ಬ್ರೇಕಿಂಗ್ ನ್ಯೂಸ್
20-06-24 04:32 pm HK News Desk ಕ್ರೈಂ
ಹಾಸನ, ಜೂ 20: ನಗರದ ಕೆ. ಆರ್. ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಹೊಯ್ಸಳ ನಗರದಲ್ಲಿ ಹಾಡಹಗಲೇ ಶೂಟೌಟ್ ನಡೆದಿದೆ. ವ್ಯಕ್ತಿಯೊಬ್ಬನನ್ನು ಗುಂಡಿಟ್ಟು ಕೊಲೆ ಮಾಡಿದ ಆರೋಪಿಯೊಬ್ಬ ನಂತರ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ನಿವೇಶನ ವಿಚಾರದಲ್ಲಿ ಆರಂಭವಾದ ಜಗಳ ಕೊಲೆ ಹಾಗೂ ಆತ್ಮಹತ್ಯೆಯಲ್ಲಿ ಅಂತ್ಯಗೊಂಡಿದೆ ಎಂದು ಮಾಹಿತಿ ಲಭ್ಯವಾಗಿದೆ.
ಮೃತರನ್ನು ಹಾಸನ ನಿವಾಸಿ ಶರಫತ್ ಅಲಿ ಹಾಗೂ ಬೆಂಗಳೂರು ನಿವಾಸಿ ಆಸಿಫ್ ಎಂದು ಗುರ್ತಿಸಲಾಗಿದೆ. ಸೈಟ್ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ನಡೆದಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ, ಜೂನ್ 20 ಗುರುವಾರ ಮಧ್ಯಾಹ್ನ 12.30ಕ್ಕೆ ಈ ಘಟನೆ ನಡೆದಿದೆ ಎಂದು ಹೇಳಿದ್ಧಾರೆ.
ಘಟನಾ ಸ್ಥಳಕ್ಕೆ ಬೆರಳಚ್ಚು ತಜ್ಞರು ಹಾಗೂ ಎಫ್‌ಎಸ್‌ಎಲ್ ತಜ್ಞರನ್ನು ರವಾನೆ ಮಾಡಲಾಗಿದೆ. ತಜ್ಞರ ಪರಿಶೀಲನೆ ವೇಳೆ ಕಾರಿನ ಹೊರಗೆ ಇರುವ ಶವದ ತಲೆಯಲ್ಲಿ ಗಾಯದ ಗುರುತು ಪತ್ತೆಯಾಗಿದೆ. ಇನ್ನು ಘಟನಾ ಸ್ಥಳದಲ್ಲಿ ಸಿಕ್ಕ ಕಾರು ಮೈಸೂರು ಮೂಲದ್ದು ಎಂದು ಮಾಹಿತಿ ನೀಡಿದ್ದಾರೆ.
ಈ ಕೃತ್ಯದ ಪರಿಶೀಲನೆ ವೇಳೆ ಮೃತರ ಕಾರಿನಲ್ಲಿ ಒಂದು ಶಸ್ತ್ರಾಸ್ತ್ರ ಪತ್ತೆಯಾಗಿದೆ. ಮೃತರ ಪೈಕಿ ಓರ್ವ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆಯ ಕುರಿತಾಗಿ ಬೆರಳಚ್ಚು ತಜ್ಞರು ಹಾಗು ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರು ಸಮಗ್ರ ಪರಿಶೀಲನೆ ನಡೆಸುತ್ತಿದ್ದು, ಪೊಲೀಸರ ತನಿಖೆ ವೇಳೆ ಇನ್ನಷ್ಟು ಮಾಹಿತಿ ಲಭ್ಯ ಆಗಲಿದೆ.
ಇಬ್ಬರ ಮೃತ ದೇಹವನ್ನೂ ಸದ್ಯ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಮೃತರ ಪೈಕಿ ಹಾಸನ ನಿವಾಸಿ ಶರಫತ್ ಅಲಿ ಅವರ ಕುಟುಂಬಸ್ಥರು ಘಟನಾ ಸ್ಥಳಕ್ಕೆ ಧಾವಿಸಿದರು. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಈ ಘಟನೆಯಲ್ಲಿ ಒಂದೇ ಸಮುದಾಯದ ಇಬ್ಬರು ಜಗಳ ಆಡಿಕೊಂಡು ಓರ್ವನ ಮೇಲೆ ಗುಂಡು ಹಾರಿಸಿ ಕೊಂದು, ಮತ್ತೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು ಏಕೆ ಎಂಬ ಪ್ರಶ್ನೆಗೆ ಇನ್ನಷ್ಟೇ ಉತ್ತರ ಸಿಗಬೇಕಿದೆ.
Hassan shootout, businessman murdered, accused shoots himself. The fight was regarding some land matter. The deceased has been identified as Sharafath Ali and accused Asif from Bangalore.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm