ಬ್ರೇಕಿಂಗ್ ನ್ಯೂಸ್
22-05-24 04:36 pm HK News Desk ಕ್ರೈಂ
ಹಾಸನ, ಮೇ 22: ಸಿನಿಮೀಯ ರೀತಿಯಲ್ಲಿ ಹಾಸನದ ಡಿವೈಎಸ್‌ಪಿ ಅವರ ಬ್ಯಾಂಕ್ ಖಾತೆಗೆ ಕನ್ನ ಹಾಕಿದ ಸೈಬರ್ ಕಳ್ಳರು 15 ಲಕ್ಷಕ್ಕೂ ಅಧಿಕ ಹಣ ಎಗರಿಸಿರುವ ಘಟನೆ ನಡೆದಿದೆ.
ಹಾಸನ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪಿ.ಕೆ.ಮುರಳೀಧರ್ ಅವರ ಖಾತೆಯಿಂದಲೇ 15,98,761 ಲಕ್ಷ ರೂ. ಹಣ ವರ್ಗಾವಣೆ ಮಾಡಿಕೊಂಡು ಸೈಬರ್ ಖದೀಮರು ವಂಚನೆ ಮಾಡಿದ್ದಾರೆ. ಈ ಸಂಬಂಧ ಹಾಸನ ನಗರದ ಸಿಇಎನ್ ಪೊಲೀಸ್ ಠಾಣೆಗೆ ಮುರಳೀಧರ್ ಅವರು ದೂರು ನೀಡಿದ್ದಾರೆ.
ಮಡಿಕೇರಿಯ ಕೆನರಾ ಬ್ಯಾಂಕ್ ಬ್ರಾಂಚ್ ಹಾಗೂ ಭಾಗಮಂಡಲದ ಕೆನರಾಬ್ಯಾಂಕ್‌ನ ಬ್ಯಾಂಕ್ ಗಳಲ್ಲಿ ಮುರಳೀಧರ್ ಅಕೌಂಟ್ ಗಳನ್ನು ಹೊಂದಿದ್ದಾರೆ. ಮೇ 20 ರಂದು ಮಧ್ಯಾಹ್ನ 1:30ರ ವೇಳೆಗೆ ಡಿವೈಎಸ್‌ಪಿ ಅವರ ಮೊಬೈಲ್ ಸಂಖ್ಯೆಗೆ ಖಾಲಿ ಮೆಸೇಜ್‌ಗಳು ಬಂದಿವೆ. ಇದಾದ ನಂತರ ತಮ್ಮ ಗಮನಕ್ಕೇ ಬಾರದೇ ಬೇರೆ ಬೇರೆ ಬ್ಯಾಂಕ್ ಖಾತೆಗಳಿಂದ ಹಣ ವರ್ಗಾವಣೆ ಆಗಿರುವುದು ಬೆಳಕಿಗೆ ಬಂದಿದೆ.
ಮಡಿಕೇರಿ ಅಕೌಂಟ್ ನಿಂದ 12,10,711 ರೂ. ಹಾಗೂ ಭಾಗಮಂಡಲದ ಅಕೌಂಟ್ ನಿಂದ 3,88,050 ರೂ. ಸೇರಿದಂತೆ ಒಟ್ಟು 15,98,761 ರೂ. ಅನ್ನು ಅಪರಿಚಿತ ಬ್ಯಾಂಕ್ ಖಾತೆಗಳಿಗೆ ಟ್ರಾನ್ಸ್‌ಫರ್ ಮಾಡಲಾಗಿದೆ.
ಸದ್ಯ ಖದೀಮರನ್ನು ಪತ್ತೆ ಮಾಡಿ ತಮ್ಮ ಹಣ ವಾಪಸ್ ಕೊಡಿಸುವಂತೆ ಸೆನ್ ಪೊಲೀಸ್ ಠಾಣೆಗೆ ಡಿವೈಎಸ್‌ಪಿ ಮುರುಳಿಧರ್ ದೂರು ನೀಡಿದ್ದಾರೆ. ಏನೋ ಸಾಹೇಬ್ರು ಸ್ಟೇಷನ್ ವಿಸಿಟ್ ಗೆ ಬಂದಿರಬಹುದು ಅನ್ಕೊಂಡ ಸೈಬರ್ ಸಿಬ್ಬಂದಿಗಳು ಅಧಿಕಾರಿಯೇ ಸ್ವತಃ ಹಣ ಕಳ್ಕೊಂಡ ವಿಷಯ ಕೇಳಿ ಬೆಚ್ಚಿಬಿದ್ದಿದ್ದಾರೆ.
Hassan Miscreants allegedly hacked bank accounts of Hassan DySP P K Muralidhar. Miscreants allegedly hacked the bank accounts of Hassan sub-division DySP P K Muralidhar and transferred Rs 15.98 lakh to various accounts.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am