ಬ್ರೇಕಿಂಗ್ ನ್ಯೂಸ್
04-08-24 12:42 pm Udupi Correspondent ಕ್ರೈಂ
ಉಡುಪಿ, ಆಗಸ್ಟ್ 4: ಕುಡಿದ ಮತ್ತಿನಲ್ಲಿ ತನ್ನ ಹೆಂಡತಿಯ ಕುತ್ತಿಗೆಯನ್ನೇ ಕತ್ತಿಯಿಂದ ಕಡಿದು ಬಳಿಕ ಪತಿರಾಯ ಮನೆಯಲ್ಲಿ ಡ್ಯಾನ್ಸ್ ಮಾಡುತ್ತ ವಿಕೃತಿ ಮೆರೆದ ಘಟನೆ ಕುಂದಾಪುರ ತಾಲೂಕಿನ ಬಸ್ರೂರಿನಲ್ಲಿ ನಡೆದಿದೆ. ಹಲ್ಲೆಗೀಡಾದವರನ್ನು ಅನಿತಾ (38) ಎಂದು ಗುರುತಿಸಲಾಗಿದ್ದು, ಪತಿ ಲಕ್ಷ್ಮಣ ಕತ್ತಿಯಿಂದ ಹಲ್ಲೆಗೈದು ಅಟ್ಟಹಾಸ ಮೆರೆದಿದ್ದಾನೆ. ಗಂಭೀರ ಗಾಯಗೊಂಡ ಅನಿತಾಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಲಾಗುತ್ತಿದೆ.
ಶಿವಮೊಗ್ಗ ಜಿಲ್ಲೆಯ ಸೊರಬ ಮೂಲದ ಇವರು ಕುಂದಾಪುರ ತಾಲೂಕಿನ ಬಸ್ರೂರು ಕಾಶಿ ಮಠ, ರೆಸಿಡೆನ್ಶಿಯಲ್ ಬ್ಲಾಕ್ನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇವರು ನಾಲ್ಕು ತಿಂಗಳ ಹಿಂದಷ್ಟೇ ಕಾಶಿ ಮಠಕ್ಕೆ ಸೇರಿದ ತೋಟ ನೋಡಿಕೊಳ್ಳಲು ಉಡುಪಿ ಜಿಲ್ಲೆಗೆ ಬಂದಿದ್ದರು. ನಿನ್ನೆ ರಾತ್ರಿ ಕುಡಿದ ಮತ್ತಿನಲ್ಲಿ ಪತಿ ಲಕ್ಷ್ಮಣ ಪತ್ನಿಯ ಕುತ್ತಿಗೆ ಕಡಿದು ಮಾರಣಾಂತಿಕ ಗಾಯಗೊಳಿಸಿದ್ದಲ್ಲದೆ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಅನಿತಾಳನ್ನು ಹಾಗೆಯೇ ಬಿಟ್ಟು ಮನೆಯ ಬಾಗಿಲ ಚಿಲಕ ಹಾಕಿ ಹಾಲ್ ನಲ್ಲಿ ಕೈಯಲ್ಲಿ ಕತ್ತಿ ಹಿಡಿದು ನರ್ತಿಸುತ್ತ ವಿಕೃತಿ ಮೆರೆದಿದ್ದಾನೆ.








ಕೆಲ ಕ್ಷಣಗಳಲ್ಲೆ ಸ್ಥಳೀಯರಿಗೆ ವಿಚಾರ ತಿಳಿದಿದ್ದು ಕೂಡಲೇ ಕಿಟಕಿ ಒಡೆದು ಅಡುಗೆ ಕೋಣೆಯಲ್ಲಿ ಬಿದ್ದಿದ್ದ ಮಹಿಳೆಯನ್ನು ಹೊರತಂದಿದ್ದಾರೆ. ಚಿಂತಾಜನಕ ಸ್ಥಿತಿಯಲ್ಲಿ ಮಹಿಳೆಯನ್ನು ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೈಮೇಲೆ ದೈವ ಬಂದಂತೆ ಕೈಯಲ್ಲಿ ಕತ್ತಿ ಹಿಡಿದು ನರ್ತಿಸುತ್ತಿದ್ದ ಆರೋಪಿ ಲಕ್ಷ್ಮಣನನ್ನು ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟು ಬಂಧಿಸಿ ಎರಡೇಟು ಬಿಗಿದು ಹಿಡಿದ ಚಳಿಯನ್ನು ಬಿಡಿಸಿದ್ದಾರೆ. ಕಂಡ್ಲೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
Kundapura Udupi Man assaults wife with sickle, arrested by police. In a shocking incident, a man assaulted his wife with a sickle at Basrur under the Kandloor police station limits on Saturday night. The wife, seriously injured, has been admitted to the hospital. Anita (38), a native of Soraba, is the victim. Her husband, Laxmana (40), is the accused.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm