ಬ್ರೇಕಿಂಗ್ ನ್ಯೂಸ್
09-05-24 10:54 am HK News Desk ಕ್ರೈಂ
ಶಿವಮೊಗ್ಗ, ಮೇ.9: ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿ ಡಬಲ್ ಮರ್ಡರ್ ನಡೆದಿದ್ದು, ಇಬ್ಬರು ಯುವಕರನ್ನ ಬುಧವಾರ ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಹತ್ಯೆಯಾದ ಯುವಕರನ್ನು ಗೌಸ್(30) ಮತ್ತು ಶೋಹೆಬ್(35) ಎಂದು ಗುರುತಿಸಲಾಗಿದೆ. ಹಳೆಯ ವೈಷಮ್ಯ ಹಿನ್ನೆಲೆಯಲ್ಲಿ ಇಬ್ಬರ ಹತ್ಯೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಕೋಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೊಲೆಯಾದ ಈ ಇಬ್ಬರು ರೌಡಿ ಶೀಟರ್ ಗಳಾಗಿದ್ದು, ಮತ್ತೋರ್ವ ರೌಡಿಶೀಟರ್ ಆದ ಯಾಸೀನ್ ಖುರೇಷಿ ಮೇಲೆ ಹಲ್ಲೆ ಮಾಡಲು ಬಂದಿದ್ದರು. ಈ ವೇಳೆ ಯಾಸೀನ್ ಖುರೇಷಿ ಕಡೆಯವರು ಸೇರಿ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
ಘಟನೆಯಲ್ಲಿ ರೌಡಿಶೀಟರ್ ಯಾಸೀನ್ ಖುರೇಷಿಗೆ ಗಾಯವಾಗಿದ್ದು, ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೆಎಸ್ಆರ್ ತುಕಡಿ ನಿಯೋಜನೆ ಮಾಡಲಾಗಿದೆ.
ಸ್ಥಳಕ್ಕೆ ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಹೆಚ್ಚುವರಿ ಎಸ್‌ಪಿ ಅನಿಲ್‌ಕುಮಾರ್ ಭೂಮರಡ್ಡಿ ಭೇಟಿ ನೀಡಿ ಪರಿಶೀಲಿಸಿದರು. ಘಟನೆಯ ದೃಶ್ಯಾವಳಿ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.
Shivamogga double Murder, two attacked and killed brutally in Lashkar Mohalla. The two killed are said to be rowdy sheeters. Some old enimity is the reason for this brutal murder says SP Mithun.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm