ಬ್ರೇಕಿಂಗ್ ನ್ಯೂಸ್
19-03-24 08:53 pm Mangaluru Correspondent ಕ್ರೈಂ
ಮಂಗಳೂರು, ಮಾ.19: ಲೋಕಸಭಾ ಚುನಾವಣೆಯನ್ನು ಶಾಂತಿಯುತವಾಗಿ ನಡೆಸುವ ನಿಟ್ಟಿನಲ್ಲಿ ಪೊಲೀಸರು ರೌಡಿಗಳ ಬಗ್ಗೆ ನಿಗಾ ವಹಿಸಿದ್ದು, ಮಂಗಳೂರಿನ ಮೂವರು ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ ಜರುಗಿಸಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಆದೇಶ ಹೊರಡಿಸಿದ್ದಾರೆ.

ಉಳ್ಳಾಲ ಕೋಟೆಪುರ ನಿವಾಸಿ ಮಹಮ್ಮದ್ ಕಬೀರ್ ಅಲಿಯಾಸ್ ಚಬ್ಬಿ(31), ಗುರುಪುರ ಮೂಳೂರು ನಿವಾಸಿ ನವಾಜ್ (30) ಮತ್ತು ಹಿಂದು ಸಂಘಟನೆಗಳಲ್ಲಿ ಗುರುತಿಸಿಕೊಂಡಿರುವ ಶಕ್ತಿನಗರ ನಿವಾಸಿ ಜಯಪ್ರಶಾಂತ್ (30) ಗೂಂಡಾ ಕಾಯ್ದೆಯಡಿ ಬಂಧಿತರಾದವರು.
ಮಹಮ್ಮದ್ ಕಬೀರ್ 14 ಅಪರಾಧ ಪ್ರಕರಣಗಳನ್ನು ಎದುರಿಸುತ್ತಿದ್ದು, ಒಂದು ಕೊಲೆ, ಮೂರು ಕೊಲೆಯತ್ನ, ಆರು ಗಲಭೆ ಪ್ರಕರಣ, ಮೂರು ಹಲ್ಲೆ, ಒಂದು ಮಾನಭಂಗ ಯತ್ನ ಪ್ರಕರಣ ದಾಖಲಾಗಿದೆ. ನವಾಜ್ ಬಜ್ಪೆ, ಕಾವೂರು, ಮಂಗಳೂರು ಗ್ರಾಮಾಂತರ, ಕದ್ರಿ, ಬರ್ಕೆ ಠಾಣೆಯಲ್ಲಿ ಎಂಟು ಪ್ರಕರಣಗಳನ್ನು ಹೊಂದಿದ್ದಾನೆ. ಒಂದು ಕೊಲೆ, ಒಂದು ಕೊಲೆಯತ್ನ, ಒಂದು ಕೊಲೆಗೆ ಸಂಚು, ಎರಡು ಗಾಂಜಾ ಸೇವನೆ, ಮೂರು ಡ್ರಗ್ ಪೆಡ್ಲಿಂಗ್ ಪ್ರಕರಣ ಹೊಂದಿದ್ದಾನೆ. ಜಯಪ್ರಶಾಂತ್ ಎಂಟು ಪ್ರಕರಣಗಳನ್ನು ಎದುರಿಸುತ್ತಿದ್ದು, ಮೂರು ಕೋಮು ಗಲಭೆ, ಒಂದು ಕೊಲೆಯತ್ನ, ನಾಲ್ಕು ನೈತಿಕ ಪೊಲೀಸ್ ಪ್ರಕರಣ ಮತ್ತು ಕಾನೂನಿಗೆ ವಿರುದ್ಧವಾಗಿ ಗುಂಪು ಕೂಡಿರುವಂತಹ ಪ್ರಕರಣ ಹೊಂದಿದ್ದಾನೆ.
ಇವರು ಅಪರಾಧ ಪ್ರಕರಣಗಳಲ್ಲಿ ಹಲವು ಬಾರಿ ಬಂಧಿತರಾಗಿ ಜೈಲು ಪಾಲಾಗಿದ್ದು, ಜಾಮೀನು ಮೇಲೆ ಬಿಡುಗಡೆಗೊಂಡ ಬಳಿಕ ಮತ್ತೆ ಅಪರಾಧ ಕೃತ್ಯಗಳಲ್ಲಿ ತೊಡಗಿಸಿದ್ದಾರೆ. ಹೀಗಾಗಿ ಅಪರಾಧ ಪ್ರವೃತ್ತಿಯನ್ನು ಮೈಗೂಡಿಸಿರುವುದು ಮತ್ತು ಸಮಾಜದ ಶಾಂತಿ ಕದಡುವ ಪ್ರವೃತ್ತಿಯವರಾಗಿದ್ದರಿಂದ ಅವರನ್ನು ಬಂಧಿಸಿ ಜೈಲಿನಲ್ಲೇ ಇಡಬೇಕೆಂಬ ಪೊಲೀಸರ ಕೋರಿಕೆಯಂತೆ ಗೂಂಡಾ ಕಾಯ್ದೆ ಜಾರಿಗೊಳಿಸಿದ್ದಾಗಿ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
Three accused booked under Goonda Act in Mangalore. Nawaz from Gurupur, Mohammed Kabeer from Kotepura and Jayaprashanth from Shakti Nagara.
22-12-25 11:09 pm
HK News Desk
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
ಅಧಿಕಾರ ಹಂಚಿಕೆ ಹೈಕಮಾಂಡ್ ತೀರ್ಮಾನವೇ ಅಂತಿಮ, ನಮ್ಮದ...
22-12-25 06:29 pm
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
22-12-25 06:32 pm
HK News Desk
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
22-12-25 06:36 pm
Mangalore Correspondent
ಕೋಳಿ ಅಂಕದಲ್ಲಿ ಪೆಟ್ಟು ಕೊಡಲು ಇವರ ಅಪ್ಪನ ಜಾಗವಾ?...
22-12-25 12:26 pm
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm