ಬ್ರೇಕಿಂಗ್ ನ್ಯೂಸ್
10-03-24 05:07 pm Udupi Correspondent ಕ್ರೈಂ
ಉಡುಪಿ, ಮಾ.10: ಫೇಸ್‌ಬುಕ್‌ನಲ್ಲಿ ನಲ್ಲಿ ಪರಿಚಯವಾದ ವಂಚಕನೊಬ್ಬ ಜರ್ಮನಿಯಲ್ಲಿ ಮಿಲಿಟರಿ ಅಧಿಕಾರಿ ಎಂದು ಪೋಸ್ ಕೊಟ್ಟು ಬ್ರಹ್ಮಾವರದ ಮಹಿಳೆಗೆ 54 ಲಕ್ಷ ರೂ. ಪಂಗನಾಮ ಹಾಕಿದ್ದಾನೆ.
ಫೆಬ್ರವರಿ 10 ರಂದು ಫೇಸ್‌ಬುಕ್‌ನಲ್ಲಿ ಮಿಹಿಯಾಲ್ ನೀಲ್ಗೆನ್ ಎಂಬ ಆನ್ಲೈನ್ ವಂಚಕ ಜರ್ಮನಿಯಲ್ಲಿ ಮಿಲಿಟರಿ ಅಧಿಕಾರಿ ಎಂಬುದಾಗಿ ಹೇಳಿಕೊಂಡು ಬ್ರಹ್ಮಾವರದ ಲವೀನಾ ಸ್ಟೆಫನಿ ಕ್ರಸ್ತಾ (42) ಎಂಬವರ ಜೊತೆ ಸ್ನೇಹ ಬೆಳೆಸಿಕೊಂಡು, ವಾಟ್ಸ್ಅಪ್ ನಲ್ಲಿ ಇಬ್ಬರು ಚಾಟಿಂಗ್ ನಡೆಸಿ ಸ್ನೇಹಿತರಾಗಿದ್ದಾರೆ. ನಂತರ ಲವೀನಾ ಅವ್ರಿಗೆ ಗಿಫ್ಟ್ ಕಳುಹಿಸುವುದಾಗಿ ನಂಬಿಸಿ ಫೆ.1 ರಂದು, ದೆಹಲಿಯ ಪಾರ್ಸೆಲ್ ಆಫೀಸ್‌ನಿಂದ ಅಪರಿಚಿತ ವ್ಯಕ್ತಿ ಒಬ್ಬ ಮೊಬೈಲ್ ನಂಬರ್ ಗೆ ಕರೆ ಮಾಡಿ ಜರ್ಮನಿಯಿಂದ ಬಂದಿರುವ ಪಾರ್ಸೆಲ್ ನಲ್ಲಿ ಜ್ಯುವೆಲರಿ, ಯುರೋ ಕರೆನ್ಸಿ ಇದ್ದು ಈ ಬಗ್ಗೆ ಪಾರ್ಸೆಲ್ ಪಡೆಯಲು ಪಾರ್ಸೆಲ್ ಚಾರ್ಜ್, ಮನಿ ಲ್ಯಾಂಡಿಂಗ್ ಸರ್ಟಿಫಿಕೇಟ್, ಕಸ್ಟಂ ಸರ್ಟಿಫಿಕೇಟ್ ಪಡೆಯಲು ಹಣ ಪಾವತಿಸಬೇಕು ಎಂದು ತಿಳಿಸಿದ್ದಾನೆ. ಲವೀನಾ ಅದನ್ನು ನಂಬಿ, ಆರೋಪಿ ಕೊಟ್ಟ ಬ್ಯಾಂಕ್ ಡೀಟೇಲ್ಸ್ ಗೆ, ಗೂಗಲ್ ಪೇ ಮುಖಾಂತರ ಹಂತ ಹಂತವಾಗಿ ಒಟ್ಟು 54 ಲಕ್ಷದ 74 ಸಾವಿರ ಹಣವನ್ನ ಪಾವತಿಸಿದ್ದಾರೆ.
ಆರೋಪಿ ಜರ್ಮನಿಯಲ್ಲಿ ಮಿಲಿಟರಿ ಅಧಿಕಾರಿ ಎಂದು, ಗಿಫ್ಟ್ ಪಾರ್ಸೆಲ್ ಕಳಿಸುವುದಾಗಿ ನಂಬಿಸಿ, ಪಾರ್ಸೆಲ್ ಪಡೆಯಲು ಭಾರೀ ಪ್ರಮಾಣದ ಹಣವನ್ನು ಪಡೆದು, ಪಾರ್ಸೆಲ್ ಕಳುಹಿಸದೇ, ಕಳುಹಿಸಿದ ಹಣವನ್ನು ವಾಪಾಸು ನೀಡದೇ ಮೋಸ ಮಾಡಿದ್ದಾನೆ ಎಂದು ಹೇಳಿ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಲವೀನಾ ಕೇಸ್ ದಾಖಲಿಸಿದ್ದಾರೆ.
ನಯ ವಂಚಕನ ಒಂದೇ ಫೋನ್ ಕರೆಗೆ ಕಷ್ಟಪಟ್ಟು ದುಡಿದ ಲಕ್ಷಗಟ್ಟಲೆ ಹಣ ಮಂಗ ಮಾಯ ಆಗಿದ್ದು ಮಾತ್ರ ವಿಪರ್ಯಾಸ.
Udupi bhramavara Laveen Stephenie crasta looses 54 lakhs to online fraud over parcel charges on Facebook. A case has been registered at the cyber police station in Udupi. Online fraudster introduced himself as a Germany military officer.
22-12-25 11:09 pm
HK News Desk
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
ಅಧಿಕಾರ ಹಂಚಿಕೆ ಹೈಕಮಾಂಡ್ ತೀರ್ಮಾನವೇ ಅಂತಿಮ, ನಮ್ಮದ...
22-12-25 06:29 pm
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
22-12-25 06:32 pm
HK News Desk
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
22-12-25 06:36 pm
Mangalore Correspondent
ಕೋಳಿ ಅಂಕದಲ್ಲಿ ಪೆಟ್ಟು ಕೊಡಲು ಇವರ ಅಪ್ಪನ ಜಾಗವಾ?...
22-12-25 12:26 pm
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm