ಬ್ರೇಕಿಂಗ್ ನ್ಯೂಸ್
06-03-24 03:20 pm Bangalore Correspondent ಕ್ರೈಂ
ಬೆಂಗಳೂರು, ಮಾ 06: ಪ್ರತಿ ವರ್ಷದಂತೆ ಈ ಸಲವೂ ವೆಡ್ಡಿಂಗ್ ಆನಿವರ್ಸರಿಗೆ ಗಂಡ ಉಡುಗೊರೆ ಕೊಡಲಿಲ್ಲ ಎಂಬ ಕಾರಣಕ್ಕೆ ಮಲಗಿದ್ದ ಪತಿಗೆ ಆತನ ಪ್ರಿಯ ಪತ್ನಿ ಚಾಕುವಿನಿಂದ ಇರಿದ ಶಾಕಿಂಗ್ ಘಟನೆ ಬೆಳ್ಳಂದೂರಿನ ಜುನ್ನಸಂದ್ರದಲ್ಲಿ ನಡೆದಿದೆ.
ಗಾಯಾಳು ವ್ಯಕ್ತಿಯನ್ನು 37 ವರ್ಷ ವಯಸ್ಸಿನ ಕಿರಣ್ (ಹೆಸರು ಬದಲಿಸಲಾಗಿದೆ) ಎಂದು ಗುರ್ತಿಸಲಾಗಿದೆ. ಕಿರಣ್ ಅವರು ಖಾಸಗಿ ಸಂಸ್ಥೆಯೊಂದರಲ್ಲಿ ನೌಕರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ಪತ್ನಿ 35 ವರ್ಷ ವಯಸ್ಸಿನ ಸಂಧ್ಯಾ (ಹೆಸರು ಬದಲಿಸಲಾಗಿದೆ) ಗೃಹಿಣಿಯಾಗಿದ್ದು, ತಮ್ಮ ಪತಿ ಮೇಲಿನ ಸಿಟ್ಟಿನಿಂದ ಈ ಕೃತ್ಯ ಎಸಗಿದ್ದಾರೆ.
37 ವರ್ಷದ ಗಾಯಾಳು ಪತಿಯ ಹೇಳಿಕೆ ಆಧರಿಸಿ, ಆತನ 35 ವರ್ಷ ವಯಸ್ಸಿನ ಪತ್ನಿಯ ವಿರುದ್ಧ ಬೆಳ್ಳಂದೂರು ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
'ಪ್ರತಿ ವರ್ಷ ವಿವಾಹ ವಾರ್ಷಿಕೋತ್ಸವದ ದಿನ ಪತ್ನಿಗೆ ಏನಾದರೂ ಗಿಫ್ಟ್ ನೀಡುತ್ತಿದ್ದೆ. ಆದರೆ, ಈ ವರ್ಷ ನನ್ನ ತಾತ ನಿಧನರಾಗಿದ್ದರಿಂದ ಹಿಂದಿನ ದಿನ ಗಿಫ್ಟ್ ಖರೀದಿಸಲು ಸಾಧ್ಯವಾಗಿರಲಿಲ್ಲ. ಅದೇ ಕೋಪದಲ್ಲಿದ್ದ ಪತ್ನಿ, ನಾನು ನಿದ್ದೆಗೆ ಜಾರಿದ್ದ ಸಮಯದಲ್ಲಿ ಚಾಕುವಿನಿಂದ ಇರಿದಿದ್ದಾಳೆ' ಎಂದು ಪತಿ ಪೊಲೀಸರೆದುರು ಹೇಳಿಕೆ ನೀಡಿದ್ದಾನೆ.
ಇರಿತದಿಂದ ಪತಿಯ ಕೈಗೆ ಗಾಯವಾಗಿದೆ. ಕೂಡಲೇ ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಾಕು ಇರಿತ ಪ್ರಕರಣವಾದ್ದರಿಂದ ಆಸ್ಪತ್ರೆಯ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಅದರನ್ವಯ ಗಾಯಾಳುವಿನ ಹೇಳಿಕೆ ಪಡೆದುಕೊಂಡ ಬೆಳ್ಳಂದೂರು ಠಾಣೆ ಪೊಲೀಸರು, ಮಾರ್ಚ್ 1 ರಂದು ಕಿರಣ್ ನೀಡಿದ ದೂರಿನ ಆಧಾರದ ಮೇಲೆ ಸಂಧ್ಯಾ ವಿರುದ್ದ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಸಂಬಂಧ ಸಂಧ್ಯಾ ಅವರ ಬಳಿಕ ಹಲವು ಬಾರಿ ವಿಚಾರಣೆಯನ್ನೂ ನಡೆಸಲಾಗಿದೆ. ಅಂತಿಮವಾಗಿ ಇದು ಅಪರಾಧಿಕ ಕೃತ್ಯ ಎನ್ನುವುದಕ್ಕಿಂತಾ ಹೆಚ್ಚಾಗಿ ಕೌಟುಂಬಿಕ ಪ್ರಕರಣ ಆದ ಕಾರಣ ಗಂಡ - ಹೆಂಡತಿ ಇಬ್ಬರೂ ಕುಳಿತು ಮಾತನಾಡಿ ಬಗೆಹರಿಸಿಕೊಳ್ಳಲು ಪೊಲೀಸರು ಅವಕಾಶ ನೀಡಿದ್ದಾರೆ.
Bangalore Wife stabs husband for not giving gift on wedding anniversary. Police have taken wife into custody and have sent her to counselling centre.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm