ಬ್ರೇಕಿಂಗ್ ನ್ಯೂಸ್
30-05-24 10:33 am Bangalore Correspondent ಕ್ರೈಂ
ಬೆಂಗಳೂರು, ಮೇ 30: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಾಗಿರುವ 187 ಕೋಟಿ ಹಗರಣ ಸಂಬಂಧಿಸಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಸೇರಿದಂತೆ ಆರು ಮಂದಿ ಅಧಿಕಾರಿಗಳ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕ ಎ. ರಾಜಶೇಖರ್ ಅವರು ಮಂಗಳವಾರ ರಾತ್ರಿ ನೀಡಿದ ದೂರು ಆಧರಿಸಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕಿ ಹಾಗೂ ಸಿಇಓ ಮನಿಮೇಖಲೈ, ಕಾರ್ಯ ನಿರ್ವಾಹಕ ನಿರ್ದೇಶಕ ರಿತೇಶ್ ರಂಜನ್, ರಾಮಸುಬ್ರಹ್ಮಣ್ಯಂ, ಸಂಜಯ್ ರುದ್ರ, ಪಂಕಜ್ ದ್ವಿವೇದಿ, ಬ್ಯಾಂಕಿನ ಎಂಜಿ ರಸ್ತೆಯ ಶಾಖೆಯ ಮುಖ್ಯ ವ್ಯವಸ್ಥಾಪಕಿ ಸುಶಿಚಿತ ರೌಲ್ ಸೇರಿದಂತೆ ಬ್ಯಾಂಕಿನ ಆಡಳಿತ ಮಂಡಳಿ ವಿರುದ್ಧ ನಂಬಿಕೆ ದ್ರೋಹ, ವಂಚನೆ, ನಕಲಿ ದಾಖಲೆಗಳ ಸೃಷ್ಟಿ, ಖೊಟ್ಟಿ ದಾಖಲೆಪತ್ರಗಳನ್ನು ಬಳಸಿ ವಂಚನೆ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ವಸಂತ ನಗರ ಶಾಖೆಯಲ್ಲಿ ನಿಗಮದ ಖಾತೆಯಿತ್ತು. ಫೆ.19ರಂದು ಆ ಖಾತೆಯನ್ನು ಬ್ಯಾಂಕಿನ ಎಂಜಿ ರಸ್ತೆಯ ಶಾಖೆಗೆ ವರ್ಗಾವಣೆ ಮಾಡಿಕೊಳ್ಳಲಾಗಿತ್ತು. ಈ ಖಾತೆಯನ್ನು ನಿಗಮದ ಪರವಾಗಿ ನಿರ್ವಹಣೆ ಮಾಡಲಾಗುತ್ತಿತ್ತು. ಬ್ಯಾಂಕಿನವರು ಫೆ.26ರಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಲೆಕ್ಕಾಧಿಕಾರಿಗಳ ಸಹಿ ಪಡೆದು ನಿಗಮದ ಖಾತೆಯಿಂದ ಬೇರೆ ಬೇರೆ ಖಾತೆಗಳಿಗೆ ಹಂತ ಹಂತವಾಗಿ 187.33 ಕೋಟಿ ರೂ. ಹಣವನ್ನು ವರ್ಗಾವಣೆ ಮಾಡಿದ್ದರು. ಮಾ.4ರಂದು 25 ಕೋಟಿ ರೂ., ಮಾ.6ರಂದು 25 ಕೋಟಿ ರೂ., ಮಾ.21ರಂದು 44 ಕೋಟಿ ರೂ., ಮಾ.22ರಂದು 43.33 ಕೋಟಿ ರೂ. ಹಾಗೂ ಮೇ 21ರಂದು 50 ಕೋಟಿ ರೂ. ವರ್ಗಾವಣೆಯಾಗಿದೆ ಎಂದು ರಾಜಶೇಖರ್ ದೂರಿನಲ್ಲಿ ತಿಳಿಸಿದ್ದಾರೆ.
ನಿಗಮದ ಖಾತೆಯಿಂದ ಬೇರೆ ಬೇರೆ ಖಾತೆಗಳಿಗೆ ಮತ್ತು ರಾಜ್ಯ ಹುಜೂರ್ ಖಜಾನೆ -2ರಿಂದ ನಿಗಮದ ಖಾತೆಗೆ ಹಣ ಸಂದಾಯ ಆಗಿದೆ. ಲೋಕಸಭಾ ಚುನಾವಣೆ ನೀತಿಸಂಹಿತೆ ಜಾರಿಯಲ್ಲಿದ್ದ ಕಾರಣ ಬ್ಯಾಂಕಿನ ಜತೆ ನಿಗಮದಿಂದ ಯಾವುದೇ ಪತ್ರ ವ್ಯವಹಾರ ನಡೆಸಿಲ್ಲ. ಬ್ಯಾಂಕ್ ನಿಂದ ನಿಗಮದ ಅಧಿಕೃತ ವಿಳಾಸಕ್ಕೆ ಪಾಸ್ ಬುಕ್, ಚೆಕ್ ಬುಕ್ ಸೇರಿದಂತೆ ಯಾವುದೇ ದಾಖಲೆಗಳನ್ನು ಕಳುಹಿಸಿಲ್ಲ. ನಿಗಮದ ಯಾವುದೇ ಸಿಬಂದಿ ಭೌತಿಕವಾಗಿ ಬ್ಯಾಂಕಿಗೆ ತೆರಳಿ ನಿಗಮದ ಖಾತೆಯಿಂದ ಹಣ ಡ್ರಾ ಮಾಡಿಲ್ಲ. ಆದರೂ ನಕಲಿ ದಾಖಲೆ ಪತ್ರಗಳನ್ನು ಸೃಷ್ಟಿಸಿ 94,73,08,500 ರೂ.ಗಳನ್ನು ಅಕ್ರಮವಾಗಿ ವರ್ಗಾವಣೆ ಮಾಡಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಹೀಗಾಗಿ ಬ್ಯಾಂಕ್ ಅಧಿಕಾರಿಗಳ ಶಾಮೀಲಾತಿ ಬಗ್ಗೆ ಅನುಮಾನ ಇದೆಯೆಂದು ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ.
ಹಣ ವರ್ಗಾವಣೆ ಸಂಬಂಧಿಸಿ ದಾಖಲಾತಿಗಳನ್ನು ನೀಡುವಂತೆ ಬ್ಯಾಂಕ್ ಅಧಿಕಾರಿಗಳಿಗೆ ಕೋರಿದ್ದರೂ ಯಾವುದೇ ದಾಖಲೆಗಳನ್ನು ನೀಡಿಲ್ಲ. ಮಾಹಿತಿಯನ್ನೂ ಕೊಟ್ಟಿಲ್ಲ. ನಿಗಮದ ಹಣವನ್ನು ಮರು ಠೇವಣಿ ಮಾಡುವಂತೆ ಬ್ಯಾಂಕಿನ ಉನ್ನತ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದೆ. ಒಟ್ಟು ವ್ಯವಹಾರದ ಬಗ್ಗೆ ನಿರ್ಲಕ್ಷ್ಯ ವಹಿಸಿರುವ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ರಾಜಶೇಖರ್ ದೂರಿನಲ್ಲಿ ಒತ್ತಾಯಿಸಿದ್ದಾರೆ.
ಮತ್ತೊಂದೆಡೆ, ಹಗರಣದಲ್ಲಿ ಗಂಭೀರ ಆರೋಪ ಎದುರಿಸುತ್ತಿರುವ, ಆತ್ಮಹತ್ಯೆ ಮಾಡಿಕೊಂಡಿರುವ ನಿಗಮದ ಅಧೀಕ್ಷಕ ಚಂದ್ರಶೇಖರನ್ ಪತ್ರದಲ್ಲಿ ಉಲ್ಲೇಖ ಆಗಿರುವ ನಿಗಮದ ವ್ಯವಸ್ಥಾಪಕ ನಿರ್ದೇಶಕ ಜೆ.ಜೆ. ಪದ್ಮನಾಭ ಮತ್ತು ಲೆಕ್ಕಾಧಿಕಾರಿ ಪರಶುರಾಮ್ ದುರ್ಗಣ್ಣವರ್ ಅವರನ್ನು ರಾಜ್ಯ ಸರಕಾರ ಅಮಾನುತಗೊಳಿಸಿದೆ. ಇವರಿಬ್ಬರು ಹಾಗೂ ವಸಂತ ನಗರ ಶಾಖೆಯ ಬ್ಯಾಂಕ್ ಮ್ಯಾನೇಜರ್ ಸಹಿತ ಆರು ಮಂದಿ ನಿಗಮದ ಅಧಿಕಾರಿಗಳ ವಿರುದ್ಧವೂ ಎಫ್ಐಆರ್ ದಾಖಲಾಗಿದೆ. ಚುನಾವಣೆ ಘೋಷಣೆಗೂ ಮೊದಲೇ ಸಚಿವ ನಾಗೇಂದ್ರ ಅವರ ಮೌಖಿಕ ಸೂಚನೆಯಂತೆ ನಿಗಮದ ಹಣವನ್ನು ಬೇರೆ ಬೇರೆ ಖಾತೆಗಳಿಗೆ ವರ್ಗಾಯಿಸಿ ಹಣವನ್ನು ಲೂಟಿ ಮಾಡಲಾಗಿದೆ ಎನ್ನುವುದನ್ನು ಮೃತ ಚಂದ್ರಶೇಖರ್ ಡೆತ್ ನೋಟ್ ನಲ್ಲಿ ಬರೆದಿದ್ದಾರೆ. ಇದೀಗ ನಿಗಮದ ಪ್ರಧಾನ ವ್ಯವಸ್ಥಾಪಕ ರಾಜಶೇಖರ್ ಬ್ಯಾಂಕ್ ಅಧಿಕಾರಿಗಳ ವಿರುದ್ಧ ದೂರು ನೀಡಿರುವುದರಿಂದ ಒಟ್ಟು ಹಗರಣದ ಉರುಳು ಬ್ಯಾಂಕ್ ಮೇಲಧಿಕಾರಿಗಳ ಕೊರಳು ಸುತ್ತಿಕೊಂಡಿದೆ.
Rs 94 crore scam of Maharshi Valmiki Bangalore police lodge FIR against Union Bank of India officials including CEO. Days after one of its officials died by suicide alleging irregularities related to crores of rupees, the managing director of the Karnataka Maharshi Valmiki Scheduled Tribe Development Corporation has filed a case against Union Bank of India officials alleging that they fraudulently diverted around Rs 94.73 crore of its funds to other bank accounts.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
05-05-25 11:22 am
Mangalore Correspondent
Sharan Pumpwell, Mangalore, threat: ಶರಣ್ ಪಂಪ್...
04-05-25 11:26 pm
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm