ಬ್ರೇಕಿಂಗ್ ನ್ಯೂಸ್
18-08-24 10:24 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 18: ಮುಡಿಪು ಸಮೀಪದ ಮುದುಂಗಾರು ಕಟ್ಟೆ ಬಳಿ ಮಹಿಳೆಯೊಬ್ಬರ ಬಂಗಾರದ ಸರ ಕಸಿದು ಪರಾರಿಯಾಗಿದ್ದ ಆರೋಪಿಗಳನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ನರಿಂಗಾನ ಗ್ರಾಮದ ನವಾಝ್ ಯಾನೆ ನವ್ವ(32) ಹಾಗೂ ಮಹಮ್ಮದ್ ನಿಯಾಫ್ ಯಾನೆ ನಿಯಾ(28) ಎಂದು ಗುರುತಿಸಲಾಗಿದೆ.
ಮುದುಂಗಾರು ಕಟ್ಟೆ ಕಲ್ಲಾಪು ನಿವಾಸಿ ಯಮುನಾ ಎಂಬ ವೃದ್ಧ ಮಹಿಳೆ ಮೊನ್ನೆ ಶುಕ್ರವಾರ ಮುದುಂಗಾರು ಕಟ್ಟೆ ಶಾಲಾ ಹಿಂಭಾಗದಲ್ಲಿ ಸೊಪ್ಪು ಕೊಯ್ಯುತ್ತಿದ್ದಾಗ ಬೈಕ್ ನಲ್ಲಿ ಹೆಲ್ಮೆಟ್ ಧರಿಸಿ ಬಂದ ಇಬ್ಬರು ಆಗಂತುಕರು ಮಹಿಳೆಯ ಸುಮಾರು ಒಂದುವರೆ ಪವನ್ ತೂಕದ ಬಂಗಾರದ ಸರ ಕಸಿದು ಪರಾರಿಯಾಗಿದ್ದರು. ಈ ಸಂದರ್ಭದಲ್ಲಿ ಮಹಿಳೆ ಬೊಬ್ಬೆ ಹಾಕಿದ್ದರೂ ಸ್ಥಳದಲ್ಲಿ ಯಾರೂ ಇರಲಿಲ್ಲ. ಬಳಿಕ ಮಹಿಳೆಯ ಮನೆಯವರು ಕೊಣಾಜೆ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿದ್ದರು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದ್ದರು. ಸಿಸಿ ಟಿವಿಗಳ ಪರಿಶೀಲನೆ ವೇಳೆ ಕಳ್ಳರ ಸುಳಿವು ಸಿಕ್ಕಿತ್ತು.
ಕಳ್ಳತನ ನಡೆದ ಎರಡೇ ದಿನದಲ್ಲಿ ಕೊಣಾಜೆ ಪೊಲೀಸರಾದ ಪಿಎಸ್ಐ ವಿನೋದ್, ಸಿಬ್ಬಂದಿಗಳಾದ ಸಂತೋಷ್ ಕೆಸಿ, ಬಸವನ ಗೌಡ ಹಾಗೂ ಸುರೇಶ್ ಅವರು ಸರ ಕಳ್ಳತನ ನಡೆಸಿದ್ದ ಆರೋಪಿಗಳನ್ನು ಭಾನುವಾರ ಕೈರಂಗಳ ಗ್ರಾಮದ ವಿದ್ಯಾನಗರ ಬಸ್ ನಿಲ್ದಾಣದ ಬಳಿ ಬಂಧಿಸಿದ್ದಾರೆ. ಆರೋಪಿಗಳಿಂದ ಹತ್ತು ಗ್ರಾಂ ಬಂಗಾರ ಹಾಗೂ ಡಿಯೋ ಸ್ಕೂಟರನ್ನು ವಶಪಡಿಸಿಕೊಂಡಿಸಿದ್ದಾರೆ.
ಆರೋಪಿಗಳಲ್ಲಿ ನವಾಝ್ ಎಂಬಾತನ ವಿರುದ್ದ ಕೊಣಾಜೆ ಠಾಣೆಯಲ್ಲಿ ಈ ಹಿಂದೆ ದರೋಡೆ ಹಾಗೂ ಗಲಾಟೆ ಪ್ರಕರಣ ದಾಖಲಾಗಿತ್ತು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
Two arrested from Mangalore over chain snatching by police. The arrested have been identified as Nawaz and Niyab. They snatched the gold chain of 69 year old women who was walking on the road.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm