ಬ್ರೇಕಿಂಗ್ ನ್ಯೂಸ್
02-06-24 05:00 pm Udupi Correspondent ಕ್ರೈಂ
ಉಡುಪಿ, ಜೂನ್ 2: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಸೇತುವೆ ಬಳಿ ಸ್ಕಾರ್ಪಿಯೋ ಕಾರಿನಲ್ಲಿ ಕುಳಿತು ದರೋಡೆಗೆ ಹೊಂಚು ಹಾಕುತ್ತಿದ್ದ ಆರೋಪಿಗಳನ್ನು ಕಾಪು ಪೊಲೀಸರು ಶನಿವಾರ ರಾತ್ರಿ ಸಿನಿಮಾ ಶೈಲಿಯಲ್ಲಿ ಬೆನ್ನಟ್ಟಿ ಬಂಧಿಸಿದ್ದಾರೆ.
ಕಾರಿನಲ್ಲಿದ್ದ ಅಮಿತ್ ರಾಜ್, ಪ್ರಕಾಶ್ ಸುರತ್ಕಲ್, ವರುಣ್ ನೀರುಮಾರ್ಗ, ಕಾರ್ತಿಕ್ ಶೆಟ್ಟಿ ಸುರತ್ಕಲ್, ಅಭಿಷೇಕ್, ಶ್ರೀಕಾಂತ್, ಶ್ರೀಪತಿ ಫರಂಗಿಪೇಟೆ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಉಡುಪಿಯಿಂದ ಕಾಪು ಕಡೆಗೆ ಬರುತ್ತಿದ್ದ ಕಾಪು ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಜಯಶ್ರೀ ಮಾನೆ ಅವರು ಉದ್ಯಾವರ ಸೇತುವೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸ್ಕಾರ್ಪಿಯೋ ಕಾರು ನಿಂತಿರುವುದನ್ನು ಗಮನಿಸಿದ್ದರು. ಸ್ಕಾರ್ಪಿಯೋ ಕಾರನ್ನು ನಿಲ್ಲಿಸಿ ಪರಿಶೀಲಿಸಲು ಯತ್ನಿಸಿದಾಗ ಆರೋಪಿಗಳು ಕಾರನ್ನು ಏಕಾಏಕಿ ಚಲಾಯಿಸಿ ಕಾಪು ಕಡೆಗೆ ತೆರಳಿದ್ದರು.
ಜಯಶ್ರೀ ಮಾನೆ ಅವರು ತಕ್ಷಣ ಈ ಬಗ್ಗೆ ಕಾಪು ಮತ್ತು ಪಡುಬಿದ್ರಿ ಪೊಲೀಸರಿಗೆ ಮಾಹಿತಿ ನೀಡಿದ್ದು ಬಳಿಕ ಕಾಪು ಎಸ್ಸೈ ಅಬ್ದುಲ್ ಖಾದರ್ ನೇತೃತ್ವದ ತಂಡ ಕೋತಲಕಟ್ಟೆ ಎಂಬಲ್ಲಿ ಸ್ಕಾರ್ಪಿಯೋ ಕಾರನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಕಾಪು ಸಿಐ ಜಯಶ್ರೀ ಮಾನೆ ಮತ್ತು ಕಾಪು ಎಸ್ಐ ಅಬ್ದುಲ್ ಖಾದರ್ ಹಾಗೂ ಸಿಬ್ಬಂದಿ ಸ್ಕಾರ್ಪಿಯೋದಲ್ಲಿ ಇದ್ದವರನ್ನು ವಶಕ್ಕೆ ಪಡೆದು ವಾಹನ ಪರಿಶೀಲಿಸಿದಾಗ ದರೋಡೆಗೆ ಹೊಂಚು ಹಾಕುತ್ತಿರುವ ವಿಚಾರ ಬೆಳಕಿಗೆ ಬಂದಿತ್ತು. ಸ್ಕಾರ್ಪಿಯೋ ಕಾರಿನಲ್ಲಿ ಡ್ರ್ಯಾಗನ್, ಚೂರಿ, ಕಬ್ಬಿಣದ ಪೈಪ್ ಮತ್ತು ಮರಳು ಮಿಶ್ರಿತ ಮೆಣಸಿನ ಪುಡಿಯನ್ನು ಪತ್ತೆ ಹಚ್ಚಿದ್ದು, ಪೊಲೀಸರು ಆರೋಪಿಗಳನ್ನು ಮತ್ತಷ್ಟು ವಿಚಾರಣೆಗೊಳಪಡಿಸಿದ್ದಾರೆ.
Udupi Six arrested for suspected criminal activity, illegal possession of weapons seized by Kapu police. According to a complaint filed by Circle Inspector Jayashree Mane at Kaup police station, six persons traveling in a Scorpio were found suspicious near the Udyavar bridge while heading towards Mangaluru. The police signaled them to pull over by honking, but they refused and continued driving dangerously. The police, with the assistance of Abdul Khader, S
22-12-25 06:29 pm
HK News Desk
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
22-12-25 06:32 pm
HK News Desk
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
22-12-25 06:36 pm
Mangalore Correspondent
ಕೋಳಿ ಅಂಕದಲ್ಲಿ ಪೆಟ್ಟು ಕೊಡಲು ಇವರ ಅಪ್ಪನ ಜಾಗವಾ?...
22-12-25 12:26 pm
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm