ಬ್ರೇಕಿಂಗ್ ನ್ಯೂಸ್
03-05-24 09:57 pm Mangalore Correspondent ಕ್ರೈಂ
ಮಂಗಳೂರು, ಮೇ.3: ಮಂಗಳೂರಿನ ಕಂಟ್ರಾಕ್ಟರ್ ಒಬ್ಬರಿಗೆ ಸಿಬಿಐ ಅಧಿಕಾರಿಯ ಸೋಗಿನಲ್ಲಿ ಫೋನ್ ಕರೆ ಮಾಡಿ ಮೋಸಗೈದ ಘಟನೆ ನಡೆದಿದ್ದು, ನಿಮ್ಮ ಮೇಲೆ ಸಿಬಿಐ ಕೇಸು ಆಗಿದೆಯೆಂದು ಹೇಳಿ ಬರೋಬ್ಬರಿ 15 ಲಕ್ಷಕ್ಕೂ ಹೆಚ್ಚು ಮೊತ್ತವನ್ನು ಸೈಬರ್ ಕಳ್ಳರು ಪೀಕಿಸಿದ್ದಾರೆ.
ಕೊಟ್ಟಾರ ನಿವಾಸಿ 65 ವರ್ಷದ ಕಂಟ್ರಾಕ್ಟರ್ ಒಬ್ಬರಿಗೆ ಎಪ್ರಿಲ್ 25ರಂದು ಅಪರಿಚಿತ ವ್ಯಕ್ತಿಯೊಬ್ಬರಿಂದ ಫೋನ್ ಕರೆ ಬಂದಿತ್ತು. ನಿಮ್ಮ ಮೊಬೈಲ್ ಸಂಖ್ಯೆಯಿಂದ ಬೆದರಿಕೆ ಕರೆಗಳು ಬರುತ್ತಿದ್ದು, ಹಣದ ವ್ಯವಹಾರ ಆಗುತ್ತಿರುವ ಬಗ್ಗೆ ಹೇಳಿದ್ದು, ಮೊಬೈಲ್ ಸಂಖ್ಯೆಯನ್ನು ಅಮಾನತು ಮಾಡಬೇಕಾಗುತ್ತದೆ. ನಿಮ್ಮ ಮೇಲೆ ಮುಂಬೈ ಸಿಬಿಐ ಕಚೇರಿಯಲ್ಲಿ ಕೇಸು ಆಗಿದೆ ಎಂದು ಹೇಳಿದ್ದ. ಆನಂತರ, ಕರೆಯನ್ನು ಸಿಬಿಐ ಅಧಿಕಾರಿಗೆ ವರ್ಗಾಯಿಸುತ್ತೇನೆಂದು ಹೇಳಿ ಇನ್ನೊಬ್ಬ ವ್ಯಕ್ತಿ ಮಾತನಾಡಿದ್ದರು.
ಸಿಬಿಐ ಅಧಿಕಾರಿಯ ಹೆಸರಲ್ಲಿ ಮಾತನಾಡಿದ್ದ ವ್ಯಕ್ತಿ, ನಿಮ್ಮ ಬ್ಯಾಂಕ್ ಖಾತೆಯಿಂದ ಹಣದ ಅವ್ಯವಹಾರ ಆಗಿದ್ದು ಖಾತೆಯನ್ನು ಮುಟ್ಟುಗೋಲು ಹಾಕಲಾಗುವುದು ಎಂದಿದ್ದ. ಆದ್ದರಿಂದ ನಿಮ್ಮ ಎಲ್ಲಾ ಬ್ಯಾಂಕ್ ಖಾತೆಯಲ್ಲಿರುವ ಹಣವನ್ನು ಬೇರೆ ಬ್ಯಾಂಕ್ ಖಾತೆಗೆ ವರ್ಗಾಯಿಸಬೇಕು. ಅಲ್ಲದೆ, ಸ್ಕೈಪ್ ಏಪ್ ಅನ್ನು ಡೌನ್ಲೋಡ್ ಮಾಡಿಕೊಳ್ಳುವಂತೆ ಸೂಚಿಸಿದ್ದರು. ಸ್ಕೈಪ್ ಏಪ್ ಡೌನ್ಲೋಡ್ ಮಾಡಿಕೊಂಡಿದ್ದ ಕಂಟ್ರಾಕ್ಟರ್ ವ್ಯಕ್ತಿಗೆ ಸಿಬಿಐ ತನಿಖಾಧಿಕಾರಿಯೆಂದು ಹೇಳಿ ಪ್ರತ್ಯೇಕ ನೋಟಿಸ್ ಕಳಿಸಿ ಬೆದರಿಸಿದ್ದರು. ಆನಂತರ, ನೀವು ನಮ್ಮೊಂದಿಗೆ ಸಹಕರಿಸಿದರೆ ನಿಮ್ಮನ್ನು ಪ್ರಕರಣದಿಂದ ಮುಕ್ತಗೊಳಿಸುತ್ತೇವೆ ಎಂದು ಹೇಳಿ ಬ್ಯಾಂಕ್ ಖಾತೆಯ ನಂಬರ್ ಕಳಿಸಿ ಹಣಕ್ಕೆ ಡಿಮ್ಯಾಂಡ್ ಇಟ್ಟಿದ್ದರು.
ಕೇಸಿನಿಂದ ಬಚಾವ್ ಆಗುವ ಆಸೆಯಲ್ಲಿ ಸದ್ರಿ ಖಾತೆಗೆ ಮೊದಲು 2.99 ಲಕ್ಷ ರೂಪಾಯಿ ಹಣವನ್ನು ಕಂಟ್ರಾಕ್ಟರ್ ವ್ಯಕ್ತಿ ಹಾಕಿದ್ದರು. ಆನಂತರ, ಸೈಬರ್ ಕಳ್ಳರು ವಿವಿಧ ಬ್ಯಾಂಕ್ ಖಾತೆಗಳನ್ನು ಕಳಿಸಿ ಹಣಕ್ಕಾಗಿ ಪೀಡಿಸಿದ್ದರು. ಒಟ್ಟು 15,01,049 ರೂಪಾಯಿ ಹಣವನ್ನು ತನ್ನ ಐಸಿಸಿಐ ಬ್ಯಾಂಕ್ ಖಾತೆಯಿಂದ ವರ್ಗಾವಣೆ ಮಾಡಿದ್ದಾರೆ. ಅಪರಾಧ ಪ್ರಕರಣದಲ್ಲಿ ಭಾಗಿಯಾದ ನೆಪದಲ್ಲಿ ಕಂಟ್ರಾಕ್ಟರ್ ವ್ಯಕ್ತಿ ಕುಳಿತಲ್ಲಿಂದಲೇ 15 ಲಕ್ಷ ಹಣವನ್ನು ಸೈಬರ್ ಕಳ್ಳರಿಗೆ ವರ್ಗಾಯಿಸಿದ್ದಾರೆ. ಈ ಬಗ್ಗೆ ಮೇ 3ರಂದು ಕಂಟ್ರಾಕ್ಟರ್ ವ್ಯಕ್ತಿ ಮಂಗಳೂರಿನ ಸೈಬರ್ ಠಾಣೆಗೆ ಬಂದು ದೂರು ನೀಡಿದ್ದಾರೆ.
Mangalore Fake CBI Call, fraudsters extort 15 lakhs rupees online from local contractor. The fraudsters asked him to come on SKYPE and was spoke by a fake CBI officer. The fraudsters shared accounts details and have lotted rs 15 lakhs online. A case has been registered at the cyber police station.
22-12-25 11:09 pm
HK News Desk
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
ಅಧಿಕಾರ ಹಂಚಿಕೆ ಹೈಕಮಾಂಡ್ ತೀರ್ಮಾನವೇ ಅಂತಿಮ, ನಮ್ಮದ...
22-12-25 06:29 pm
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
22-12-25 06:32 pm
HK News Desk
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
22-12-25 06:36 pm
Mangalore Correspondent
ಕೋಳಿ ಅಂಕದಲ್ಲಿ ಪೆಟ್ಟು ಕೊಡಲು ಇವರ ಅಪ್ಪನ ಜಾಗವಾ?...
22-12-25 12:26 pm
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm