ಬ್ರೇಕಿಂಗ್ ನ್ಯೂಸ್
24-06-24 06:11 pm HK News Desk ಕ್ರೈಂ
ಮಡಿಕೇರಿ, ಜೂ.24: ಹಾಸನದಲ್ಲಿ ಕೆಲವು ದಿನಗಳ ಹಿಂದೆ ನಡೆದ ಗುಂಡಿನ ದಾಳಿಯ ಕಹಿ ನೆನಪು ಮಾಸುವ ಮುನ್ನವೇ ಇದೀಗ ಕೊಡಗು ಜಿಲ್ಲೆಯಲ್ಲಿ ಗುಂಡಿನ ಮೊರೆತ ಕೇಳಿದೆ.
ಕೊಡಗು ಜಿಲ್ಲೆ ಕುಶಾಲನಗರ ಪಟ್ಟಣದಲ್ಲಿ ಸೋಮವಾರ ಉದ್ಯಮಿ ಶಶಿಧರ್ ಎಂಬುವರ ಮೇಲೆ 8 ಸುತ್ತು ಗುಂಡಿ ದಾಳಿ ನಡೆಸಲಾಗಿದೆ. ಘಟನೆಯಲ್ಲಿ ಶಶಿಕುಮಾರ್ ಕಾಲಿಗೆ ಗಂಭೀರ ಗಾಯವಾಗಿದೆ. ಅನುದೀಪ್ ಎಂಬಾತನಿಂದ ದಾಳಿ ನಡೆದಿದೆ.
ಪಾರ್ಟಿ ಒಂದರಲ್ಲಿ ಕ್ಷುಲ್ಲಕ ವಿಚಾರಕ್ಕೆ ಕಿರಿಕ್ ಆಗಿದ್ದು, ಅನುದೀಪ್ ಪಿಸ್ತೂಲ್ನಿಂದ ಉದ್ಯಮಿಯ ಮೇಲೆ ಗುಂಡು ಹಾರಿಸಿದ್ದಾನೆ ಎನ್ನಲಾಗಿದೆ. ಸದ್ಯ ಆರೋಪಿಯನ್ನು ಕುಶಾಲನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಶಶಿಧರ್ ತಮ್ಮ ಫಾರ್ಚೂನರ್ ಕಾರಿನಲ್ಲಿದ್ದಾಗ ಆರೋಪಿ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾನೆ. 8 ಗುಂಡುಗಳು ಕಾರನ್ನು ಹೊಕ್ಕಿದ್ದು, ಶಶಿಧರ್ ಅವರ ಕಾಲಿಗೂ ಗುಂಡು ತಾಗಿದೆ. ಸದ್ಯ ಶಶಿಧರ್ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಆರೋಪಿಯನ್ನ ಕುಶಾಲನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹಾಸನದ ಹೊಯ್ಸಳ ನಗರ ಬಡಾವಣೆಯಲ್ಲಿ ಜೂನ್ 20ರಂದು ಗುಂಡಿನ ದಾಳಿ ನಡೆದಿತ್ತು. ಓರ್ವ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿ ಮತ್ತೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆಸ್ತಿ ವಿಚಾರಕ್ಕೆ ಕೊಲೆ ನಡೆದಿರುವ ಶಂಕೆ ಇದೆ ಎಂದು ಹಾಸನ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ಮಾಹಿತಿ ನೀಡಿದ್ದರು.
An altercation during a party escalated with one person opening fire at a businessman in Kushalnagar on Sunday night. The businessman sustained a bullet wound in the leg, but is out of danger.
05-08-25 12:44 pm
HK News Desk
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 10:58 pm
Mangalore Correspondent
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm