ಬ್ರೇಕಿಂಗ್ ನ್ಯೂಸ್
05-12-20 07:52 pm Mangaluru Correspondent ಕ್ರೈಂ
ಮಂಗಳೂರು, ಡಿ.5: ಉಗ್ರರ ಪರ ಗೋಡೆ ಬರಹ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ತೀರ್ಥಹಳ್ಳಿ ಮೂಲದ ಮಹಮ್ಮದ್ ಶಾರೀಕ್ (22) ಮತ್ತು ಮುನೀರ್ ಅಹಮ್ಮದ್ ಅಲಿಯಾಸ್ ಮಾಝ್ (21) ಬಂಧಿತರು. ಮಹಮ್ಮದ್ ಶಾರಿಕ್ ಬಿಕಾಂ ಪದವಿಧರನಾಗಿದ್ದು ತೀರ್ಥಹಳ್ಳಿಯಲ್ಲಿ ಹೋಲ್ ಸೇಲ್ ಬಟ್ಟೆ ವ್ಯಾಪಾರ ಮಾಡಿಕೊಂಡಿದ್ದ. ಮುನೀರ್ ಅಹಮ್ಮದ್ ಮಂಗಳೂರಿನಲ್ಲಿ ಮೂರನೇ ವರ್ಷದ ಬಿಟೆಕ್ ಎಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದಾನೆ.
ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿರುವ ಮುನೀರ್ ಅಹಮ್ಮದ್ ಮಂಗಳೂರು ನಗರದಲ್ಲಿ ಝೊಮೆಟೋ ಆನ್ ಲೈನ್ ಫುಡ್ ಡೆಲಿವರಿ ಕೆಲಸವನ್ನೂ ಮಾಡಿಕೊಂಡಿದ್ದ. ಮಹಮ್ಮದ್ ಶಾರೀಕ್ ಈತನ ಸ್ನೇಹಿತನಾಗಿದ್ದು ಮಂಗಳೂರಿಗೆ ಬಂದು ಹೋಗುತ್ತಿದ್ದ. ಮುನೀರ್ ಅಹಮ್ಮದ್ ಮಂಗಳೂರಿನ ಬಲ್ಮಠದ ಆರ್ಯ ಸಮಾಜ ರಸ್ತೆಯಲ್ಲಿರುವ ಅಪಾರ್ಟ್ಮೆಂಟ್ ಒಂದರಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದ ಎಂದು ಮಂಗಳೂರು ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ಮಾಹಿತಿ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಪ್ರಕರಣದ ಬಗ್ಗೆ ವಿವರ ನೀಡಿದ ಪೊಲೀಸ್ ಕಮಿಷನರ್, ಮೇಲ್ನೋಟಕ್ಕೆ ಪ್ರಚಾರದ ಉದ್ದೇಶದಿಂದ ಈ ಕೃತ್ಯ ಮಾಡಿದ್ದಾರೆ ಎನ್ನುವ ಮಾಹಿತಿ ಇದೆ. ಆದರೆ ಆ ಬಗ್ಗೆ ಇನ್ನಷ್ಟು ತನಿಖೆ ನಡೆಸಬೇಕು. ಇವರು ಉಗ್ರ ಸಂಘಟನೆಗಳ ಜೊತೆ ಸಂಪರ್ಕ ಹೊಂದಿದ್ದಾರೆಯೇ ಎನ್ನುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಯಾವ ಉದ್ದೇಶದಿಂದ ಗೋಡೆ ಬರಹ ಬರೆದಿದ್ದಾನೆ, ಏನು ಪ್ರೇರಣೆಯಾಗಿತ್ತು ಎಂಬ ಬಗ್ಗೆ ಈಗಲೇ ಹೇಳುವಂತಿಲ್ಲ ಎಂದು ಪ್ರಶ್ನೆ ಒಂದಕ್ಕೆ ಉತ್ತರ ನೀಡಿದರು.
ಉಗ್ರರ ಪರ ಒಲವುಳ್ಳ ವಾಟ್ಸಪ್ ಗ್ರೂಪ್ ಪತ್ತೆ !?
ಈ ನಡುವೆ, ವಿವಿಧ ಕೋನಗಳಲ್ಲಿ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಆರೋಪಿಗಳು ಉಗ್ರರ ಪರ ಒಲವುಳ್ಳ ವಾಟ್ಸಪ್ ಗ್ರೂಪಿನಲ್ಲಿ ಇರುವ ಬಗ್ಗೆ ಮಾಹಿತಿ ಲಭಿಸಿದೆ. ಈ ನಿಟ್ಟಿನಲ್ಲೂ ತನಿಖೆ ನಡೆಸುತ್ತಿದ್ದಾರೆ. ಮಂಗಳೂರಿನ ಸಿಸಿಬಿ ಮತ್ತು ಕದ್ರಿ ಪೊಲೀಸರ ಜೊತೆಗೆ ಸೈಬರ್ ಮತ್ತು ತಾಂತ್ರಿಕ ಪರಿಣತರ ಪ್ರತ್ಯೇಕ ನಾಲ್ಕು ತಂಡಗಳು ತನಿಖೆ ನಡೆಸುತ್ತಿವೆ. ಇವರ ಕೃತ್ಯಕ್ಕೆ ವಾಟ್ಸಪ್ ಗ್ರೂಪ್ ಪ್ರೇರಣೆಯಾಗಿದೆಯೇ ಎನ್ನುವ ಬಗ್ಗೆ ತನಿಖೆ ನಡೆಸುತ್ತಿದ್ದಾರೆಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.
ಎರಡು ದಿನಗಳ ಹಿಂದೆ ಒಬ್ಬನ ಬಂಧನ ಆಗಿತ್ತು ಎನ್ನುವ ಮಾಹಿತಿ ಮಾಧ್ಯಮಕ್ಕೆ ಲಭಿಸಿತ್ತು. ಆದರೆ, ಪೊಲೀಸರು ಅದನ್ನು ನಿರಾಕರಿಸಿದ್ದರು. ಇದೀಗ ಪ್ರಕರಣದಲ್ಲಿ ಬಂಧನ ಆಗಿರುವುದನ್ನು ಹಿರಿಯಧಿಕಾರಿಗಳು ಖಚಿತ ಪಡಿಸಿದ್ದು ಹೆಸರು ಮಾತ್ರ ಬದಲಾಗಿರುವುದನ್ನು ಸ್ಪಷ್ಟ ಪಡಿಸಿದ್ದಾರೆ. ಅಲ್ಲದೆ, ಎರಡು ಕಡೆ ಪತ್ತೆಯಾಗಿರುವ ಗೋಡೆ ಬರಹವನ್ನೂ ಇವರೇ ಬರೆದಿದ್ದನ್ನು ಒಪ್ಪಿಕೊಂಡಿದ್ದಾಗಿ ಮಾಹಿತಿ ನೀಡಿದ್ದಾರೆ.
City police have arrested two persons in connection with Pro-Terror Graffiti written in support of terrorist organisations on the wall of an apartment in Bejai and old checkpost near court premises in Mangalore. The arrested have been identified as Mohammad Shaarik and Maz Munir Ahmed, both from Theerthahalli.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 11:11 pm
Mangalore Correspondent
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm