂಸ್
27-02-24 06:18 pm Bangalore Correspondent ಕ್ರೈಂ
ಬೆಂಗಳೂರು, ಫೆ 27: ಡ್ರಗ್ ಪೆಡ್ಲರ್‌ಗಳ ವಿರುದ್ಧ ಸಿಸಿಬಿbಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಸೋಲದೇವನಹಳ್ಳಿ ಮತ್ತು ಆರ್ಎಂಸಿ ಯಾರ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂವರು ವಿದೇಶಿ ಮೂಲದ ಡ್ರಗ್ ಪೆಡ್ಲರ್‌ಗಳು ಸೇರಿದಂತೆ ಒಟ್ಟು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಘಾನಾ ಮೂಲದ ಇಮ್ಯಾನ್ಯುಲ್ ಕ್ವಾಸಿ (32), ನೈಜೀರಿಯಾ ಮೂಲದ ಚೈನಸಾ ಸಿಪ್ರಿಲಾನ್ ಒಕೋಯ್ (38) ಹಾಗೂ ಕಲು ಚುಕ್ವಾ (40) ಎಂಬಾತನ ಸಹಿತ ನಾಲ್ವರನ್ನು ಬಂಧಿಸಲಾಗಿದೆ. ಬಂಧಿತರಿಂದ ಒಟ್ಟು 2.35 ಕೋಟಿ ಮೌಲ್ಯದ 730 ಗ್ರಾಂ ಎಂಡಿಎಂಎ ಕ್ರಿಸ್ಟಲ್ಸ್, 1273 ಎಕ್ಸ್ಟಸಿ ಪಿಲ್ಸ್, 42 ಗ್ರಾಂ ಹೈಡೋಗಾಂಜಾ ಮತ್ತು ಕೃತ್ಯಕ್ಕೆ ಬಳಸಲಾಗುತ್ತಿದ್ದ 4 ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಸೋಲದೇವನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದ ಬಂಧಿತ ಆರೋಪಿಗಳು ಪ್ರವಾಸಿ ವೀಸಾ, ಬ್ಯುಸಿನೆಸ್ ವೀಸಾದಡಿ ಭಾರತಕ್ಕೆ ಬಂದಿದ್ದು, ಪರಿಚಯಸ್ಥ ಗಿರಾಕಿಗಳಿಗೆ ವಿವಿಧ ರೀತಿಯ ನಿಷೇಧಿತ ಮಾದಕ ವಸ್ತುಗಳನ್ನು ಸರಬರಾಜು ಮಾಡುವ ಮೂಲಕ ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿದ್ದರು. ಈ ಪೈಕಿ ಓರ್ವ ಆರೋಪಿಯು ಈ ಹಿಂದೆ ಮುಂಬೈನಲ್ಲಿ ನೆಲೆಸಿದ್ದು, ಮಾದಕ ಪದಾರ್ಥಗಳ ಮಾರಾಟ ಪ್ರಕರಣದಲ್ಲಿ ಸೆರೆವಾಸ ಸಹ ಅನುಭವಿಸಿದ್ದ ಎಂದು ತಿಳಿದು ಬಂದಿದೆ.
ಆರ್ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ಆರೋಪಿಯು ಸ್ಥಳೀಯನಾಗಿದ್ದು, ಪೋಸ್ಟ್ ಮೂಲಕ ಹೈಡೋಗಾಂಜಾವನ್ನು ತರಿಸಿಕೊಳ್ಳುತ್ತಿದ್ದನು. ಆರೋಪಿಯ ಕುರಿತು ಖಚಿತ ಮಾಹಿತಿಯ ಮೇರೆಗೆ ಆತನನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ವಿದೇಶಿ ಮೂಲದವರ ಸಹಿತ 7 ಜನ ಡ್ರಗ್ ಪೆಡ್ಲರ್‌ಗಳ ಸೆರೆ : ಕಳೆದ ತಿಂಗಳು ಜನವರಿ 30 ರಂದು ಬೆಂಗಳೂರಿನಲ್ಲಿ ಮಾದಕ ವಸ್ತುಗಳ ಸರಬರಾಜಿನಲ್ಲಿ ತೊಡಗಿದ್ದ ವಿದೇಶಿ ಮೂಲದವರ ಸಹಿತ 7 ಜನ ಆರೋಪಿಗಳನ್ನ ಸಿಸಿಬಿಯ ಮಾದಕ ವಸ್ತು ನಿಗ್ರಹದಳದ ಪೊಲೀಸರು ಬಂಧಿಸಿದ್ದರು. ನಗರದ ಜ್ಞಾನಭಾರತಿ, ಬಾಣಸವಾಡಿ, ಹುಳಿಮಾವು, ಪುಲಿಕೇಶಿನಗರ ವ್ಯಾಪ್ತಿಗಳಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಶೇಕ್ ಮೊಹಮ್ಮದ್ ಅರ್ಬಾಜ್, ಗೌತಮ್, ಕೆ. ಅಭಿಷೇಕ್, ಎನ್ ಜಾಧವ್, ರಿತಿಕ್ ರಾಜ್ ಎಂಬಾತನ ಸಹಿತ 7 ಜನ ಆರೋಪಿಗಳನ್ನು ಸೆರೆ ಹಿಡಿದಿದ್ದರು.
ಬಂಧಿತ ಆರೋಪಿಗಳಿಂದ 219 ಎಕ್ಸ್ಟಸಿ ಪಿಲ್ಸ್, 505 ಗ್ರಾಂ ಎಂಡಿಎಂಎ ಕ್ರಿಸ್ಟಲ್ಸ್, 130 ಗ್ರಾಂ ಚರಸ್, 100.88 ಗ್ರಾಂ ಕೊಕೇನ್ ಸಹಿತ 1.52 ಕೋಟಿ ಮೌಲ್ಯದ ಮಾದಕ ಪದಾರ್ಥಗಳು, 1 ದ್ವಿಚಕ್ರ ವಾಹನ, 6 ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರು ಮಾಹಿತಿ ನೀಡಿದ್ದರು.
The CCB police have launched a massive crackdown against drug peddlers. A total of four accused, including three foreign-based drug peddlers, have been arrested in Soladevanahalli and RMC Yard police station limits.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 06:25 pm
HK News Desk
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm