ಬ್ರೇಕಿಂಗ್ ನ್ಯೂಸ್
04-05-24 12:23 pm HK News Desk ಕ್ರೈಂ
ಹುಬ್ಬಳ್ಳಿ , ಮೇ 04: ಅಪ್ರಾಪ್ತೆಯನ್ನು ನಂಬಿಸಿ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಗರ್ಭಿಣಿಯನ್ನಾಗಿ ಮಾಡಿದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.
19 ವರ್ಷದ ಯುವಕ ಸದ್ದಾಂಹುಸೇನ ಲಿಂಬುವಾಲೆ ಬಂಧಿತ ಆರೋಪಿ. ನವನಗರ ಠಾಣಾ ವ್ಯಾಪ್ತಿಯ 17 ವರ್ಷದ ಯುವತಿಗೆ ಮೋಸ ಮಾಡಿದ್ದಾನೆಂದು ಸಂತ್ರಸ್ತೆಯ ಪೋಷಕರು ಆರೋಪಿಸಿದ್ದಾರೆ.ಅಪ್ರಾಪ್ತೆ ಇಂದು ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಹಿನ್ನಲೆಯಲ್ಲಿ ಪೋಷಕರು, ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದ ತಪಾಸಣೆ ಮಾಡಿಸಿದ್ದಾರೆ. ಈ ವೇಳೆ, ಗರ್ಭಿಣಿಯಾಗಿರುವ ಸಂಗತಿ ಗೊತ್ತಾಗಿದೆ ಎನ್ನಲಾಗಿದೆ. ಈ ಕುರಿತು ಬಲವಂತವಾಗಿ ಲೈಂಗಿಕ ದೌರ್ಜನ್ಯ, ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಡಿ ಪ್ರಕರಣ ದಾಖಲಾಗಿದೆ.

ಇದಕ್ಕೂ ಮೊದಲು ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ಕಾರ್ಯಕರ್ತರು ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು. ಕಾನೂನಿನ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಎಪಿಎಂಸಿ ಠಾಣೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
ತನಿಖೆ ಕೈಗೊಂಡ ಪೊಲೀಸರು ಆರೋಪಿ ಸದ್ದಾಂಹುಸೇನ ಲಿಂಬುವಾಲೆ ನನ್ನ ತಕ್ಷಣ ವಶಕ್ಕೆ ಪಡೆದಿದ್ದರು. ಬಂಧನ ಪ್ರಕ್ರಿಯೆಗೆ ಶುಕ್ರವಾರ ರಾತ್ರಿ ಸುತಗಟ್ಟಿ ಗ್ರಾಮಕ್ಕೆ ತೆರಳಿದಾಗ, ಆರೋಪಿ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಆ ವೇಳೆ ಪೊಲೀಸರು ಅವನ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ. ವಿದ್ಯಾಗಿರಿ ಪೊಲೀಸ್ ಠಾಣೆ ಸಿಬ್ಬಂದಿ ಅರುಣ್ ಹಾಗೂ ಇನ್‌ಸ್ಪೆಕ್ಟರ್ ಅವರ ಕಾಲಿಗೆ ಗಾಯವಾಗಿದೆ. ತಕ್ಷಣ ಇನ್‌ಸ್ಪೆಕ್ಟರ್ ಸಂಗಮೇಶ ಡಿಂಗಿನಾಳ ಆತ್ಮರಕ್ಷಣೆಗಾಗಿ ಗಾಳಿಯಲ್ಲಿ ಒಂದು ಗುಂಡು ಹಾರಿಸಿ, ಮತ್ತೊಂದು ಗುಂಡನ್ನು ಆರೋಪಿಯ ಎಡಗಾಲಿಗೆ ಹೊಡೆದಿದ್ದಾರೆ. ಆರೋಪಿಯನ್ನ ಧಾರವಾಡ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಕಿಮ್ಸ್‌ಗೆ ರವಾನಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್ ತಿಳಿಸಿದ್ದಾರೆ.
Hubballi 19 year old youth arrested over rape charges of minor girl after she turns pregnant, Hindi activist held protest in hubballi against the safety of Hindu girls. Accused Saddam Hussain Limbuwale was shot to his leg as we tried to escape.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm