ಬ್ರೇಕಿಂಗ್ ನ್ಯೂಸ್
12-08-24 09:37 pm Bangalore Correspondent ಕ್ರೈಂ
ಬೆಂಗಳೂರು, ಆ.13: ಆನ್‌ಲೈನ್ ವಂಚನೆಯಲ್ಲಿ ಹಣ ಕಳೆದುಕೊಂಡರೆ ಮತ್ತೆ ವಾಪಸ್ ಬರುವುದು ತೀರಾ ಅಪರೂಪ. ಆದರೆ, ಇಲ್ಲೊಂದು ಪ್ರಕರಣದಲ್ಲಿ ಬೆಂಗಳೂರು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಹೆಚ್ಚಿನ ಹಣವನ್ನು ವಸೂಲಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಂಗಳೂರಿನ ಟೆಕ್ಕಿ ದಂಪತಿ ಆನ್‌ಲೈನ್ ವಂಚನೆಯೊಂದರಲ್ಲಿ 1.53 ಕೋಟಿ ರೂ. ಕಳೆದುಕೊಂಡಿದ್ದರು. ಇದರಲ್ಲಿ ಹೆಚ್ಚಿನ ಹಣವನ್ನು ಅಂದರೆ 1.40 ಕೋಟಿ ರೂ.ಗಳನ್ನು 50ಕ್ಕೂ ಹೆಚ್ಚು ಖಾತೆಗಳಿಂದ ಪೊಲೀಸರು ವಸೂಲಿ ಮಾಡಿಕೊಟ್ಟಿದ್ದಾರೆ.
ಪೂರ್ವ ವಲಯದ ಸೈಬರ್ ಕ್ರೈಮ್ ಪೊಲೀಸರು ಆನ್‌ಲೈನ್ ಹೂಡಿಕೆ ಸ್ಕ್ಯಾಮ್‌ನಲ್ಲಿ ಹಣ ಕಳೆದುಕೊಂಡಿದ್ದ ಸಾಫ್ಟ್‌ವೇರ್ ಇಂಜಿನಿಯರ್ ದಂಪತಿಯ ಹಣವನ್ನು ವಸೂಲಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಂಗಳೂರಿನ ಬಾಣಸವಾಡಿಯಲ್ಲಿ ವಾಸಿಸುತ್ತಿರುವ ದಂಪತಿಗೆ ವಂಚಕನೊಬ್ಬ ಹೆಚ್ಚಿನ ಲಾಭದ ಆಸೆ ತೋರಿಸಿದ್ದ. ಇದನ್ನು ನಂಬಿ ದಂಪತಿ ಈತನ ವಂಚನೆ ಜಾಲಕ್ಕೆ ಬಿದ್ದಿದ್ದರು. ಬ್ರಿಟನ್‌ನಲ್ಲಿ ಕುಳಿತೇ ಈ ವಂಚನೆ ಜಾಲವನ್ನು ನಡೆಸುತ್ತಿದ್ದ ಈತ ಹಣ ಸ್ವೀಕರಿಸಲು ಉತ್ತರ ಭಾರತೀಯರ ಒಂದಿಷ್ಟು ಖಾತೆಗಳನ್ನು ಬಾಡಿಗೆಗೆ ಪಡೆದಿದ್ದ.
ಅಷ್ಟೇ ಅಲ್ಲ ಹೂಡಿಕೆ ನಿಜ ಎಂದು ಬಿಂಬಿಸಲು ಈತ ನಕಲಿ ವೆಬ್‌ಸೈಟ್ ಒಂದು ತೆರೆದು, ಇದರ ಆಕ್ಸೆಸ್ ಕೂಡ ನೀಡಿದ್ದ. ಇದರಲ್ಲಿ ತಮ್ಮ ಹೂಡಿಕೆ ಬೆಳೆಯುತ್ತಿರುವುದನ್ನು ಕಂಡು ದಂಪತಿ ಖುಷಿಯಾಗಿದ್ದರು. ಕೆಲವು ತಿಂಗಳ ನಂತರ ಒಂದಿಷ್ಟು ಹಣವನ್ನು ಹಿಂಪಡೆಯಲು ನೋಡಿದರೆ, ಹಣ ತೆಗೆಯಲು ಆಗುತ್ತಿರಲಿಲ್ಲ. ಅಷ್ಟೇ ಅಲ್ಲ ನಕಲಿ ವೆಬ್‌ಸೈಟ್‌ನ ಆಕ್ಸೆಸ್ ಕೂಡ ಹೋಯ್ತು. ಕೊನೆಗೆ ಅವರನ್ನು ಆ ವೆಬ್‌ಸೈಟ್ ಬ್ಲಾಕೇ ಮಾಡಿತು. ಅಷ್ಟೊತ್ತಿಗೆ ತಾವು ವಂಚನೆಗೆ ಸಿಲುಕಿರುವುದು ದಂಪತಿಗೆ ತಿಳಿಯಿತು.
ಆಗ ದಂಪತಿ ಹೋಗಿ ಪೊಲೀಸರಿಗೆ ದೂರು ನೀಡಿದರು. ಪೊಲೀಸರು ತನಿಖೆ ಆರಂಭಿಸಿದ್ದಲ್ಲದೆ ಬ್ಯಾಂಕ್ ಅಧಿಕಾರಿಗಳ ಜೊತೆ ಸೇರಿ ಈ ವಂಚನೆ ಜಾಲವನ್ನು ಪತ್ತೆ ಹಚ್ಚಿದರು. ಈ ಹಗರಣದಲ್ಲಿ ಭಾಗಿಯಾಗಿದ್ದ 50ಕ್ಕೂ ಹೆಚ್ಚು ಖಾತೆಗಳನ್ನು ಬ್ಲಾಕ್ ಮಾಡಿದರು. ತಕ್ಷಣ ಕಾರ್ಯಪ್ರವೃತ್ತವಾಗಿದ್ದರಿಂದ ಒಂದಿಷ್ಟು ಮೊತ್ತ ವಾಪಸ್ ಪಡೆಯಲು ಸಾಧ್ಯವಾಯಿತು.
A tech industry couple from Bengaluru has managed to recover a significant portion of the money they lost in an online trading scam, thanks to the quick action of the local police. The East Division Cybercrime Police in Bengaluru successfully reclaimed Rs 1.4 crore out of the Rs 1.53 crore that had been swindled from the couple.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm