ಬ್ರೇಕಿಂಗ್ ನ್ಯೂಸ್
15-05-24 10:20 am Bangalore Correspondent ಕ್ರೈಂ
ಬೆಂಗಳೂರು, ಮೇ.15: ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ 40 ಲಕ್ಷ ರೂ. ವಂಚನೆ ಮಾಡಿದ ಪ್ರಕರಣದಲ್ಲಿ ವಿಜಯನಗರ ಪೊಲೀಸರು ಸಿಐಡಿ ವಿಭಾಗದ ಇಬ್ಬರು ಅಧಿಕಾರಿಗಳನ್ನು ಬಂಧಿಸಿದ್ದಾರೆ.
ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ವಂಚನೆ ಮಾಡಿದ ಸಿಐಡಿ ವಿಭಾಗದ ಮಹಿಳಾ ಪೊಲೀಸ್ ಅಧಿಕಾರಿ ಸೇರಿ ಇಬ್ಬರನ್ನು ವಿಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಸಿಐಡಿ ಘಟಕದಲ್ಲಿ ಸೆಕ್ಷನ್ ಸುಪರಿಡೆಂಟ್ ಆಗಿದ್ದ ಅನಿತಾ ಬಿ.ಎಸ್ ಹಾಗೂ ರಾಮಚಂದ್ರ ಭಟ್ ಬಂಧಿತರು.
ಚಿಕ್ಕಮಗಳೂರಿನ ಕಲ್ಯಾಣನಗರದ ನಿವಾಸಿ ಸುನಿಲ್ ಎಂಬವರಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ 40 ಲಕ್ಷ ರೂ. ವಂಚನೆ ಮಾಡಿದ್ದಾರೆ. ರಾಮಚಂದ್ರ ಭಟ್ ಎನ್ನುವವರು ಸಿಐಡಿ ಇಲಾಖೆ ಅಧಿಕಾರಿ ಅನಿತಾ ಅವರನ್ನು ಭೇಟಿ ಮಾಡಿಸಿ ಪರಿಚಯ ಮಾಡಿಕೊಟ್ಟಿದ್ದಾರೆ. ಈ ವೇಳೆ ಯುವಕ ಸುನೀಲ್‌ಗೆ ಕೆಪಿಎಸ್‌ಸಿ ನೇಮಕಾತಿಯ ಮೂಲಕ ಲೋಕೋಪಯೋಗಿ (ಪಿಡಬ್ಲ್ಯೂಡಿ) ಇಲಾಖೆಯಲ್ಲಿ ಸಹಾಯಕ ಇಂಜಿನಿಯರ್ ಹುದ್ದೆಯನ್ನು ಕೊಡಿಸುವುದಾಗಿ ನಂಬಿಸಿದ್ದರು. ಹಂತ ಹಂತವಾಗಿ ಹಣ ಕೊಟ್ಟರೆ ಕೆಲಸ ಕೊಡಿಸುವುದಾಗಿ ನಂಬಿಸಿ 40 ಲಕ್ಷ ರೂ. ವರೆಗೆ ಹಣ ಪಡೆದಿದ್ದಾರೆ. ಆದರೆ, ಕೆಲಸ ಮಾತ್ರ ಸಿಕ್ಕಿರಲಿಲ್ಲ.
ಯುವಕ ಸರ್ಕಾರಿ ಕೆಲಸ ಸಿಗಲ್ಲ ಎಂಬ ಅನುಮಾನದಲ್ಲಿ ತನ್ನ ಹಣ ಹಿಂತಿರುಗಿಸುವಂತೆ ಕೇಳಿದ್ದಾನೆ. ಆಗ ಯುವಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಉದ್ಯೋಗಕ್ಕೆ ವಾಮ ಮಾರ್ಗದಲ್ಲಿ ಹಣ ಕೊಟ್ಟು ಭ್ರಷ್ಟಾಚಾರ ಮಾಡಿದ ಆರೋಪದಡಿ ನಿನ್ನನ್ನು ಜೈಲಿಗೆ ಹಾಕಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಇದರಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಯುವಕ ಸುನೀಲ್ ಮನೆಯವರ ಒತ್ತಾಸೆ ಮೇರೆಗೆ ಬೆಂಗಳೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ವಂಚನೆ ದೂರು ದಾಖಲಿಸಿದ್ದಾನೆ. ಆರೋಪಿಗಳು ಇದೇ ರೀತಿ ಬೇರೆ ಇಬ್ಬರಿಗೂ ವಂಚನೆ ಮಾಡಿದ್ದು ಕೋಟಿಗೂ ಹೆಚ್ಚು ವಂಚನೆ ಮಾಡಿರುವುದಾಗಿ ತನಿಖೆಯಲ್ಲಿ ಪತ್ತೆಯಾಗಿದೆ.
Two CID staffs arrested for cheating people in the name of government jobs in Bangalore. Anita BS and Ramachandra Bhatt, who were working as section superintendents in Bengaluru’s CID unit, have been arrested in this connection, informed the police.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm