ಬ್ರೇಕಿಂಗ್ ನ್ಯೂಸ್
07-08-24 06:21 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್.7: ಮೂಲ್ಕಿ ಬಳಿಯ ಹೆಜಮಾಡಿ ಟೋಲ್ ಗೇಟ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿ ಪರಾರಿಯಾಗಿದ್ದ ಆರೋಪಿಯನ್ನು ಪಡುಬಿದ್ರೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ದ.ಕ. ಜಿಲ್ಲೆಯ ಬಂಟ್ವಾಳ ನಿವಾಸಿ ಸಲೀಂ ಬಂಧಿತ ಆರೋಪಿ. ಮಂಗಳವಾರ ಬೆಳಗ್ಗೆ ಮುಲ್ಕಿ ಕಡೆಯಿಂದ ಕಾರಿನಲ್ಲಿ ಹೆಜಮಾಡಿ ಟೋಲ್ ಗೇಟ್ ಗೆ ಬಂದಿದ್ದ ಸಲೀಂ, ಟೋಲ್ ಶುಲ್ಕ ನೀಡದೆ ಮುಂದೆ ಸಾಗಲು ಯತ್ನಿಸಿದ್ದಾನೆ. ಶುಲ್ಕ ವಿನಾಯಿತಿ ನೀಡಲು ಅವಕಾಶ ಇಲ್ಲ ಎಂದು ಅಲ್ಲಿನ ಸಿಬಂದಿ ಹೇಳಿದಾಗ, ಕಾರನ್ನು ಅಪಾಯಕಾರಿಯಾಗಿ ಮುಂದಕ್ಕೆ ಚಲಾಯಿಸಿದ್ದಾನೆ. ಅಲ್ಲದೆ, ಗೇಟು ದಾಟಿಸಿ ಕಾರಿನಿಂದ ಇಳಿದು ಅವಾಚ್ಯವಾಗಿ ನಿಂದಿಸಿ ಸಿಬಂದಿ ದೀಕ್ಷಿತ್ ಎಂಬವರ ಮೇಲೆ ಹಲ್ಲೆ ನಡೆಸಿದ್ದಾನೆ.
ಹಲ್ಲೆ ನಡೆಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಇದನ್ನು ಆಧರಿಸಿ ಟೋಲ್ ಗೇಟ್ ಸಿಬಂದಿ ದೀಕ್ಷಿತ್ ಪಡುಬಿದ್ರಿ ಪೊಲೀಸರಿಗೆ ದೂರು ನೀಡಿದ್ದಾರೆ. ಕಾರಿನ ನಂಬರ್ ಆಧರಿಸಿ ಚೆಕ್ ಮಾಡಿದಾಗ ಉಡುಪಿಯಲ್ಲಿ ನಡೆಯುತ್ತಿದ್ದ ಮದುವೆ ಹಾಲ್ ಹೊರಗಡೆ ಕಾರು ನಿಂತಿದ್ದು ಪತ್ತೆಯಾಗಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪಡುಬಿದ್ರೆ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Mangalore Hejamadi toll staff attacked over toll charges, arrested by police. The arrested has been identified as Salim from bantwal.
03-05-25 09:38 pm
HK News Desk
Shivanand Patil, U T Khader: ಯತ್ನಾಳ್ ಸವಾಲು ಸ್...
02-05-25 10:00 pm
U T Khader, Suhas Shetty Murder, Fazil, Manga...
02-05-25 08:44 pm
Suhas Shetty Murder case, Minister Parameshwa...
02-05-25 01:40 pm
Dinesh Gundu Rao, Suhas Shetty Murder: ಸುಹಾಸ್...
02-05-25 10:52 am
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
03-05-25 10:57 pm
Mangalore Correspondent
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
U T Khader, Satish Kumapla, Mangalore, Suhas,...
03-05-25 10:13 pm
Mangalore, Stabbing, Suhas Shetty Murder, Arr...
03-05-25 08:39 pm
Mangalore, Animal Welfare: ಪ್ರಾಣಿ ಸಂರಕ್ಷಣೆ ಜಾ...
03-05-25 06:57 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm