ಬ್ರೇಕಿಂಗ್ ನ್ಯೂಸ್
29-02-24 05:30 pm HK News Desk ಕ್ರೈಂ
ಧಾರವಾಡ, ಫೆ 29: ತಂದೆ ತನ್ನ ಮಗುವನ್ನ ನೆಲಕ್ಕೆ ಎಸೆದು ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಒಂದು ವರ್ಷದ ಹೆಣ್ಣು ಮಗು ಮೃತಪಟ್ಟಿದೆ.
ಶ್ರೇಯಾ ಮೃತ ದುರ್ದೈವಿ ಕಂದಮ್ಮ. ಈಕೆಯನ್ನು ತಂದೆ ಶಂಭುಲಿಂಗಯ್ಯ ಕೊಲೆ ಮಾಡಿದ್ದಾನೆ. ಈತ ಧಾರವಾಡ ತಾಲೂಕಿನ ಯಾದವಾಡ ಗ್ರಾಮದ ನಿವಾಸಿ.
ನಾಲ್ಕು ವರ್ಷಗಳ ಹಿಂದೆ ಶಂಭಯ್ಯ ಮತ್ತು ಸವಿತಾ ಮದುವೆಯಾಗಿದ್ದರು. ಈ ದಂಪತಿಗೆ ಈಗಾಗಲೇ ಇಬ್ಬರು ಮಕ್ಕಳಿದ್ದರು. ಮೊದಲನೇಯ ಗಂಡು ಮಗುವಿಗೆ ಮೂರು ವರ್ಷವಾಗಿದೆ. ಶಂಭಯ್ಯ ಧಾರವಾಡ ನಗರದಲ್ಲಿ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ನಿತ್ಯ ವಿಪರೀತವಾಗಿ ಕುಡಿಯುತ್ತಿದ್ದ ಶಂಭಯ್ಯ ಮಂಗಳವಾರ ತಡರಾತ್ರಿ ತನ್ನ ಮೇಲೆ ಹಲ್ಲೆ ಮಾಡಿ ಬಳಿಕ ಮಗುವಿನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ ಎಂದು ಪತ್ನಿ ಸವಿತಾ ಮತ್ತು ಸಹೋದರ ಅಳಿಯ ಕಲ್ಲಯ್ಯ ನೋವು ತೋಡಿಕೊಂಡಿದ್ದಾರೆ.
ಮಲಗುವಾಗ ಮಗು ಅಳುತ್ತೆ ಎಂಬ ಕಾರಣಕ್ಕೆ ಮಗುವನ್ನ ನೆಲಕ್ಕೆ ಎತ್ತಿ ಬಡಿದಿದ್ದಾನೆ. ಪರಿಣಾಮ ಮಗು ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದು, ಕೂಡಲೇ ಆಕೆಯನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಇದೀಗ ಪುಟ್ಟ ಕಂದಮ್ಮ ಚಿಕಿತ್ಸೆ ಫಲಿಸದೇ ಮೃತಪಟ್ಟಿದೆ.
ಘಟನೆ ಸಂಬಂಧ ಕುಟುಂಬಸ್ಥರು ಪಾಪಿ ತಂದೆ ಶಂಭುಲಿಂಗಯ್ಯನ ವಿರುದ್ಧ ದೂರು ನೀಡಿದ್ದು, ಗರಗ ಠಾಣೆ ಪೊಲೀಸರು ಶಂಭುಲಿಂಗಯ್ಯನನ್ನು ವಶಕ್ಕೆ ಪಡೆದಿದ್ದಾರೆ. ಧಾರವಾಡ ಗರಗ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Dharwad Father kills one year old daughter for crying too much. The police have taken father into custody.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm