ಬ್ರೇಕಿಂಗ್ ನ್ಯೂಸ್
10-04-24 01:33 pm Mangalore Correspondent ಕ್ರೈಂ
ಮಂಗಳೂರು, ಎ.10: ಸರ್ಕಾರಿ ಅಧಿಕಾರಿಯೊಬ್ಬರನ್ನು ಖದೀಮರ ತಂಡವೊಂದು ಲೋಕಾಯುಕ್ತ ಪೊಲೀಸರ ಸೋಗಿನಲ್ಲಿ ಕರೆ ಮಾಡಿ ಲಂಚದ ಬೇಡಿಕೆ ಇಟ್ಟು ಪ್ರಕರಣ ದಾಖಲಿಸುವ ಬೆದರಿಕೆಯೊಡ್ಡಿ ವಂಚಿಸಲು ಯತ್ನಿಸಿದ ಘಟನೆ ನಡೆದಿದ್ದು ಕಂದಾಯ ಅಧಿಕಾರಿ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಸೋಮೇಶ್ವರ ಪುರಸಭೆಯ ಕಂದಾಯ ಅಧಿಕಾರಿಯಾಗಿರುವ ಪುರುಷೋತ್ತಮ ಅವರು ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಚುನಾವಣೆ ನಿಮಿತ್ತ ಸಂಚಾರ ತಂಡದಲ್ಲಿ (ಫ್ಲೈಯಿಂಗ್ ಸ್ಕ್ವಾಡ್) ಕರ್ತವ್ಯ ನಿರ್ವಹಿಸುತ್ತಿದ್ದರು. ಎ. 5ರಂದು ಮಧ್ಯಾಹ್ನ 2 ರಿಂದ ರಾತ್ರಿ 10 ಗಂಟೆಯ ವರೆಗೆ ಫ್ಲೈಯಿಂಗ್ ಸ್ಕ್ವಾಡ್ 1 ರಲ್ಲಿ ಅವರು ಕರ್ತವ್ಯ ನಿರ್ವಹಿಸಬೇಕಿತ್ತು. ಅಂದು ಮಧ್ಯಾಹ್ನದ ವರೆಗೆ ಎಂದಿನಂತೆ ಸೋಮೇಶ್ವರ ಪುರಸಭೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಅದೇ ದಿನ ಮಧ್ಯಾಹ್ನ ವಾಟ್ಸ್‌ಆ್ಯಪ್ ಕರೆ ಮಾಡಿದ್ದ ವ್ಯಕ್ತಿಯೋರ್ವ, ‘ಲೋಕಾಯುಕ್ತದಿಂದ ಮಾತನಾಡುತ್ತಿದ್ದೇವೆ. ನಿಮ್ಮ ವಿರುದ್ಧ ದೂರು ಬಂದಿದೆ. ಸಾಹೇಬರು ಮಾತನಾಡುತ್ತಾರೆ ಎಂದು ಬೇರೊಬ್ಬ ವ್ಯಕ್ತಿಗೆ ಫೋನ್ ಕೊಟ್ಟಿದ್ದು, ಆ ವ್ಯಕ್ತಿ ನಿಮ್ಮ ಕಚೇರಿಗೆ ಬರುವ ಮೊದಲು ಈ ವಿಚಾರವನ್ನು ಇಲ್ಲಿಗೆ ಸರಿ ಮಾಡೋದಾದರೆ ಮಾಡೋಣ ಎಂದು ಹೇಳಿ ಮೊದಲು ಮಾತನಾಡಿದ್ದ ವ್ಯಕ್ತಿಗೆ ಫೋನ್ ಕೊಟ್ಟಿದ್ದ. ಅಲ್ಲದೇ 80 ಸಾವಿರ ರೂ. ಫೋನ್ ಪೇ ಮೂಲಕ ಕಳುಹಿಸಲು ಹೇಳಿದ್ದರು ಎನ್ನಲಾಗಿದೆ.
ಈ ಕುರಿತಂತೆ ಪ್ರತಿಕ್ರಿಯಿಸಿದ ಕಂದಾಯ ಅಧಿಕಾರಿ, ‘ತನಗೆ 9 ತಿಂಗಳಿನಿಂದ ಸಂಬಳ ಆಗಿಲ್ಲ ಎಂದು ತಿಳಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಕರೆ ಮಾಡಿದ ವ್ಯಕ್ತಿ 50 ಸಾವಿರ ರೂ. ಫೋನ್ ಪೇ ಮೂಲಕ ಕಳುಹಿಸಬೇಕು. ಇಲ್ಲದಿದ್ದರೆ ತೊಂದರೆ ಆಗುತ್ತದೆ ಎಂದು ಬೆದರಿಸಿದ್ದರು. ಈ ವೇಳೆ ಪುರುಷೋತ್ತಮ ಅವರು ಕರೆ ಕಟ್ ಮಾಡಿದ್ದಾರೆ. ಬಳಿಕ ಕರೆ ಬಂದ ಮೊಬೈಲ್ ನಂಬರ್ ಟ್ರೂ ಕಾಲರ್ ಆ್ಯಪ್‌ನಲ್ಲಿ ಪರಿಶೀಲಿಸಿದಾಗ ‘ಡಿ. ಪ್ರಭಾಕರ, ಲೋಕಾಯುಕ್ತ ಪಿ.ಐ’ ಎಂದು ತೋರಿಸಿತ್ತು. ಕೂಡಲೇ ಲೋಕಾಯುಕ್ತ ಪೊಲೀಸರ ಮಂಗಳೂರು ಕಚೇರಿಯ ಅಧಿಕಾರಿಗಳಲ್ಲಿ ಈ ಬಗ್ಗೆ ವಿಚಾರಿಸಿದ್ದಾರೆ. ಅಂತಹ ಹೆಸರಿನ ಯಾವುದೇ ಅಧಿಕಾರಿ ಅಥವಾ ಸಿಬ್ಬಂದಿ ತಮ್ಮ ಕಚೇರಿಯಲ್ಲಿ ಇಲ್ಲ ಎಂದು ಲೋಕಾಯುಕ್ತ ಕಚೇರಿಯಿಂದ ತಿಳಿಸಿದ ಮೇರೆಗೆ, ಕಂದಾಯ ಅಧಿಕಾರಿ ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ.
Mangalore Someshwara Town Municipal officer gets fake Lokayukta call, Fraudsters demand money or else will file case. A case has been booked at Ullal police station.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm