ಬ್ರೇಕಿಂಗ್ ನ್ಯೂಸ್
09-04-24 08:51 pm HK News Desk ಕ್ರೈಂ
ತೆಲಂಗಾಣ, ಏ.09: ಆನ್‌ಲೈನ್ ಗೇಮಿಂಗ್ ಚಟಕ್ಕೆ ಬಿದ್ದ ವ್ಯಕ್ತಿಯೊಬ್ಬ ಕುಟುಂಬದಲ್ಲಿ ಜಗಳಗಳನ್ನು ಉಂಟುಮಾಡಿ, ಕೊನೆಗೆ ಆ ಮನೆಯಲ್ಲಿ ಚಿಕ್ಕ ಮಗುವಿನಿಂದ ಹಿಡಿದು ಎಲ್ಲರೂ ಆತ್ಮಹತ್ಯೆ ಮಾಡಿಕೊಳ್ಳುವಂತೆ ಮಾಡಿದ್ದಾನೆ.
ಸೋಮವಾರ ರಾತ್ರಿ ತೆಲಂಗಾಣದ ರಾಜೇಂದ್ರನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದಾರುಣ ಘಟನೆ ನಡೆದಿದೆ. ಚೆವೆಲ್ಲಾ ಮಂಡಲದ ಮಲ್ಕಾಪುರ ಗ್ರಾಮದ ಆನಂದ್ (38) ಮತ್ತು ಇಂದಿರಾ (36) ದಂಪತಿಗೆ ಶ್ರೇಯನ್ಸ್ (4) ಎಂಬ ಮಗನಿದ್ದ. ಆನಂದ್ ವೃತ್ತಿಯಲ್ಲಿ ಹಾಲಿನ ವ್ಯಾಪಾರಿ. ಮೂರು ವರ್ಷಗಳಿಂದ ಬಂಡ್ಲಗುಡಜಗಿರ್‌ನ ಸನ್‌ಸಿಟಿ ಪ್ರದೇಶದ ಯಮುನಾ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದರು. ಹಾಲಿನ ವ್ಯಾಪಾರ ಮಾಡುತ್ತಿರುವಾಗಲೇ ಆನಂದ್ ಆನ್‌ಲೈನ್ ಗೇಮ್ಗಳ ಚಟಕ್ಕೆ ಬಿದ್ದಿದ್ದ. ಈ ಪ್ರಕ್ರಿಯೆಯಲ್ಲಿ ಸುಮಾರು 15 ಲಕ್ಷ ರೂ.ಗಳಷ್ಟು ಸಾಲ ಮಾಡಿ ಆರ್ಥಿಕ ನಷ್ಟ ಅನುಭವಿಸಿದ್ದ. ಈ ವಿಚಾರವಾಗಿ ದಂಪತಿಗಳ ನಡುವೆ ಆಗಾಗ ಜಗಳ ನಡೆಯುತ್ತಿತ್ತು.
15 ದಿನಗಳ ಹಿಂದೆ ಎರಡೂ ಮನೆಯವರು ಹಾಗೂ ಸ್ನೇಹಿತರು ಆನಂದ್ ಮನೆಗೆ ಬಂದು ಆನ್‌ಲೈನ್ ಗೇಮ್ ಆಡದಂತೆ ಬುದ್ಧಿಮಾತು ಹೇಳಿದ್ದರು. ಆದರೆ ಆನಂದನ ವರ್ತನೆಯಲ್ಲಿ ಮಾತ್ರ ಯಾವುದೇ ಬದಲಾವಣೆ ಇರಲಿಲ್ಲ. ಇದಲ್ಲದೆ, ಮೂರು ದಿನಗಳ ಹಿಂದೆ ಮತ್ತೊಮ್ಮೆ ಆನ್‌ಲೈನ್ ಬೆಟ್ಟಿಂಗ್ ಆಡಿದ್ದ. ಸೋಮವಾರ ಬೆಳಗ್ಗೆಯಿಂದ ಇದೇ ವಿಚಾರವಾಗಿ ದಂಪತಿ ನಡುವೆ ಜಗಳ ನಡೆದಿದೆ. ಆ ವೇಳೆ ಇಂದಿರಾ, ತಮ್ಮ ಕುಟುಂಬದ ಸದಸ್ಯರಿಗೆ ಕರೆ ಮಾಡಿ ನಡೆದ ಸಂಗತಿಯನ್ನು ವಿವರಿಸಿ ಕಣ್ಣೀರಿಟ್ಟಿದ್ದರು. ಅಲ್ಲದೆ, ಆನಂದ್ ಕೂಡ ತನ್ನ ಸ್ನೇಹಿತರು ಮತ್ತು ಸಂಬಂಧಿಕರಿಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದರು. ಇದರಿಂದ ಭಯಗೊಂಡ ಉಭಯ ಕುಟುಂಬದ ಸದಸ್ಯರು ಎಷ್ಟೇ ಕರೆ ಮಾಡಿದರೂ ಇಬ್ಬರೂ ಕರೆ ಸ್ವೀಕರಿಸಲಿಲ್ಲ. ಇದರಿಂದ ಎಲ್ಲರೂ ಚಿಂತಿತರಾಗಿ ಅಪಾರ್ಟ್‌ಮೆಂಟ್‌ಗೆ ಬಂದು ನೋಡಿದಾಗ ಆನಂದ್, ಇಂದಿರಾ ಮತ್ತು ಅವರ ಮಗ ಸಾವಿಗೀಡಾಗಿರುವುದು ಕಂಡುಬಂದಿದೆ. ಕೂಡಲೇ ರಾಜೇಂದ್ರನಗರ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಸ್ಥಳಕ್ಕೆ ಆಗಮಿಸಿದ ಅವರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಸ್ಥಳ ಪರಿಶೀಲನೆ ನಡೆಸಿದ ಪೊಲೀಸರು, ದಂಪತಿ ನಡುವೆ ಜಗಳ ನಡೆದು, ಪತ್ನಿಯನ್ನು ಕೊಲೆಗೈದು, ಬಳಿಕ ಆನಂದ್, ಮಗನಿಗೆ ಕ್ರಿಮಿನಾಶಕ ಕುಡಿಸಿ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ. ಇದಲ್ಲದೆ, ತಂದೆ ಮತ್ತು ಮಗನ ಬಾಯಲ್ಲಿ ನೊರೆ ಬಂದಿರುವುದು ಅನುಮಾನಕ್ಕೆ ಪುಷ್ಠಿ ನೀಡಿದೆ. ಆದರೆ ಇಂದಿರಾ ಬಾಯಿಯಿಂದ ನೊರೆ ಬಂದಿರಲಿಲ್ಲ. ಮರಣೋತ್ತರ ಪರೀಕ್ಷೆ ವರದಿ ಬಂದ ನಂತರವಷ್ಟೇ ಸತ್ಯಾಂಶ ತಿಳಿಯಲಿದೆ ಎಂದು ಪೊಲೀಸರು ಹೇಳಿದ್ದಾರೆ. ಆದರೆ ಬೆಳಗ್ಗೆಯಿಂದ ದಂಪತಿ ಜಗಳವಾಡುತ್ತಿದ್ದರು ಎಂದು ಅಪಾರ್ಟ್‌ಮೆಂಟ್‌ನ ವಾಚ್‌ಮನ್ ಪೊಲೀಸರಿಗೆ ತಿಳಿಸಿದ್ದಾರೆ.
In a tragic incident, a man killed his wife and son before ending his life at Bandlaguda in Rajendranagar over financial problems.
06-05-25 11:23 pm
Bangalore Correspondent
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
Hubballi Accident, Sagara, Five Killed: ಹುಬ್ಬ...
06-05-25 01:35 pm
Hassan Suicide, Police Constable Harrasment:...
05-05-25 01:30 pm
07-05-25 12:20 pm
HK News Desk
India strikes terror camps in Pak; ಪಾಕಿಸ್ತಾನದ...
07-05-25 09:54 am
ವಿಶ್ವಸಂಸ್ಥೆಯಲ್ಲಿ ಬೆತ್ತಲಾದ ಪಾಕ್ ; ಚೀನಾ ಬಿಟ್ಟು...
06-05-25 02:45 pm
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
07-05-25 03:36 pm
Mangalore Correspondent
Hindu Maha Sabha, Mangalore, Rajesh Pavitran:...
07-05-25 02:36 pm
Mangalore, Satish Kumapla, U T Khader: ಚಿಕ್ಕಮ...
06-05-25 06:36 pm
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm