ಬ್ರೇಕಿಂಗ್ ನ್ಯೂಸ್
05-12-20 11:55 am Headline Karnataka News Network ಕ್ರೈಂ
ಚಿಕ್ಕಮಗಳೂರು, ಡಿ.5a: ಆಂಟಿ ಪ್ರೀತ್ಸೇ ಎಂದು ಹಿಂದೆ ಬಿದ್ದಿದ್ದ ಯುವಕನ ಪ್ರೀತಿಯನ್ನು ನಿರಾಕರಿಸಿದ ವಿವಾಹಿತ ಮಹಿಳೆಗೆ ಪಾಗಲ್ ಪ್ರೇಮಿ ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ಮೂಡಿಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ತಾಲೂಕಿನ ಬಿಳಗುಳ ಗ್ರಾಮದ ವಿಶ್ವನಾಥ ಶೆಟ್ಟಿ ಎಂಬುವರ ಪುತ್ರಿ ಸವಿತಾ (40) ಪಾಗಲ್ ಪ್ರೇಮಿಯ ಪೈಶಾಚಿಕ ಕೃತ್ಯಕ್ಕೆ ಬಲಿಯಾದ ನತದೃಷ್ಟ ಮಹಿಳೆ.
ಸವಿತಾಳ ಮೇಲೆ ಬೆಂಕಿ ಹಚ್ಚಿದ ಪಾಗಲ್ ಪ್ರೇಮಿ ನಂದೀಶ್‍ಗೌಡನಿಗೆ ಸುಟ್ಟ ಗಾಯಗಳಾಗಿದ್ದು , ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ವಿವಾಹಿತಳಾಗಿದ್ದ ಸವಿತಾ ಪತಿಯನ್ನು ತೊರೆದು ಬಿಳಗುಳದಲ್ಲಿ ಪ್ರತ್ಯೇಕವಾಗಿ ವಾಸಿಸುತ್ತಾ ಸಮೀಪದ ಕೊಲ್ಲಿ ಬೆಲ್ ಹೋಂ ಸ್ಟೇಯಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದಳು.
ಪಕ್ಕದ ಎಸ್ಟೇಟ್‍ವೊಂದರಲ್ಲಿ ಚಾಲಕನಾಗಿದ್ದ 28 ವರ್ಷದ ನಂದೀಶ್‍ಗೌಡ 40 ವರ್ಷದ ಸವಿತಾಳನ್ನು ಪ್ರೀತಿಸುವಂತೆ ಪದೇ ಪದೇ ಒತ್ತಾಯಿಸುತ್ತಿದ್ದ ಎನ್ನಲಾಗಿದೆ.
ತನಗಿಂತ 12 ವರ್ಷ ಕಿರಿಯವನಾದ ನಂದೀಶ್‍ಗೌಡನನ್ನು ಪ್ರೀತಿಸಲು ಸವಿತಾ ನಿರಾಕರಿಸಿದ್ದಳು. ಸವಿತಾಳ ಈ ಧೋರಣೆಯಿಂದ ಕೋಪಗೊಂಡ ಪಾಗಲ್ ಪ್ರೇಮಿ ಕಳೆದ ಭಾನುವಾರ ಹೋಂ ಸ್ಟೇಯಲ್ಲಿ ಅಡುಗೆ ಕೆಲಸ ಮಾಡಿಕೊಂಡು ಮನೆಗೆ ಹಿಂದಿರುಗುತ್ತಿದ್ದ ಸವಿತಾಳ ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾನೆ.
ಸುಟ್ಟ ಗಾಯಗಳಿಂದ ತೀವ್ರವಾಗಿ ಗಾಯಗೊಂಡಿದ್ದ ಸವಿತಾ ಮತ್ತು ನಂದೀಶ್‍ಗೌಡನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸವಿತಾ ಮೃತಪಟ್ಟಿದ್ದಾಳೆ.
ನಂದೀಶ್‍ಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು , ಆತನ ಪ್ರೀತಿ ನಿರಾಕರಿಸಿದ್ದಕ್ಕೆ ಈ ಕೃತ್ಯವೆಸಗಿದ್ದಾನೆ ಎಂದು ಸವಿತಾಳ ಸಹೋದರ ನಾಗೇಶ್ ರೈ ಪೋಲಿಸರಿಗೆ ದೂರು ನೀಡಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am