ಬ್ರೇಕಿಂಗ್ ನ್ಯೂಸ್
10-05-24 02:04 pm HK News Desk ಕ್ರೈಂ
ಕಲಬುರಗಿ, ಮೇ.10: ಚುನಾವಣೆ ಮುಗಿದರೂ ಹಗೆತನ ಮುಗಿಯಲಿಲ್ಲ. ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕೆ ಯುವಕನೊಬ್ಬ ಕೊಲೆಯಾಗಿದ್ದಾನೆ. ಜಾವೀದ್ ಚಿನ್ನಮಳ್ಳಿ (25) ಹತ್ಯೆಯಾದವನು. ಕಲಬುರಗಿಯ ಅಫಜಲಪುರ ತಾಲೂಕಿನ ಸಂಗಾಪುರ ಗ್ರಾಮದಲ್ಲಿ ಘಟನೆ ನಡೆದಿದೆ.
ಮೇ 7 ರಂದು ನಡೆದ ಲೋಕಸಭೆ ಚುನಾವಣೆಯಲ್ಲಿ ಜಾವೀದ್ ಕಾಂಗ್ರೆಸ್ ಪರ ಪ್ರಚಾರ ಮಾಡಿ, ಮತ ಹಾಕಿಸಿದ್ದ. ಇದಕ್ಕೆ ದ್ವೇಷ ಬೆಳೆಸಿಕೊಂಡ ಕೆಲವರು ಅಮಾವಾಸ್ಯೆ ದಿನ ಪಾರ್ಟಿ ಮಾಡಲು ಕರೆಸಿಕೊಂಡಿದ್ದಾರೆ. ಕಿಡಿಗೇಡಿಗಳ ಪ್ಲಾನ್ ತಿಳಿಯದೆ ಹೋದ ಜಾವೀದ್ ಜತೆಗೆ ಗಲಾಟೆ ಮಾಡಿದ್ದಾರೆ. ನಂತರ ಜಾವೀದ್‌ನನ್ನು ಕೊಲೆಗೈದಿದ್ದಾರೆ.
ಕೊಲೆ ಮಾಡಿ ಮೃತದೇಹವನ್ನು ಅಲ್ಲೆ ಬಾವಿಯಲ್ಲಿ ಬಿಸಾಡಿ ಆರೋಪಿಗಳು ಪರಾರಿ ಆಗಿದ್ದಾರೆ. ಮೃತದೇಹವನ್ನು ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಗಾಣಗಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾವಿಯಲ್ಲಿದ್ದ ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಸದ್ಯ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪರಾರಿ ಆಗಿರುವ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ತನಿಖೆಯನ್ನು ಮುಂದುವರಿಸಿದ್ದಾರೆ.
Kalaburgi youth murdered for campaigning for congress, body found in well. The deceased has been identified as Javed.
09-08-25 10:12 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
09-08-25 10:53 pm
Mangalore Correspondent
Drug’s Mangalore, Police, Arrest: ಡ್ರಗ್ಸ್ ಮುಕ...
09-08-25 09:42 pm
ಧರ್ಮಸ್ಥಳ ಕ್ಷೇತ್ರದ ಘನತೆ ಕುಗ್ಗಿಸಲೆತ್ನಿಸುತ್ತಿರುವ...
09-08-25 08:10 pm
Father Muller Medical College, Hospital, Mang...
09-08-25 04:22 pm
Dharmasthala,16th Spot at Bahubali Hill: ಧರ್ಮ...
09-08-25 02:16 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm