ಬ್ರೇಕಿಂಗ್ ನ್ಯೂಸ್
13-04-24 11:13 pm Bengaluru correspondent ಕ್ರೈಂ
ಬೆಂಗಳೂರು, ಎ.13: ರಾಜಧಾನಿಯ ಜಾಲಹಳ್ಳಿಯಲ್ಲಿ ಇಬ್ಬರು ಮಕ್ಕಳನ್ನು ಕೊಲೆ ಮಾಡಿ ಜೈಲು ಸೇರಿದ್ದ ತಾಯಿಯೊಬ್ಬಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ಸೀರೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಗಂಗಾದೇವಿ ಆತ್ಮಹತ್ಯೆ ಮಾಡಿಕೊಂಡ ಆರೋಪಿ. ಎ.8ರ ರಾತ್ರಿ ಇಬ್ಬರು ಮಕ್ಕಳನ್ನು ಉಸಿರು ಕಟ್ಟಿಸಿ ಸಾಯಿಸಿದ್ದ ಗಂಗಾದೇವಿ, ಮರುದಿನ ಬೆಳಗ್ಗೆ 112 ಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಳು. ಸ್ಥಳಕ್ಕೆ ತೆರಳಿದ್ದ ಪೊಲೀಸರು ಗಂಗಾದೇವಿಯನ್ನು ವಶಕ್ಕೆ ಪಡೆದಿದ್ದರು. ವಿಚಾರಣೆ ಬಳಿಕ ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸಲಾಗಿತ್ತು. ಆದರೆ, ಆರೋಪಿ ಮಹಿಳೆ ಜೈಲಿನಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಆಂಧ್ರ ಪ್ರದೇಶ ಮೂಲದ ಗಂಗಾದೇವಿ ಗಂಡನ ಜೊತೆಗೆ ಬೆಂಗಳೂರಿನ ಜಾಲಹಳ್ಳಿಯಲ್ಲಿ ವಾಸವಾಗಿದ್ದಳು. ಆಕೆಯ ಪತಿ ಇತ್ತೀಚೆಗೆ ಪೋಕ್ಸೋ ಕೇಸ್‌ನಲ್ಲಿ ಬಂಧಿತನಾಗಿ ಜೈಲಿನಲ್ಲಿದ್ದಾನೆ. ಮಗಳ ಜತೆಗೆ ಅಸಭ್ಯವಾಗಿ ವರ್ತಿಸಿದ ಹಿನ್ನೆಲೆಯಲ್ಲಿ ಸ್ವತಃ ಗಂಗಾದೇವಿಯೇ ಪತಿಯ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದಳು. ಎಪ್ರಿಲ್ 8ರಂದು ರಾತ್ರಿ ತನ್ನ ಮಗಳು ಲಕ್ಷ್ಮೀ (9) ಹಾಗೂ ಮಗ ಗೌತಮ್ (7) ನನ್ನು ತಾನೇ ಕೊಲೆ ಮಾಡಿದ್ದಳು. ಮಹಿಳೆಯನ್ನು ಜಾಲಹಳ್ಳಿ ಪೊಲೀಸರು ಆರೆಸ್ಟ್ ಮಾಡಿದ್ದರು.
Dogged by financial crisis and criticism from relatives for accusing her husband of sexually harassing their nine-year-old daughter, a 35-year-old woman allegedly smothered the girl and her seven-year-old son to death post Tuesday midnight in her north Bengaluru residence and now committed suicide at jail in Bangalore
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm