ಬ್ರೇಕಿಂಗ್ ನ್ಯೂಸ್
15-05-24 12:21 pm HK News Desk ಕ್ರೈಂ
ಹುಬ್ಬಳ್ಳಿ, ಮೇ.15: ನೇಹಾ ಹಿರೇಮಠ ಹತ್ಯೆ ಕೇಸ್ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಪ್ರೀತಿ ನಿರಾಕರಿಸಿದ ಕಾರಣಕ್ಕೆ ಮತ್ತೊಬ್ಬ ಯುವತಿಯೊಬ್ಬಳ ಕೊಲೆಯಾಗಿದೆ.
ನೇಹಾ ಕೊಲೆಯಾದ ಮಾದರಿಯಲ್ಲಿಯೇ ಸಾಯಿಸುವೆ ಎಂದು ಎಚ್ಚರಿಸಿದ್ದ ಯುವಕ ನಸುಕಿನಲ್ಲಿ ಯುವತಿ ಮನೆಗೆ ನುಗ್ಗಿ ಚೂರಿಯಿಂದ ತಿವಿದು ಭೀಕರ ಕೊಲೆ ಮಾಡಿದ್ದಾನೆ. ಹುಬ್ಬಳ್ಳಿ ನಗರದ ವೀರಾಪುರ ಓಣಿ ಗುಡಿಓಣಿ ನಿವಾಸಿ ಅಂಜಲಿ ಅಂಬಿಗೇರ (20) ಎಂಬಾಕೆಯೇ ಸಾವನ್ನಪ್ಪಿದ ಯುವತಿ. ಈಕೆಯನ್ನು ಮೈಸೂರು ಮೂಲದ ವಿಶ್ವ ಅಲಿಯಾಸ್ ಗಿರೀಶ್ ಸಾವಂತ (21) ಎಂಬಾತ ಮನೆಯವರ ಎದುರಲ್ಲೇ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾನೆ. ಯುವಕ ಕಳೆದ ಹಲವು ಸಮಯದಿಂದ ಅಂಜಲಿಗೆ ಪ್ರೀತಿಸು ಎಂದು ಪೀಡಿಸುತ್ತಿದ್ದನಂತೆ. ಆದರೆ ಅಂಜಲಿ ಪ್ರೀತಿ ನಿರಾಕರಿಸಿದಕ್ಕೆ ಬುಧವಾರ ಬೆಳಂಬೆಳ್ಳಗ್ಗೆ ವೀರಾಪುರ ಓಣಿಯಲ್ಲಿನ ಅಂಜಲಿ ನಿವಾಸಕ್ಕೆ ತೆರಳಿ ಮನೆಯ ಬಾಗಿಲು ಬಡಿದು ಏಕಾಏಕಿ ಅಂಜಲಿ ಹೊಟ್ಟೆಗೆ ಚಾಕು ಇರಿದಿದ್ದಾನೆ. ಸಮಾಧಾನವಾಗದೇ ಮನೆ ತುಂಬೆಲ್ಲಾ ಎಳೆದಾಡಿ ಚಾಕುವಿನಿಂದ ಚುಚ್ಚಿದ್ದಾನೆ. ಮನೆಯವರು ಬಿಡಿಸಲು ಹೋದರೂ ಎಳೆದಾಡಿ ಕೊಲೆ ಮಾಡಿದ್ದಾನೆ.


ಕೊಲೆ ಮಾಡಿದ ಯುವಕ ಮೃತ ಯುವತಿಯನ್ನು ಮೈಸೂರು ಪ್ರವಾಸಕ್ಕೆ ಬಾ ಎಂದು ಕಾಡುತ್ತಿದ್ದ. ಒಂದು ವೇಳೆ ನೀನು ನನ್ನ ಜೊತೆ ಬರದೆ ಹೋದ್ರೆ ನೇಹಾಗೆ ಆದ ಹಾಗೆಯೇ ನಿನಗೂ ಮಾಡ್ತೀನಿ ಎಂದು ಧಮ್ಕಿ ಹಾಕಿದ್ದ. ಕೃತ್ಯ ಎಸಗಿದ ಗಿರೀಶ್ ಸಾವಂತ ವಿರುದ್ಧ ಹಲವು ಕಳ್ಳತನ ಪ್ರಕರಣಗಳಲ್ಲಿ ಕೇಸು ದಾಖಲಾಗಿತ್ತು.
ಇನ್ನು ಆರೋಪಿ ಗಿರೀಶ್ ಸಾವಂತ ಅಂಜಲಿಗೆ ಬೆದರಿಕೆ ಹಾಕಿರುವ ವಿಚಾರವಾಗಿ ಅಜ್ಜಿ ಗಂಗಮ್ಮ ಪೊಲೀಸರ ಗಮನಕ್ಕೆ ತಂದಿದ್ದರು. ಆದರೆ, ಅಜ್ಜಿಯ ಮಾತಿಗೆ ಪೊಲೀಸರು ನಿಗಾ ವಹಿಸಲಿಲ್ಲ ಎಂಬ ಆರೋಪ ಕುಟುಂಬದಿಂದ ಕೇಳಿಬಂದಿದೆ. ಇದೆಲ್ಲ ಮೂಢನಂಬಿಕೆ, ಹಾಗೇನೂ ಆಗಲ್ಲ ಎಂದು ಬೆಂಡಿಗೇರಿ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದರು. ಬೆಳಗ್ಗಿನಿಂದಲೇ ಹುಬ್ಬಳ್ಳಿ ನಗರದಾದ್ಯಂತ ಎಲರ್ಟ್ ಮಾಡಿದ ಪೊಲೀಸರು ಆರೋಪಿಯನ್ನು ಮಧ್ಯಾಹ್ನ ವೇಳೆಗೆ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
20 year old Anjali brutally killed for rejecting love in Hubballi. The arrested has been identified as Girish. He was threatening Anjali of killing her just like Neha Hiremath if she didn't agree for his love proposal. He entered Anjalis house and killed her by Stabbing her several times.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm