ಬ್ರೇಕಿಂಗ್ ನ್ಯೂಸ್
17-05-24 02:09 pm Bangalore Correspondent ಕ್ರೈಂ
ಬೆಂಗಳೂರು, ಮೇ.17: ಗೃಹ ಸಚಿವ ಪರಮೇಶ್ವರ ಆಪ್ತ ಅಂತ ಹೇಳ್ಕೊಂಡು ಸಾರ್ವಜನಿಕರನ್ನ ವಂಚಿಸುತ್ತಿದ್ದ ತುಮಕೂರು ಜಿಲ್ಲೆ ಕೊರಟಗೆರೆಯ ಮಹಮ್ಮದ್ ಜುಬೇರ್ ಎಂಬಾತನನ್ನ ಬೆಂಗಳೂರಿನ ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ.
33 ವರ್ಷದ ಜುಬೇರ್, ಮೆಡಿಕಲ್ ಸೀಟು, ಕಡಿಮೆ ಬೆಲೆಗೆ ಸೈಟ್, ವಿವಿಧ ಬ್ಯಾಂಕ್ ಗಳಿಂದ ಕೋಟ್ಯಂತರ ರೂಪಾಯಿ ಸಾಲ ಕೊಡಿಸುವುದಾಗಿ ಆಮಿಷವೊಡ್ಡಿ ಸಾರ್ವಜನಿಕರಿಂದ ಹಣ ಪಡೆದು ವಂಚಿಸುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.
ಕೆಂಗೇರಿ ನಿವಾಸಿ ಸಾಯಿದ ತಬಸುಂ ಎಂಬುವರು ದೂರು ಸಲ್ಲಿಸಿ, ಜುಬೇರ್ ತನಗೆ ರೂ. 1.20 ಕೋಟಿ ಹಾಗೂ 186 ಗ್ರಾಂ ಚಿನ್ನಾಭರಣಗಳನ್ನು ವಂಚನೆ ಮಾಡಿದ್ದಾನೆ ಎಂದು ಆಪಾದಿಸಿದ್ಧರು. ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ ನಾಲ್ಕು ದಿನಗಳ ಕಾಲ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ.
ಆರೋಪಿ ಜುಬೇರ್ ವಂಚಿಸಿದ್ದ 80 ಲಕ್ಷ ರೂ. ಹಣದ ಮಾಹಿತಿ ಸಿಕ್ಕಿದ್ದು, ಉಳಿದ ಹಣವನ್ನು ಎಲ್ಲಿ ಅಡಗಿಸಿಟ್ಟಿದ್ದಾನೆ ಎಂಬ ಮಾಹಿತಿ ಲಭ್ಯವಾಗಿಲ್ಲ. ಈ ಹಣವನ್ನು ಪತ್ತೆ ಮಾಡಲು ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಚಿವರ ಸ್ವಕ್ಷೇತ್ರ ಕೊರಟಗೆರೆ ಹಾಗೂ ತುಮಕೂರು ಜಿಲ್ಲೆಯಲ್ಲಿ ಗೃಹ ಸಚಿವ ಜಿ. ಪರಮೇಶ್ವರ ಅವರ ಆಪ್ತ ಎಂದು ಬಿಂಬಿಸಿಕೊಂಡು ಓಡಾಡುತ್ತಿದ್ದ. ವಿವಿಧ ಇಲಾಖೆಗಳ ಅಧಿಕಾರಿಗಳ ಹೆಸರಿನ ನಕಲಿ ಸೀಲ್ ಮತ್ತು ನಕಲಿ ಲೆಟರ್ ಹೆಡ್ ಗಳನ್ನು ಬಳಸಿಕೊಂಡು ವಂಚಿಸುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.
ಗೃಹ ಸಚಿವರ ಜೊತೆಗಿರುವ ಭಾವಚಿತ್ರ ಹಾಗೂ ವಿಡಿಯೊಗಳನ್ನು ತೋರಿಸಿಕೊಂಡು ಸಾರ್ವಜನಿಕರನ್ನು ನಂಬಿಸುತ್ತಿದ್ದ. ಕೆಂಗೇರಿ, ತುಮಕೂರು ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಆರೋಪಿ ವಿರುದ್ಧ 14 ದೂರುಗಳು ದಾಖಲಾಗಿವೆ. ಬೆಂಗಳೂರು, ತುಮಕೂರು ಸೇರಿದಂತೆ ವಿವಿಧ ಜಿಲ್ಲೆಗಳ ಸಾರ್ವಜನಿಕರನ್ನು ಹಣ ಪಡೆದು ವಂಚಿಸುತ್ತಿದ್ದ ಎನ್ನುವ ದೂರುಗಳು ಬಂದಿದ್ದವು.
ಅಕ್ರಮವಾಗಿ ಸಂಪಾದಿಸಿದ ಹಣದಲ್ಲಿ ಮೋಜಿನಜೀವನ ನಡೆಸುತ್ತಿದ್ದ. ಇಟ್ಟಿಗೆ ಫ್ಯಾಕ್ಟರಿಗಳಿಗೆ ಅಕ್ರಮವಾಗಿ ಮಣ್ಣು ಪೂರೈಕೆ ಮಾಡುತ್ತಿದ್ದ ಎಂದು ಪೊಲೀಸ್ ತನಿಖೆಯಿಂದ ಗೊತ್ತಾಗಿದೆ.
Bangalore 33 year old arrested for cheating in crores. The arrested has been identified as Juber from Tumkuru. He was cheating people in the name of getting medical College seat, and sites for less rate. It is said he used to carry fake seals of officers.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm