ಬ್ರೇಕಿಂಗ್ ನ್ಯೂಸ್
07-08-24 09:01 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್.7: ನಗರ ಹೊರವಲಯದ ಜೋಕಟ್ಟೆಯಲ್ಲಿ 14 ವರ್ಷದ ಬಾಲಕಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪಣಂಬೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ್ದಾನೆ ಎಂಬ ವಿಚಾರವನ್ನು ಪತ್ತೆ ಮಾಡಿದ್ದಾರೆ.
ಬೆಳಗಾವಿ ಜಿಲ್ಲೆ ಹಂಚಿನಾಳ ಗ್ರಾಮದ ಫಕೀರಪ್ಪ ಹಣಮಪ್ಪ ಮಾದರ (51) ಬಂಧಿತ ವ್ಯಕ್ತಿ. ಈತ ಮಂಗಳೂರಿನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದು, ಜೋಕಟ್ಟೆಯ ಬಾಡಿಗೆ ಮನೆಯಲ್ಲಿ ವಾಸವಿದ್ದ. ಮಂಗಳವಾರ ಬೆಳಗ್ಗೆ 14 ವರ್ಷದ ಬಾಲಕಿ ಒಬ್ಬಂಟಿ ಇರುವುದನ್ನು ತಿಳಿದು ಆಕೆಯನ್ನು ಬಲವಂತದಿಂದ ಅತ್ಯಾಚಾರಕ್ಕೆ ಯತ್ನಿಸಿದ್ದ. ಆಕೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಾನೆ.
ಬಾಲಕಿ ಕೊಣಾಜೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಏಳನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ಕೈ ನೋವೆಂದು ಚಿಕಿತ್ಸೆಗಾಗಿ ಜೋಕಟ್ಟೆಯಲ್ಲಿರುವ ತನ್ನ ಚಿಕ್ಕಪ್ಪ ಹನುಮಂತು ಅವರ ಮನೆಗೆ ಬಂದು ಉಳಿದುಕೊಂಡಿದ್ದಳು. ನಿನ್ನೆ ಬೆಳಗ್ಗೆ ಚಿಕ್ಕಪ್ಪ ಹನುಮಂತು ಮತ್ತು ಮನೆಯಲ್ಲಿದ್ದ ಇತರರು ಕೆಲಸಕ್ಕೆ ಹೋಗಿದ್ದರು. ಹುಡುಗಿ ಒಬ್ಬಂಟಿಯಾಗೇ ಇದ್ದಳು. ಇದೇ ವೇಳೆ, ಬೆಳಗಾವಿಯಲ್ಲಿರುವ ಬಾಲಕಿಯ ತಾಯಿ ಪಕ್ಕದ ಮನೆಯವರಿಗೆ ಫೋನ್ ಮಾಡಿ ಮಗಳಿಗೆ ಕೊಡುವಂತೆ ಹೇಳಿದ್ದರು. ಪಕ್ಕದ ಮನೆಯವರು ಬಂದು ನೋಡಿದಾಗ ಬಾಲಕಿಯನ್ನು ಕುತ್ತಿಗೆ ಬಿಗಿದು ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಬಾಲಕಿ ಕುಟುಂಬಸ್ಥರು ಬೆಳಗಾವಿ ಮೂಲದವಳೇ ಆಗಿದ್ದಾಳೆ.
ಪಣಂಬೂರು ಪೊಲೀಸರು ಮೇಲ್ನೋಟಕ್ಕೆ ಕೊಲೆಗೈದಿರುವುದನ್ನು ತಿಳಿದು ಕೊಲೆ ಪ್ರಕರಣ ದಾಖಲಿಸಿದ್ದರು. ಆಸುಪಾಸಿನವರನ್ನು ವಿಚಾರಣೆ ನಡೆಸಿದಾಗ, ಕೊಲೆ ಸುಳಿವು ಸಿಕ್ಕಿತ್ತು. ವಿಚಾರಣೆ ನಡೆಸಿದಾಗ ಆರೋಪಿ ಫಕೀರಪ್ಪ ಕೃತ್ಯ ಎಸಗಿರುವುದು ಕಂಡುಬಂದಿದೆ. ಫಕೀರಪ್ಪ ಆರು ತಿಂಗಳಿನಿಂದ ಜೋಕಟ್ಟೆ ಪರಿಸರದಲ್ಲಿ ಕೂಲಿ ಕಾರ್ಮಿಕನಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
The Panambur police arrested a 51-year-old accused, in connection with the murder of a 14-year-old girl from Belagavi in Jokatte. A complaint was filed by the girl's uncle, after she was found strangled to death on August 6 at around 10:30 am and a case had been registered at Panambur Police Station under Crime No. 67/2024.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm