ಬ್ರೇಕಿಂಗ್ ನ್ಯೂಸ್
12-04-24 03:21 pm HK NEWS ಕ್ರೈಂ
ಬೆಂಗಳೂರು, ಎ.12: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧಿಸಿ ಪ್ರಮುಖ ಇಬ್ಬರು ಆರೋಪಿಗಳನ್ನು ಕಡೆಗೂ ಎನ್ಐಎ ಅಧಿಕಾರಿಗಳು ಬಲೆಗೆ ಕೆಡವಿದ್ದಾರೆ. ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಾಂಬ್ ಇಟ್ಟು ಪರಾರಿಯಾಗಿದ್ದ ಶಿವಮೊಗ್ಗ ಮೂಲದ ಮುಸಾವಿರ್ ಹುಸೇನ್ ಹಾಗೂ ಕೃತ್ಯಕ್ಕೆ ಸಂಚು ನಡೆಸಿದ್ದ ಅಬ್ದುಲ್ ಮತೀನ್ ತಾಹಾನನ್ನು ಎನ್‌ಐಎ ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ಬಂಧಿಸಿದೆ.
ಈ ಬಗ್ಗೆ ಎನ್‌ಐಎ ಹೇಳಿಕೆ ಬಿಡುಗಡೆ ಮಾಡಿದ್ದು, ಪಶ್ಚಿಮ ಬಂಗಾಳದಲ್ಲಿ ಅಡಗಿಕೊಂಡಿದ್ದರು. ಎ.12ರಂದು ಬೆಳಗ್ಗೆ ಕೊಲ್ಕತ್ತಾದಲ್ಲಿ ನಿಗೂಢ ಜಾಗದಲ್ಲಿ ಅಡಗಿದ್ದ ಅಬ್ದುಲ್ ಮತೀನ್ ತಾಹಾ ಹಾಗೂ ಮುಸಾವಿರ್ ಹುಸೇನ್ ಶಾಜಿಬ್ ಅವರನ್ನು ಬಂಧಿಸಲಾಗಿದೆ. ಮುಸಾವಿರ್ ಹುಸೇನ್ ಶಾಜಿಬ್ ಕೆಫೆಯಲ್ಲಿ ಐಇಡಿ ಬಾಂಬ್ ಇಟ್ಟು ಸ್ಪೋಟಿಸಿದ್ದ, ಅಬ್ದುಲ್ ಮತೀನ್ ತಾಹಾ ಬಾಂಬ್ ಬಾಂಬ್ ಇಡುವುದಕ್ಕೆ ಪ್ಲಾನ್ ಮಾಡಿದ್ದ. ಪ್ರಕರಣದಲ್ಲಿ ಅಬ್ದುಲ್ ಮತೀನ್ ಮಾಸ್ಟರ್ ಮೈಂಡ್ ಆಗಿ ಕೆಲಸ ಮಾಡಿದ್ದ ಎಂದು ಹೇಳಿದೆ.
ಕೋಲ್ಕತ್ತಾದಲ್ಲಿ ಉಗ್ರರು ನಕಲಿ ದಾಖಲೆ ನೀಡಿ ಹೆಸರು ಬದಲಿಸಿಕೊಂಡು ವಾಸ್ತವ್ಯ ಹೂಡಿದ್ದರು. ಕಾರ್ಯಾಚರಣೆಗೆ ಎನ್ ಐಎ ಜೊತೆ ಐಬಿ, ಪಶ್ಚಿಮ ಬಂಗಾಳ, ತೆಲಂಗಾಣ, ಕರ್ನಾಟಕ, ಕೇರಳ ಪೊಲೀಸರು ಸಹಕಾರ ನೀಡಿದ್ದರು. ಎಲ್ಲಾ ಏಜೆನ್ಸಿಗಳ ಸಹಾಯದಿಂದ ಉಗ್ರರ ಬಂಧನವಾಗಿದೆ ಎಂದು ಎನ್ ಐಎ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಕೊಲ್ಕಾತ್ತಾ ಹೊರವಲಯದ ಪೂರ್ವ ಮಿಡ್ನಾಪುರ ಜಿಲ್ಲೆಯ ದಿಘಾ ಎಂಬಲ್ಲಿ ಇವರು ತಮ್ಮ ಹೆಸರು ಬದಲಿಸಿಕೊಂಡು ವಾಸವಿದ್ದರು. ಮಧ್ಯರಾತ್ರಿ 2.30ರ ಸುಮಾರಿಗೆ ಉಗ್ರರು ಅಡಗಿದ್ದ ಮನೆಯ ಮೇಲೆ ದಾಳಿ ನಡೆಸಿ, ನಿದ್ದೆಯಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಸ್ಥಳೀಯ ನ್ಯಾಯಾಲಯಕ್ಕೆ ಹಾಜರು ಪಡಿಸಲಿರುವ ಎನ್ ಐಎ ತಂಡ ಬಳಿಕ ಬೆಂಗಳೂರಿಗೆ ಕರೆತರಲಿದೆ.
The National Investigation Agency said on Friday that it has arrested two accused, including the "mastermind" behind the Bengaluru's Rameswaram Cafe blast near Kolkata. According to media reports, the NIA apprehended Mussavir Hussain Shazib, the key accused who allegedly placed the IED at the Bengaluru cafe, and Abdul Matheen Taha, the alleged mastermind behind the planning and execution of the blast. The two accused are residents of the Thirthahalli area in Karnataka's Shivamogga district.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm