ಬ್ರೇಕಿಂಗ್ ನ್ಯೂಸ್
09-05-24 04:51 pm Bengaluru Correspondent ಕ್ರೈಂ
ಬೆಂಗಳೂರು, ಮೇ 9: ವೆಬ್ ಸೀರೀಸ್‌ಗಳಲ್ಲಿ ಅಭಿನಯಿಸುತ್ತಿರುವ ಜ್ಯೋತಿ ರೈ ಅವರಿಗೆ ದೊಡ್ಡ ಶಾಕ್ ಸಿಕ್ಕಿದೆ. ಜ್ಯೋತಿ ರೈ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ/ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಈ ಬಗ್ಗೆ ನಟಿ ಜ್ಯೋತಿ ರೈ ಸೈಬರ್ ಕ್ರೈಂಗೆ ದೂರು ನೀಡಿದ್ದಾರೆ.
ಇದು ನಕಲಿ ವಿಡಿಯೋ ಎನ್ನಲಾಗಿದೆ. ಪ್ರಜ್ವಲ್ ರೇವಣ್ಣ ಅವರ ಹ್ಯಾಷ್ ಟ್ಯಾಗ್ ಬಳಸಿಕೊಂಡು ಫೋಟೋವನ್ನು ಹಂಚಿಕೊಳ್ಳಲಾಗಿದೆ. ಈ ಅಶ್ಲೀಲ ಫೋಟೊ ಮತ್ತು ವಿಡಿಯೊ ಫೇಸ್‌ಬುಕ್, ಎಕ್ಸ್ ಖಾತೆ, ಟೆಲಿಗ್ರಾಂ ಸೇರಿದಂತೆ ಹಲವು ಸೋಷಿಯಲ್ ಮೀಡಿಯಾ ಪ್ಲ್ಯಾಟ್‌ಫಾರ್ಮ್‌ನಲ್ಲಿ ಶೇರ್ ಆಗುತ್ತಿದೆ. ಜತೆಗೆ ಕಿಡಿಗೇಡಿಯೊಬ್ಬ ಎಕ್ಸ್ ಖಾತೆಯಲ್ಲಿ ತನ್ನ ಯುಟ್ಯೂಬ್ ಸಬ್‌ಸ್ಕ್ರೈಬ್ ಮಾಡಿದರೆ ಜ್ಯೋತಿ ರೈ ವಿಡಿಯೊ ಕಳುಹಿಸುತ್ತೀನಿ ಎಂದು ಪೋಸ್ಟ್ ಮಾಡಿದ್ದಾನೆ. 1000 ಸಬ್‌ಸ್ಕ್ರೈಬ್ ಆದರೆ ಮತ್ತಷ್ಟು ವಿಡಿಯೊವನ್ನು ಅಪ್‌ಲೋಡ್ ಮಾಡುತ್ತೇನೆ ಎಂದಿದ್ದಾನೆ ಈ ಕಿಡಿಗೇಡಿ. ತನ್ನ ಸಬ್‌ಸ್ಕ್ರೈಬ್ ಹೆಚ್ಚಿಸಿಕೊಳ್ಳಲು ಇಂತಹ ನೀಚ ಕೃತ್ಯಕ್ಕೆ ಇಳಿದಿದ್ದಾನೆ. ತನ್ನ ನಕಲಿ ಅಶ್ಲೀಲ ವಿಡಿಯೋದಿಂದ ನೊಂದಿರುವ ನಟಿ ಜ್ಯೋತಿ ರೈ ಈ ಬಗ್ಗೆ ಪತ್ರವೊಂದನ್ನು ಬರೆದಿದ್ದಾರೆ.
‘’ನನ್ನ ಮಾನ ಹಾಗೂ ಕುಟುಂಬದ ಗೌರವ ಅಪಾಯದಲ್ಲಿದೆ. ಸರಿಯಾದ ಕ್ರಮ ತೆಗೆದುಕೊಳ್ಳದಿದ್ದರೆ ನನ್ನ ಜೀವನದಲ್ಲಿ ಸರಿಪಡಿಸಲಾಗದ ಹಾನಿ ಉಂಟಾಗುತ್ತದೆ’’ ಎಂದು ದೂರಿನಲ್ಲಿ ನಟಿ ಜ್ಯೋತಿ ರೈ ಆತಂಕ ವ್ಯಕ್ತಪಡಿಸಿದ್ದಾರೆ.
ನಾನು ಇಂಟರ್ನೆಟ್ ಮತ್ತು ಸಾಮಾಜಿಕ ಜಾಲತಾಣಗಳನ್ನು ನಿತ್ಯ ಬಳಕೆ ಮಾಡುತ್ತೇನೆ. ಇತ್ತೀಚಿನ ದಿನಗಳಲ್ಲಿ ‘unknown users’ ಮೂಲಕ ನನಗೆ ಸಂದೇಶಗಳು ಬರುತ್ತಿವೆ. ನನ್ನ ಫೋಟೋಗಳ ಜೊತೆಗೆ ಅಂತರ್ಜಾಲದಲ್ಲಿ ಡೌನ್‌ಲೋಡ್ ಮಾಡಲಾದ ನಗ್ನ ಹಾಗೂ ಅಶ್ಲೀಲ ಚಿತ್ರಗಳನ್ನು ಮಾರ್ಫಿಂಗ್ ಮಾಡಿ ನನ್ನ ಇನ್‌ಬಾಕ್ಸ್‌ಗೆ ಕಳುಹಿಸುತ್ತಿದ್ದಾರೆ. ನನ್ನ ಇನ್ಸ್ಟಾಗ್ರಾಮ್ ಸ್ಟೋರಿಗಳಲ್ಲಿ ಹಾಕಲಾದ ಫೋಟೋಗಳನ್ನು ಬಳಸಿ ಮಾರ್ಫಿಂಗ್ ಮಾಡಲಾಗಿದೆ. ನನಗೆ ಕಿರುಕುಳ ನೀಡುವ ಮತ್ತು ನನ್ನ ಮಾನಹಾನಿ ಮಾಡುವ ಉದ್ದೇಶದಿಂದಲೇ ಈ ಕೃತ್ಯ ಎಸಗಲಾಗಿದೆ ಎಂದು ಶಂಕಿಸುತ್ತೇನೆ’.
ಈ ಬಳಕೆದಾರರು/ವ್ಯಕ್ತಿಗಳ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳದಿದ್ದರೆ ನನ್ನ ಜೀವನದಲ್ಲಿ ಸರಿಪಡಿಸಲಾಗದ ಹಾನಿ ಉಂಟಾಗುತ್ತದೆ’’ ಎಂದು ದೂರಿನಲ್ಲಿ ಜ್ಯೋತಿ ರೈ ಉಲ್ಲೇಖಿಸಿದ್ದಾರೆ.
Kannada TV actress Jyothi Rai intimate photos and videos go viral online. Jyothi Rai has filed a complaint with the cybercrime police in this matter. Her intimate photos and videos have been morphed and shared using the hashtag Prajwal Revanna.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
05-05-25 10:43 pm
Mangalore Correspondent
Mangalore Suhas Shetty murder, BJP Umanath Ko...
05-05-25 07:15 pm
MLA Harish Poonja, Dinesh Gundurao: ಬುರ್ಖಾಧಾರ...
05-05-25 05:10 pm
Suhas Shetty Murder, VHP, Bajpe Police: ಸುಹಾಸ...
05-05-25 03:24 pm
Paakashala Resturant, Mangalore: ಮಂಗಳೂರಿನಲ್ಲು...
05-05-25 11:22 am
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm