ಬ್ರೇಕಿಂಗ್ ನ್ಯೂಸ್
20-03-24 06:31 pm Mangalore Correspondent ಕ್ರೈಂ
ಉಳ್ಳಾಲ, ಮಾ.20: ಸೋಮೇಶ್ವರ ಉಚ್ಚಿಲದ ನಾಗತೋಟ ಎಂಬಲ್ಲಿನ ಖಾಸಗಿ ಜಾಗದ ಮರಳು ಅಡ್ಡೆಗೆ ಸಿಸಿಬಿ ಪೊಲೀಸರು, ಭೂ ಮತ್ತು ಗಣಿ ವಿಜ್ಞಾನ ಅಧಿಕಾರಿಗಳು ಜಂಟಿಯಾಗಿ ಬುಧವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದು ಅಪಾರ ಪ್ರಮಾಣದಲ್ಲಿ ದಾಸ್ತಾನಿರಿಸಿದ್ದ ಮರಳು ಮತ್ತು ಮರಳು ಸಾಗಾಟ ನಡೆಸುತ್ತಿದ್ದ ನಾಲ್ಕು ನಾಡದೋಣಿಗಳನ್ನ ವಶಪಡಿಸಿಕೊಂಡಿದ್ದಾರೆ.
ಸೋಮೇಶ್ವರ ಉಚ್ಚಿಲದ ಬಟ್ಟಪ್ಪಾಡಿ ಸಮುದ್ರ ತೀರದಿಂದ ದಿನನಿತ್ಯವೂ ಅಕ್ರಮವಾಗಿ ಮರಳು ತೆಗೆದು ನಾಡ ದೋಣಿಗಳ ಮೂಲಕ ಹೊಳೆಯಲ್ಲಿ ಸಾಗಾಟ ನಡೆಸಿ ನಾಗತೋಟ ನಿವಾಸಿ ಮಹಮ್ಮದ್ ಆಲಿ ಎಂಬವರ ಖಾಸಗಿ ಜಮೀನಿನಲ್ಲಿ ದಾಸ್ತಾನು ಇರಿಸಲಾಗುತ್ತಿತ್ತು. ದಾಸ್ತಾನು ಇರಿಸಿದ್ದ ಮರಳನ್ನು ಮಧ್ಯರಾತ್ರಿ ಕೇರಳಕ್ಕೆ ಸಾಗಾಟ ನಡೆಸಲಾಗುತ್ತಿತ್ತು. ಬಟ್ಟಪ್ಪಾಡಿಯಲ್ಲಿ ನಡೆಯುತ್ತಿದ್ದ ಮರಳು ಮಾಫಿಯಾ ಬಗ್ಗೆ ಸ್ಥಳೀಯ ಸಾಮಾಜಿಕ ಕಾರ್ಯಕರ್ತರಾದ ಸುಖೇಶ್ ಉಚ್ಚಿಲ್ ಮತ್ತು ರಂಜಿತ್ ಬಟ್ಟಪ್ಪಾಡಿ ಅವರು ಸ್ಥಳೀಯ ಪೊಲೀಸರಿಗೆ ಪದೇ ಪದೇ ದೂರು ನೀಡಿದ್ದರೂ ಅಕ್ರಮ ಮರಳುಗಾರಿಕೆಗೆ ಕಡಿವಾಣ ಬಿದ್ದಿರಲಿಲ್ಲ.
ಎಗ್ಗಿಲ್ಲದೆ ಮುಂದುವರೆದಿದ್ದ ಅಕ್ರಮ ಮರಳುಗಾರಿಕೆಯ ಬಗ್ಗೆ ಸುಖೇಶ್ ಮತ್ತು ರಂಜಿತ್ ಅವರು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರಿಗೇ ಮಂಗಳವಾರ ಕರೆ ಮಾಡಿ ತಿಳಿಸಿದ್ದರು. ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಸಿಸಿಬಿ ಪೊಲೀಸರನ್ನೊಳಗೊಂಡ ತಂಡವು ಬುಧವಾರ ಬೆಳ್ಳಂಬೆಳಗ್ಗೆ ನಾಗತೋಟದ ಅಕ್ರಮ ಮರಳು ಅಡ್ಡೆಗೆ ದಿಢೀರ್ ದಾಳಿ ನಡೆಸಿದ್ದು ನಂತರ ಉಳ್ಳಾಲ ಪೊಲೀಸರಿಗೂ ಮಾಹಿತಿ ನೀಡಿದ್ದು ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ಸೇರಿ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.
ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಆರೋಪಿಗಳಾದ ಕುಂಜತ್ತೂರಿನ ಜಯರಾಮ್ ಶೆಟ್ಟಿ, ಇಬ್ರಾಹಿಂ ಕೋಟೆಪುರ, ವಿನೋದ್ ಉಚ್ಚಿಲ್ ಯಾನೆ ಹನಿ ಹಿಂದುಸ್ಥಾನಿ, ಚಂದ್ರ ಸೋಮೇಶ್ವರ ಮತ್ತು ಸುನಿಲ್ ತಲೆಮರೆಸಿಕೊಂಡಿದ್ದಾರೆ. ವಶ ಪಡಿಸಿಕೊಳ್ಳಲಾದ ಅಪಾರ ಪ್ರಮಾಣದ ಮರಳು ಮತ್ತು ನಾಡ ದೋಣಿಗಳನ್ನು ಪೊಲೀಸರು ಭೂ ಮತ್ತು ಗಣಿ ವಿಜ್ನಾನ ಇಲಾಖಾಧಿರಿಗಳಿಗೆ ಹಸ್ತಾಂತರಿಸಿದ್ದಾರೆ.
ಅಕ್ರಮ ಮರಳನ್ನು ದಾಸ್ತಾನು ಇರಿಸಿ ಮರಳು ಮಾಫಿಯಾಗಳನ್ನು ಬೆಂಬಲಿಸುತ್ತಿದ್ದ ಮಹಮ್ಮದ್ ಆಲಿ ಅವರ ಜಮೀನನ್ನು ಮುಟ್ಟುಗೋಲು ಹಾಕುವಂತೆ ಸುಖೇಶ್ ಉಚ್ಚಿಲ್ ಅವರು ಜಿಲ್ಲಾಧಿಕಾರಿಗಳನ್ನು ಆಗ್ರಹಿಸಿದ್ದಾರೆ.
Mangalore Uchila illegal sand mining centre raid by CCB Police, four boats, sand seized.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm