ಬ್ರೇಕಿಂಗ್ ನ್ಯೂಸ್
05-06-24 10:32 pm Mangaluru Correspondent ಕ್ರೈಂ
ಉಳ್ಳಾಲ, ಜೂ.5: ಲೋಕಸಭಾ ಚುನಾವಣೆಯ ಫಲಿತಾಂಶದ ಹಿನ್ನೆಲೆ ಮಂಗಳವಾರ ಸಂಜೆ ಕುಂಪಲದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದ ಬಿಜೆಪಿ ಕಾರ್ಯಕರ್ತನ ತಲೆಗೆ ಕಬ್ಬಿಣದ ಸಲಾಕೆಯಿಂದ ಹಲ್ಲೆಗೈದು ಕೊಲೆಗೆ ಯತ್ನಿಸಿದ ಘಟನೆ ಕುಂಪಲ ಬಾರ್ದೆ ಎಂಬಲ್ಲಿ ಬುಧವಾರ ಸಂಜೆ ನಡೆದಿದ್ದು, ಆರೋಪಿಯನ್ನ ಉಳ್ಳಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕುಂಪಲ ಮೂರುಕಟ್ಟ , ಪಲ್ಲ ನಿವಾಸಿ ಬಿಜೆಪಿ ಕಾರ್ಯಕರ್ತ ಪಿಟ್ಟಿ ಯಾನೆ ಪ್ರವೀಣ್ ಪೂಜಾರಿ(35) ಹಲ್ಲೆಗೊಳಗಾದ ಯುವಕ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಕೇಂದ್ರದಲ್ಲಿ ಮೋದಿ ನೇತೃತ್ವದ ಎನ್ ಡಿಎ ಬಹುಮತ ಗಳಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ಪೂಜಾರಿ ಮತ್ತು ಸ್ನೇಹಿತರು ಮಂಗಳವಾರ ಸಂಜೆ ಕುಂಪಲ ಸರಕಾರಿ ಶಾಲೆಯ ಮುಂದೆ ಪಟಾಕಿ ಸಿಡಿಸಿ ಸಂಭ್ರಮಿಸಿದ್ದರು. ಪಟಾಕಿ ಸಿಡಿಸಿದ್ದ ಪ್ರದೇಶದಲ್ಲಿ ಸ್ಥಳೀಯ ಸಂಘ ಸಂಸ್ಥೆಯೊಂದರ ಕಾರ್ಯಾಲಯ ಇದ್ದು ,ಅವರ ಕಚೇರಿ ಮುಂದೆ ಪಟಾಕಿ ಸಿಡಿಸಿದ್ದರ ವಿರುದ್ಧ ಸಂಸ್ಥೆಯ ಸದಸ್ಯರು ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದಿತ್ತು ಎನ್ನಲಾಗಿದೆ.

ಕಾಂಗ್ರೆಸ್ ಕಾರ್ಯಕರ್ತನೆನ್ನಲಾದ, ಹಲ್ಲೆಗೊಳಗಾದ ಪ್ರವೀಣ್ ಅವರ ನೆರೆಮನೆಯ ಗೌತಮ್ ಬುಧವಾರ ಸಂಜೆ ಕುಂಪಲ ಬಾರ್ದೆ ಎಂಬಲ್ಲಿ ಪ್ರವೀಣ್ ಮೇಲೆ ದಾಳಿ ನಡೆಸಿದ್ದಾನೆ. ಕಾರಿನಲ್ಲಿ ಬಂದ ಗೌತಮ್ ಪ್ರವೀಣ್ಗೆ ಅವಾಚ್ಯವಾಗಿ ನಿಂದಿಸಿ ಕಬ್ಬಿಣದ ರಾಡ್ ನಿಂದ ತಲೆಗೆ ಹಲ್ಲೆಗೈದು ಮೊಬೈಲನ್ನ ಪುಡಿಗೈದಿದ್ದಾನೆ. ಗಂಭೀರ ಗಾಯಗೊಂಡ ಪ್ರವೀಣ್ ಅವರನ್ನ ಸ್ಥಳೀಯರು ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದು ಪ್ರವೀಣ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಉಳ್ಳಾಲ ಪೊಲೀಸರು ಆರೋಪಿ ಗೌತಮ್ ನನ್ನ ವಶಕ್ಕೆ ಪಡೆದಿರುವ ಬಗ್ಗೆ ಮಾಹಿತಿ ಲಭಿಸಿದೆ. ಆಸ್ಪತ್ರೆಗೆ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಭೇಟಿ ನೀಡಿದ್ದು ಹಲ್ಲೆಗೊಳಗಾದ ಪ್ರವೀಣ್ ಅವರ ಆರೋಗ್ಯ ವಿಚಾರಿಸಿದ್ದಾರೆ. ಕಾಂಗ್ರೆಸಿಗರು ಅಧಿಕಾರದ ಅಮಲಿನಲ್ಲಿ ಅಟ್ಟಹಾಸ ಮೆರೆಯುತ್ತಿದ್ದು ಅಮಾಯಕ ಬಿಜೆಪಿ ಕಾರ್ಯಕರ್ತರ ಮೇಲೆ ಎರಗಿ ಹಲ್ಲೆಗೈಯುತ್ತಿರುವುದು ಖಂಡನೀಯ. ಇಂತಹ ಘಟನೆಗಳು ಮತ್ತೆ ಮರುಕಳಿಸದಂತೆ ಆರೋಪಿ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಬಿಜೆಪಿ ಉಗ್ರವಾಗಿ ಪ್ರತಿಭಟಿಸುವುದಾಗಿ ರವೀಂದ್ರ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.
ಬಿಜೆಪಿ ಮಂಗಳೂರು ಮಂಡಲದ ಉಪಾಧ್ಯಕ್ಷರಾದ ರವಿಶಂಕರ್ ಸೋಮೇಶ್ವರ, ಪ್ರಮುಖರಾದ ಪ್ರಕಾಶ್ ಸಿಂಪೋನಿ, ಜೀವನ್ ಕುಮಾರ್ ತೊಕ್ಕೊಟ್ಟು ಜತೆಯಲ್ಲಿದ್ದರು.
Mangalore Kumpala, a Hindu worker, attacked in a rod for bursting crackers for the BJP win. Some miscenats attacked Praveen Poojari for bursting crakers by celebrating BjP's win in Karnataka.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm