ಬ್ರೇಕಿಂಗ್ ನ್ಯೂಸ್
21-05-24 01:28 pm HK News Desk ಕ್ರೈಂ
ಮೈಸೂರು, ಮೇ 21: ಪತಿಯೇ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಟಿ. ನರಸೀಪುರದ ತುರಗನೂರು ಗ್ರಾಮದಲ್ಲಿ ನಡೆದಿದೆ.
ಮೈಸೂರು ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿದ್ಯಾ ಕೊಲೆಯಾದ ದುರ್ದೈವಿಯಾಗಿದ್ದು, ಕೌಟುಂಬಿಕ ಕಲಹ ಹಿನ್ನೆಲೆ ಗಂಡನೇ ವಿದ್ಯಾಳ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ.
ಮೃತ ವಿದ್ಯಾ ಅವರು ಭಜರಂಗಿ, ವಜ್ರಕಾಯ ಸಿನಿಮಾದಲ್ಲಿ ನಟಿಸಿದ್ದರು. ಅಲ್ಲದೇ ಕಾಂಗ್ರೆಸ್ ಪಕ್ಷದಲ್ಲೂ ಸಕ್ರೀಯವಾಗಿದ್ದರು. ಸೋಮವಾರ ರಾತ್ರಿ ಗಂಡ ಹಾಗೂ ಪತ್ನಿ ನಡುವೆ ಜಗಳ ನಡೆದಿದ್ದು, ಈ ವೇಳೆ ಮಾತಿಗೆ ಮಾತು ಬೆಳೆದು ಹಲ್ಲೆ ಮಾಡಿ ಪತಿ ನಂದೀಶ್ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಬನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಇಂದು ಬೆಳಗ್ಗೆ ಘಟನೆ ಬೆಳಕಿಗೆ ಬಂದಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ವಿದ್ಯಾ ಅವರ ಶವವನ್ನು ಗಮನಿಸಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರಂತೆ. ಕೊಲೆ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು, ಕೊಲೆಗೆ ನಿಖರ ಕಾರಣ ಎಂದು ತಿಳಿದು ಬೇಕಿದ್ದು, ಈ ಬಗ್ಗೆ ಪೊಲೀಸರು ಕುಟುಂಬಸ್ಥರು ಹಾಗೂ ನೆರೆಹೊರೆಯವರಿಂದ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಘಟನೆ ಬಳಿಕ ಆರೋಪಿ ನಂದೀಶ್ ಸ್ಥಳದಿಂದ ಎಸ್ಕೇಪ್ ಆಗಿದ್ದಾನಂತೆ. ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಹೆಚ್ಚುವರಿ ಎಸ್ಪಿ ಡಾ.ನಂದಿನಿ, ನಂಜನಗೂಡು ಡಿವೈಎಸ್ಪಿ ಗೋವಿಂದರಾಜು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಆರೋಪಿ ಬಂಧನಕ್ಕೆ ಪೊಲೀಸರು ಕಾರ್ಯಾಚರನೆ ಶುರು ಮಾಡಿದ್ದು, ಮೃತದೇಹ ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
Mysuru Congress leader cum actress murdered by husband over family issue. The deceased has been identified as Vidhya. Husband who killed her has fleed away from the spot and police are now investigating the case.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am