ಬ್ರೇಕಿಂಗ್ ನ್ಯೂಸ್
31-05-24 02:10 am Bengaluru Correspondent ಕ್ರೈಂ
ಬೆಂಗಳೂರು, ಮೇ 31: ದೇಶದಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ, ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಕಡೆಗೂ ಸೆರೆಯಾಗಿದ್ದಾರೆ. ಕಳೆದೊಂದು ತಿಂಗಳಿಂದ ವಿದೇಶದಲ್ಲಿ ಭೂಗತರಾಗಿ ಕಣ್ಣಾಮುಚ್ಚಾಲೆ ಆಡುತ್ತಿದ್ದ ಪ್ರಜ್ವಲ್, ಗುರುವಾರ ತಡರಾತ್ರಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮರು ಕ್ಷಣವೇ ಎಸ್‌ಐಟಿ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದಿದ್ದಾರೆ.
ಲೈಂಗಿಕ ದೌರ್ಜನ್ಯದ ಅಶ್ಲೀಲ ವಿಡಿಯೊಗಳು ಬಹಿರಂಗವಾದ ಬೆನ್ನಲ್ಲೇ ಏ.26ರಂದು ರಾತ್ರೋರಾತ್ರಿ ಜರ್ಮನಿಗೆ ಪಲಾಯನ ಮಾಡಿದ್ದ ಪ್ರಜ್ವಲ್, 34 ದಿನಗಳಿಂದ ಭೂಗತರಾಗಿದ್ದರು. ದುಬೈ, ಲಂಡನ್, ಜರ್ಮನಿಗೆ ವಾಸ್ತವ್ಯ ಬದಲಿಸಿದ್ದ ಅವರು, ಮೇ 27ರಂದು ವಿದೇಶದಿಂದಲೇ ವಿಡಿಯೊ ಹೇಳಿಕೆ ಬಿಡುಗಡೆ ಮಾಡಿ, ಶುಕ್ರವಾರ (ಮೇ 31) ರಾಜ್ಯಕ್ಕೆ ಮರಳಿ ಎಸ್‌ಐಟಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗುವುದಾಗಿ ಹೇಳಿದ್ದರು.
ಇದರ ಬೆನ್ನಲ್ಲೇ ಜರ್ಮನಿಯ ಮ್ಯೂನಿಚ್‌ನಿಂದ ಗುರುವಾರ ಬೆಂಗಳೂರಿಗೆ ಬರಲು ವಿಮಾನದ ಟಿಕೆಟ್ ಬುಕ್ಕಿಂಗ್ ಮಾಡಿದ್ದರು. ಲುಫ್ತಾನ್ಸಾ ಏರ್‌ಲೈನ್ಸ್ ವಿಮಾನದಲ್ಲಿ(ಎಲ್ ಎಚ್ 764) ಬ್ಯುಸಿನೆಸ್ ಕ್ಲಾಸ್ ಟಿಕೆಟ್ ಕಾಯ್ದಿರಿಸಿದ್ದರು. ಭಾರತೀಯ ಕಾಲಮಾನದ ಪ್ರಕಾರ ಸಂಜೆ 4.05ಕ್ಕೆ ಮ್ಯೂನಿಚ್‌ನಿಂದ ಹೊರಟ ಆ ವಿಮಾನ ತಡರಾತ್ರಿ 12. 50 ಕ್ಕೆ ಬೆಂಗಳೂರಿನ ಕೆಐಎಎಲ್‌ಗೆ ಬಂದಿತು.
ಪ್ರಜ್ವಲ್‌ರ ಬಂಧನದ ಹಿನ್ನೆಲೆಯಲ್ಲಿಯಾವುದೇ ಸಮಸ್ಯೆಯಾಗದಂತೆ ಕೈಗೊಳ್ಳಬೇಕಾದ ಭದ್ರತಾ ಕ್ರಮಗಳ ಕುರಿತು ಎಸ್‌ಐಟಿ ಮುಖ್ಯಸ್ಥ ಬಿ.ಕೆ.ಸಿಂಗ್ ಅವರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರೊಂದಿಗೆ ಬೆಳಗ್ಗೆ ಸಭೆ ನಡೆಸಿದ್ದರು. ಎಸ್‌ಐಟಿ ಅಧಿಕಾರಿಗಳ ಮನವಿಯಂತೆ ಕೆಐಎಎಲ್ ಬಳಿ ಭದ್ರತೆಗೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿತ್ತು.
Janata Dal (Secular) leader Prajwal Revanna, who is accused of sexually abusing numerous women, returned to India on the intervening night of Thursday around 1:15am from Berlin, Germany, nearly a month after leaving the country on a diplomatic passport. He was immediately taken into custody.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am